MLA ಎಚ್.ಡಿ. ರೇವಣ್ಣಗೆ ಮತ್ತೆ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ಆದೇಶ
Team Udayavani, Oct 30, 2023, 9:09 PM IST
ಬೆಂಗಳೂರು: ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್. ಡಿ. ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಸಲ್ಲಿಸಿರುವ ಅರ್ಜಿ ಸಂಬಂಧ ರೇವಣ್ಣ ಅವರಿಗೆ ಹೈಕೋರ್ಟ್ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಪರಾಜಿತ ಅಭ್ಯರ್ಥಿ ಜಿ. ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದಿಸಿ, ಈ ಪ್ರಕರಣದಲ್ಲಿ ರೇವಣ್ಣ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ, ಈವರೆಗೂ ಅವರಿಗೆ ಸಮನ್ಸ್ ಜಾರಿಯಾಗಿಲ್ಲ. ಆದ್ದರಿಂದ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿ ಮಾಡಲು ಆದೇಶಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರೇವಣ್ಣ ಸೇರಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಮತ್ತೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ನ.29ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ
Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.