Politics: ಶಾಸಕ ಗಣಿಗರದ್ದು ಲಜ್ಜೆಗೇಡಿ ಹೇಳಿಕೆ: ಕಾರಜೋಳ
Team Udayavani, Oct 28, 2023, 10:15 PM IST
ಬೆಂಗಳೂರು: ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ಕಾಂಗ್ರೆಸ್ ಸರಕಾರ ಜನತೆಯ ವಿಶ್ವಾಸ ಕಳೆದುಕೊಂಡಿದ್ದು, ಶಾಸಕ ರವಿಕುಮಾರ್ ಗಣಿಗ ತಮ್ಮ ರೇಟ್ ಫಿಕ್ಸ್ ಮಾಡಿಕೊಳ್ಳುತ್ತಿರಬಹುದು. ಅವರ ಹೇಳಿಕೆ ಲಜ್ಜೆಗೇಡಿತನದ್ದು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಮಾಡಿರುವ ಆಪರೇಷನ್ ಕಮಲ ಆರೋಪಕ್ಕೆ ತಿರುಗೇಟು ನೀಡಿದ ಅವರು, ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದೇ ಒಂದು ಸರಕಾರ ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ಜನರ ವಿಶ್ವಾಸ ಕಳೆದುಕೊಂಡಿರಲಿಲ್ಲ. ಇಂತ ಹೀನ ಸ್ಥಿತಿ ಸಿದ್ದರಾಮಯ್ಯ ಸರಕಾರಕ್ಕೆ ಬರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಸಿದ್ದರಾಮಯ್ಯ ಮಂತ್ರಿಗಳ ಮನೆ ಮನೆಗೆ ಹೋಗಿ ವಿರೋಧ ಶಮನ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಡಾ| ಜಿ.ಪರಮೇಶ್ವರ ನಿವಾಸಕ್ಕೆ ಹೋಗಿದ್ದ ಸಿದ್ದರಾಮಯ್ಯ ತಮ್ಮ ತರುವಾಯ ನಿಮ್ಮನ್ನೇ ಸಿಎಂ ಮಾಡುವುದಾಗಿ ಆಶ್ವಾಸನೆ ನೀಡಿರುವ ಅನುಮಾನವಿದೆ ಎಂದರು.
ಕಳೆದ 75 ವರ್ಷಗಳಲ್ಲಿ ನಮ್ಮ ಸಮುದಾಯದ ಯಾರೊಬ್ಬರೂ ಮುಖ್ಯಮಂತ್ರಿಯಾಗಿಲ್ಲ. ಸಿದ್ದರಾಮಯ್ಯ ಪರಮೇಶ್ವರ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಮಾಡುವುದಾದರೆ ಸ್ವಾಗತ. ಊಟಕ್ಕೆ ಹೋಗುವ ಪದ್ಧತಿ ಎಲ್ಲ ಕಾಲದಲ್ಲಿ ನಡೆಯುತ್ತಿದೆ. ಕಾಂಗ್ರೆಸಿಗರು ಅಧಿಕಾರಕ್ಕೆ ಕಚ್ಚಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರೇಟ್ ಫಿಕ್ಸ್
ಶಾಸಕ ಗಣಿಗ ರವಿಯವರು ತಮ್ಮ ರೇಟ್ ಫಿಕ್ಸ್ ಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿರಬೇಕು. ಹರಾಜಿನಲ್ಲಿ ಸರಕಾರಿ ಸವಾಲ್ ರೀತಿ ದರ ನಿಗದಿ ಮಾಡಿಕೊಳ್ಳುತ್ತಿದ್ದಾರೆ. ಇಷ್ಟು ಲಜ್ಜೆಗೆಟ್ಟು ಹೇಳಿಕೆ ನೀಡಬಾರದು. ಅಭದ್ರತೆ ಇದ್ದರೆ ಪೊಲೀಸ್ ಠಾಣೆಗೆ ದೂರು ನೀಡಲಿ. ಶಾಸಕರಿಗೆ ಗೌರವ ಬರಬೇಕು, ಅನುದಾನ ಕೊಡಬೇಕು, ಶಿಫಾರಸು ಪತ್ರದಂತೆ ವರ್ಗಾವಣೆ ಆಗಬೇಕು. ಅದಕ್ಕಾಗಿ ಈ ರೀತಿ ಹೇಳಿಕೆ ಹರಿಬಿಡುತ್ತಿದ್ದಾರೆ. ಅವರದ್ದೇ ಸರಕಾರ ಇದೆ. ದೂರು ಕೊಟ್ಟು ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.
ಹರಾಜು ಪ್ರಕ್ರಿಯೆ ಆರಂಭವಾಗಿದೆ: ಬಿಜೆಪಿ ಟೀಕೆ
ಎಟಿಎಂ ಸರಕಾರದ ನಿಗಮ-ಮಂಡಳಿ ಹರಾಜು ಪ್ರಕ್ರಿಯೆ ಆರಂಭವಾಗಿದೆ. ಕಲೆಕ್ಷನ್ ಕೊಡಿ, ಸೀಟು ಪಡಿ. ಕಂತೆ ಕಂತೆ ತಂದವರಿಗೆ ಮೊದಲ ಆದ್ಯತೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಬಿಜೆಪಿ ಬಿಡಿಎ-50 ಕೋ. ರೂ., ಜಲಮಂಡಳಿ- 45 ಕೋ.ರೂ., ಕೆಆರ್‌ಐಡಿಎಲ್ 20 ಕೋ.ರೂ., ಕಿಯೋನಿಕ್ಸ್ 15 ಕೋ.ರೂ., ಉಗ್ರಾಣ ನಿಗಮ 12 ಕೋ.ರೂ., ಗೃಹ ಮಂಡಳಿ 10 ಕೋ. ರೂ. ಎಂದು ರೇಟ್ ಕಾರ್ಡ್ ಹಾಕಿದೆ. ಇದಕ್ಕೆ ಡಿ.ಕೆ.ಶಿವಕುಮಾರ್ ಅವರು ಹರಾಜು ಕೂಗುತ್ತಿರುವ ರೀತಿ ಕ್ರಿಯೇಟಿವ್ಸ್ ರೂಪಿಸಲಾಗಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕಕ್ಕೆ ಮಾರಿ, ಪರರಾಜ್ಯಗಳಿಗೆ ಉಪಕಾರಿ ಎಂದು ಟೀಕಿಸಿರುವ ಬಿಜೆಪಿ, ರಾಜ್ಯದಲ್ಲಿ ಬರವಿದೆ. ಆದರೆ ನೀವು ಎಷ್ಟು ಬಾರಿ ಪ್ರವಾಸ ಮಾಡಿದ್ದೀರಿ ಸ್ವಾಮಿ? ತೆಲಂಗಾಣ ಕಾಂಗ್ರೆಸಿಗರ ಮನೆಯಲ್ಲಿ ಐಟಿ ದಾಳಿ ವೇಳೆ ಹಣ ಸಿಕ್ಕಿ ಬಿದ್ದಿದೆ ಎಂದು ರಾಜ್ಯದಲ್ಲಿ ಕಲೆಕ್ಷನ್ ಮಾಡಿದ ಹಣ ತಲುಪಿಸಲು ಹೋಗಿದ್ದೀರಾ ? ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.