World Cup; ರೋಹಿತ್ ಬಳಗ ಅಜೇಯ ಯಾತ್ರೆ: ಬಿಗು ದಾಳಿಗೆ ಶರಣಾದ ಇಂಗ್ಲೆಂಡ್
100 ರನ್ ಗಳ ಸ್ಮರಣೀಯ ಜಯ... ಸೆಮಿಗೆ ಪಕ್ಕಾ
Team Udayavani, Oct 29, 2023, 9:38 PM IST
ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಭಾರತ ಅಮೋಘ 100 ರನ್ ಗಳ ಗೆಲುವು ಸಾಧಿಸಿ, ವಿಜಯ ಯಾತ್ರೆ ಮುಂದುವರಿಸಿ ನಾಕೌಟ್ ಸ್ಥಾನ ಪಕ್ಕಾ ಮಾಡಿಕೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡ ಆರಂಭದಲ್ಲಿ ಆಘಾತಕ್ಕೆ ಸಿಲುಕಿತಾದರೂ ನಾಯಕ ರೋಹಿತ್ ಶರ್ಮ ಅವರ ಸಮಯೋಚಿತ ಆಟದ ನೆರವಿನಿಂದ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಪ್ರಯತ್ನದಿಂದ ಇಂಗ್ಲೆಂಡ್ ಗೆ ಗೆಲ್ಲಲು 230 ರನ್ ಗಳ ಗುರಿ ನೀಡಿತು.
ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಭಾರತದ ಬಿಗಿ ಬೌಲಿಂಗ್ ದಾಳಿಗೆ ನಲುಗಿ ಹೋಯಿತು. ವಿಶ್ವಕಪ್ ನ ನಿರೀಕ್ಷೆ ಕಳೆದುಕೊಂಡು ಮಂಕಾಯಿತು. 34.5 ಓವರ್ ಗಳಲ್ಲಿ 129 ರನ್ ಗಳಿಗೆ ವೈ ಆಲೌಟಾಗಿ ಇನ್ನೊಂದು ಸೋಲಿನ ಕಹಿ ಉಂಡಿತು.ಕ್ರಿಕೆಟ್ ಜನಕರು ಈ ಬಾರಿ ಭಾರಿ ನಿರಾಶೆಯಿಂದ ಮನೆಗೆ ಮರಳಬೇಕಾಗಿದೆ.
ಡೇವಿಡ್ ಮಲಾನ್ 16, ಜೋ ರೂಟ್ 14, ಬೆನ್ ಸ್ಟೋಕ್ಸ್ ಮತ್ತು ಜಾನಿ ಬೈರ್‌ಸ್ಟೋ ಶೂನ್ಯಕ್ಕೆ ಔಟಾದರು. ನಾಯಕ ಜೋಸ್ ಬಟ್ಲರ್ 10 ,ಮೊಯಿನ್ ಅಲಿ 15, ಕ್ರಿಸ್ ವೋಕ್ಸ್ 10 , ಲಿಯಾಮ್ ಲಿವಿಂಗ್‌ಸ್ಟೋನ್ 27 ,ಆದಿಲ್ ರಶೀದ್ 13 ರನ್ ಗಳಿಗೆ ಔಟಾದರು.ಡೇವಿಡ್ ವಿಲ್ಲಿ ಔಟಾಗದೆ 16 ರನ್ ಗಳಿಸಿದರು.
ಮತ್ತೆ ಶಮಿ ಮಿಂಚು
ವಿಶ್ವಕಪ್ ನಲ್ಲಿ ಮತ್ತೊಮ್ಮೆ ಬಿಗಿ ದಾಳಿ ನಡೆಸಿದ ವೇಗಿ ಮೊಹಮ್ಮದ್ ಶಮಿ 4 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತು ಗೆಲುವಿನಲ್ಲಿ ದೊಡ್ಡ ಪಾತ್ರ ವಹಿಸಿದರು. ಕುಲದೀಪ್ ಯಾದವ್ 2 ವಿಕೆಟ್ , ಜಡೇಜಾ ಒಂದು ವಿಕೆಟ್ ಪಡೆದರು.
6ರಲ್ಲಿ6 ಪಂದ್ಯ ಗೆದ್ದು 12 ಅಂಕಗಳೊಂದಿಗೆ +1.405 ರನ್ ರೇಟ್ ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಹೊಂದಿ ಸೆಮಿ ಫೈನಲ್ ಪ್ರವೇಶ ಖಚಿತ ಪಡಿಸಿಕೊಂಡಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ 6 ಪಂದ್ಯಗಳಲ್ಲಿ 5 ನೇ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದುಕೊಂಡಿದೆ. ಭಾರತವಿನ್ನು ಶ್ರೀಲಂಕಾ, ದಕ್ಷಿಣ ಆಫ್ರಿಕಾ ಮತ್ತು ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯಗಳನ್ನು ಆಡಲಿದೆ.
ಭಾರತಕ್ಕೆ ಆರಂಭಿಕ ಆಘಾತ
ಭಾರತ 40 ರನ್ ಆಗುವಷ್ಟರಲ್ಲಿ 3 ಪ್ರಮುಖ ವಿಕೆಟ್ ಗಳನ್ನು ಕಳೆದು ಕೊಂಡಿತು. ಶುಭಮನ್ ಗಿಲ್ 9, ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಔಟಾದರೆ ಕೊಹ್ಲಿ ಶೂನ್ಯಕ್ಕೆ ಔಟಾಗಿ ನಿರಾಶರಾದರು.ಭಾರತ ತಂಡದ ನಾಯಕನಾಗಿ ನೂರನೇ ಪಂದ್ಯವಾಡಿದ ರೋಹಿತ್ ಜವಾಬ್ದಾರಿಯುತ ಆಟವಾಡಿದರು. 87 ರನ್ ಗಳಿಸಿ ಔಟಾದರು. 101 ಎಸೆತಗಳಲ್ಲಿ 10 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನು ಬಾರಿಸಿದರು.
ಕೆ.ಎಲ್. ರಾಹುಲ್ 39 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಅವರು 49 ರನ್ ಗಳಿಸಿದ್ದ ವೇಳೆ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಅರ್ಧ ಶತಕ ವಂಚಿತರಾದರು. ಜಡೇಜಾ 8 ರನ್ , ಶಮಿ 1 ರನ್ ಗೆ ಔಟಾದರು. ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ 16, ಕುಲದೀಪ್ ಯಾದವ್ 9 ರನ್ ಗಳಿಸಿದರು. 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಲು ಶಕ್ತವಾಯಿತು.
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಡೇವಿಡ್ ವಿಲ್ಲಿ 3 ವಿಕೆಟ್ ಕಿತ್ತು ಮಿಂಚಿದರು. ಕ್ರಿಸ್ ವೋಕ್ಸ್, ಆದಿಲ್ ರಶೀದ್ ತಲಾ 2 ವಿಕೆಟ್ ಪಡೆದರೆ, ಮಾರ್ಕ್ ವುಡ್ 1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.