Yadgir: ಸ್ಪರ್ಧಾತ್ಮಕ ಪರೀಕ್ಷೆ ಬ್ಲೂಟುತ್ ಪ್ರಕರಣ: FIR ದಾಖಲು

09 ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ

Team Udayavani, Oct 28, 2023, 11:10 PM IST

Exam 2

ಯಾದಗಿರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯಾದಗಿರಿ ನಗರದ ನ್ಯೂ ಕನ್ನಡ ಪಿಯು ಕಾಲೇಜು, ಸಬಾ ಪಿ.ಯು ಕಾಲೇಜು, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಎಲ್.ಕೆ.ಇ.ಟಿ ಬಾಲಕಿಯರ ಪಿ.ಯು ಕಾಲೇಜು ಮತ್ತು ಮಹಾತ್ಮ ಗಾಂಧಿ ಪಿಯು ಕಾಲೇಜುಗಳಲ್ಲಿ ನಡೆದ ರಾಜ್ಯ ಸರಕಾರದ ವಿವಿಧ ಇಲಾಖೆಗಳ ಮತ್ತು ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ನಡೆಸಲಾಗುತ್ತಿತ್ತು.

ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಪೂರ್ವ ಯೋಜಿತವಾಗಿ ಸಂಚು ರೂಪಿಸಿ ಬಂದು ಪರೀಕ್ಷಾ ಕೇಂದ್ರದ ಒಳಗಡೆ ನಿಷೇಧಿಸಲ್ಪಟ್ಟ ಬ್ಲೂಟೂಥ್ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಇತರೆ ಸೂಕ್ಷ್ಮ ಉಪಕರಣಗಳನ್ನು ಉಪಯೋಗಿಸಿ ಹೊರಗಡೆ ಇರುವ ವ್ಯಕ್ತಿಗಳಿಂದ ಉತ್ತರಗಳನ್ನು ಹೇಳಿಸಿಕೊಂಡು ಅಕ್ರಮ ಮಾರ್ಗದಿಂದ ಪರೀಕ್ಷೆ ಬರೆದು ನೈಜ ಮತ್ತು ಆರ್ಹ ಅಭ್ಯರ್ಥಿಗಳಿಗೆ ಅನ್ಯಾಯವೆಸಗುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಅಂತಹ ಅಭ್ಯರ್ಥಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿ ಪರೀಕ್ಷಾ ಕೇಂದ್ರಗಳ ಉಪ-ಮುಖ್ಯಸ್ಥರುಗಳು ಯಾದಗಿರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ನೀಡಿದ ದೂರುಗಳ ಆಧಾರದ ಮೇರೆಗೆ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ, 109, 114, 120(ಬಿ), 420 ಸಂಗಡ 149 ಐಪಿಸಿ ರೀತ್ಯಾ 05 ಪ್ರಕರಣಗಳು ದಾಖಲಾಗಿದೆ ಎಂದು ಎಸ್.ಪಿ ತಿಳಿಸಿದ್ದಾರೆ.

ಅಕ್ರಮ ಎಸಗಿದ ಆರೋಪಿಗಳನ್ನು ದಸ್ತಗಿರಿ ಮಾಡುವ ಸಲುವಾಗಿ ಪೋಲಿ ವರಿಷ್ಠಾಧಿಕಾರಿ ಜಿ.ಸಂಗೀತಾ, ಚಾವೇದ ಇನಾಮದಾರ್, ಡಿ.ವೈ.ಎಸ್.ಪಿ ಸುರಪುರ ಉಪ-ವಿಭಾಗ ರವರ ನೇತೃತ್ವದಲ್ಲಿ ಯಾದಗಿರಿ ಹಾಗೂ ಸುರಪುರ ಉಪ-ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿರವರುಗಳನ್ನೊಳಗೊಂಡ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಸದರಿ ತನಿಖಾ ತಂಡಗಳು ಪೊಲೀಸ್‌ ಅಧೀಕ್ಷಕರಾದ ಜಿ.ಸಂಗೀತಾ ಅವರ ಮಾರ್ಗದರ್ಶನದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಲಬುರಗಿ ಜಿಲ್ಲೆಯ ಅಜ್ಜಲ್‌ಪುರ, ಹಾಗೂ ವಿಜಯಪುರ ಜಿಲ್ಲೆಯ ಒಟ್ಟು 09 ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಎಸ್.ಪಿ ಸಂಗೀತಾ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.