Kerala Incident: ಕೇರಳ ಸರಣಿ ಸ್ಫೋಟ… ಮೃತರ ಸಂಖ್ಯೆ 3ಕ್ಕೆ ಏರಿಕೆ, ಇಂದು ಸರ್ವಪಕ್ಷ ಸಭೆ
Team Udayavani, Oct 30, 2023, 9:50 AM IST
ಕೊಚ್ಚಿ: ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ, ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಭಾನುವಾರ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸರಣಿ ಸ್ಫೋಟ ಸಂಭವಿಸಿ ಹಲವು ಮಂದಿ ಗಂಭೀರ ಗಾಯಗೊಂಡು ಕೇರಳದ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಇಬ್ಬರು ಭಾನುವಾರ ಮೃತಪಟ್ಟರೆ ಹನ್ನೆರಡು ವರ್ಷದ ಬಾಲಕಿ ಸೋಮವಾರ ಮುಂಜಾನೆ ಮೃತಪಟ್ಟಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ. ಘಟನೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಇಂದು ಸರ್ವಪಕ್ಷ ಸಭೆ:
ಕೇರಳದ ಎರ್ನಾಕುಲಂನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ತನಿಖೆಯನ್ನು 20 ಸದಸ್ಯರ ತಂಡ ನಡೆಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಎಫ್ಐಆರ್ ಕೂಡ ದಾಖಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಸರ್ವಪಕ್ಷ ಸಭೆ ನಡೆಯಲಿದ್ದು, ಸ್ಫೋಟದ ಹಿಂದಿರುವವರ ಪತ್ತೆಗೆ ಪ್ರಯತ್ನಿಸಲಾಗುವುದು ಎಂದು ವಿಜಯನ್ ಹೇಳಿದ್ದಾರೆ.
Kerala | One more dead in Kalamassery blast. The total death toll stands at 3. The 12-year-old girl was admitted to Ernakulam Govt Medical College on Oct 29. She suffered 95% burns and was being treated on a ventilator. Later she became unresponsive to medicines and died today at…
— ANI (@ANI) October 30, 2023
ಇದನ್ನೂ ಓದಿ: Raids: ಬೆಳ್ಳಂಬೆಳಗ್ಗೆ ರಾಮನಗರ, ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ… ದಾಖಲೆಗಳ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.