Kerala ಸ್ಫೋಟ: ರಾಜ್ಯದಲ್ಲಿ ಕಟ್ಟೆಚ್ಚರ
Team Udayavani, Oct 29, 2023, 10:20 PM IST
ಬೆಂಗಳೂರು: ಕೇರಳದ ಎರ್ನಾಕುಳಂನ ಕಳಮಶೆರಿಯಲ್ಲಿ ಸರಣಿ ಸ್ಫೋಟ ನಡೆದ ಬೆನ್ನಲ್ಲೇ ಬೆಂಗಳೂರು ಸಹಿತ ರಾಜ್ಯಾದ್ಯಂತ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ.
ಕೇರಳ ಗಡಿ ಕರಾವಳಿ ಭಾಗದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದ್ದಾರೆ. ಮತ್ತೂಂದೆಡೆ ನಗರದಲ್ಲೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ನಗರ ಪೊಲೀಸ್ ಆಯಕ್ತ ಬಿ. ದಯಾನಂದ ನಿರ್ದೇಶಿಸಿದ್ದಾರೆ. ರಾಜ್ಯ ಪೊಲೀಸ್ ಘಟಕಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ತಾಕೀತು ಮಾಡಿದೆ. ಕರ್ನಾಟಕ, ಉತ್ತರ ಪ್ರದೇಶ ಮತ್ತು ದಿಲ್ಲಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳಕ್ಕೆ ಹೊಂದಿಕೊಂಡಿರುವ ಮಂಗಳೂರಿನ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ. ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಯಾಣಿಕರನ್ನು ಮತ್ತು ಲಗೇಜ್ ಬ್ಯಾಗ್‌ಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನ ಬಂದವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ. ವಿಧಾನಸೌಧ, ಹೈಕೋರ್ಟ್‌ಗೂ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಗುಪ್ತಚರ ಸಂಸ್ಥೆಗಳೊಂದಿಗೆ ಪೊಲೀಸ್ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ಯಾವುದೇ ಮಾಹಿತಿಯನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.