Puneeth Rajkumar; ಇಂದು ಅಪ್ಪು ಎರಡನೇ ವರ್ಷದ ಪುಣ್ಯಸ್ಮರಣೆ

Team Udayavani, Oct 29, 2023, 8:54 AM IST

puneeth rajkumar

ಅಕ್ಟೋಬರ್‌ 29, 2021- ಸಿನಿಪ್ರಿಯರಿಗೆ ಕರಾಳ ದಿನ. ಎಲ್ಲರೂ ಖುಷಿ ಖುಷಿಯಿಂದ ಇದ್ದ ಸಮಯದಲ್ಲಿ ಬಂದಂತಹ ಸುದ್ದಿಯೊಂದು ಬರಸಿಡಿಲಿನಂತೆ ಹೊಡೆಯಿತು. ಆ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಕಷ್ಟು ಸಮಯವೇ ಬೇಕಾಯಿತು. ಅದು ತಮ್ಮ ನೆಚ್ಚಿನ ನಟ ಇನ್ನಿಲ್ಲ ಎಂಬ ಸುದ್ದಿ. ಫಿಟ್‌ ಅಂಡ್‌ ಫೈನ್‌ ಆಗಿ, ಚಿತ್ರರಂಗಕ್ಕೆ ಬರುವ ನವ ನಟರಿಗೆಲ್ಲಾ ಬೆನ್ನು ತಟ್ಟುತ್ತಿದ್ದ ದೊಡ್ಮನೆಯ ಕುಡಿ, ಪುನೀತ್‌ ರಾಜ್‌ಕುಮಾರ್‌ ಇನ್ನಿಲ್ಲ ಎಂಬ ಸುದ್ದಿಯನ್ನು ಇವತ್ತಿಗೂ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಈ ಕಷ್ಟದಲ್ಲೇ ಪುನೀತ್‌ ರಾಜ್‌ಕುಮಾರ್‌ ನಮ್ಮನ್ನಗಲಿ ಇಂದಿಗೆ (ಅಕ್ಟೋಬರ್‌ 29ಕ್ಕೆ) ಎರಡು ವರ್ಷವಾಗುತ್ತದೆ. ಆದರೆ, ಈ ಎರಡು ವರ್ಷದಲ್ಲಿ ಕರುನಾಡು ಪುನೀತ್‌ ರಾಜ್‌ಕುಮಾರ್‌ ಅವರನ್ನು ನೆನೆಯದ ದಿನವಿಲ್ಲ. ಅವರ ಅಭಿಮಾನಿಗಳು ನೋವಿನಲ್ಲೇ ದಿನ ದೂಡುತ್ತಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಸಮಾಧಿಗೆ ಸತತ ಎರಡು ವರ್ಷದಿಂದ ಅಭಿಮಾನಿಗಳು ಭೇಟಿ ನೀಡುತ್ತಲೇ ಇದ್ದಾರೆ. ಅಭಿಮಾನಿಗಳಿಗೆ ಅದು ಸಮಾಧಿಯಲ್ಲ, ದೇವಸ್ಥಾನ. ನವಜೋಡಿಗಳಿಂದ ಹಿಡಿದು, ಮಗುವಿನ ನಾಮಕರಣವನ್ನೂ ಅಲ್ಲಿ ಮಾಡುತ್ತಿದ್ದಾರೆಂದರೆ ಅದಕ್ಕೆ ಕಾರಣ ಪುನೀತ್‌ ರಾಜ್‌ಕುಮಾರ್‌ ಮೇಲಿನ ಅಭಿಮಾನ. ಇಡೀ ಕರುನಾಡು ತನ್ನ ಮನೆಯ ಯಾರೋ ಸದಸ್ಯರನ್ನೇ ಕಳೆದುಕೊಂಡಂತಹ ದುಃಖ ಸಾಗರದಲ್ಲಿ ಮುಳುಗಿದೆ.

ಇದೇ ವೇಳೆ ಪುನೀತ್‌ ಪ್ರಚಾರದ ಹಂಗಿಲ್ಲದೇ ಮಾಡಿದ ಸಹಾಯಗಳು ಈ ಎರಡು ವರ್ಷದಲ್ಲಿ ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ. ಕನ್ನಡ ಚಿತ್ರರಂಗ ಕೂಡಾ ಪುನೀತ್‌ ನಿಧನದ ನಂತರ ಯಾವುದೇ ಸಿನಿಮಾದ ಟೀಸರ್‌, ಟ್ರೇಲರ್‌ನಲ್ಲಿ ಅವರ ಸ್ಮರಣೆ ಮಾಡದೇ ಮುಂದೆ ಹೋಗುತ್ತಿಲ್ಲ. ಜೊತೆಗೆ ಅನೇಕ ಅಭಿಮಾನಿಗಳು, ಸಿನಿಮಾ ಮಂದಿ ಪುನೀತ್‌ ರಾಜ್‌ಕುಮಾರ್‌ ಕುರಿತಾದ ಆಲ್ಬಂ ಹೊರತರುತ್ತಿದ್ದಾರೆ. ಸಾಕಷ್ಟು ಕಡೆಗಳಲ್ಲಿ ಪುನೀತ್‌ ಅವರ ಪುತ್ಥಳಿ ನಿರ್ಮಾಣ ವಾಗುತ್ತಿದೆ. ಅದೇನೇ ಆದರೂ ಪುನೀತ್‌ ಇಲ್ಲ ಎಂಬ ನೋವನ್ನು ಮಾತ್ರ ಹೃದಯದಿಂದ ಕಿತ್ತಾಕಲು ಯಾರಿಂದಲೂ ಸಾಧ್ಯವಿಲ್ಲ. ಅದೇ ನೋವಲ್ಲಿ ಅಭಿಮಾನಿಗಳು ಅಪ್ಪು ಸ್ಮರಣೆ ಮಾಡುತ್ತಿದ್ದಾರೆ.

ಇಂದು ಕುಟುಂಬದವರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಪುನೀತ್‌ ರಾಜ್‌ ಕುಮಾರ್‌ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಇಂದು ಅನ್ನಸಂತರ್ಪಣೆ, ನೇತ್ರದಾನ, ರಕ್ತದಾನ ಶಿಬಿರಗಳನ್ನು ಸಹ ಆಯೋಜನೆ ಮಾಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ. ಸದ್ಯ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ನಿರ್ಮಾಣ ಕಾರ್ಯ ಕೂಡಾ ನಡೆಯುತ್ತಿದೆ.

ಟಾಪ್ ನ್ಯೂಸ್

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.