ಕನ್ನಡ ಸಂಘ ಬಹ್ರೈನ್‌;ನೂತನ ಆಡಳಿತ ಮಂಡಳಿ ಪದಗ್ರಹಣ, ಸಾಂಸ್ಕೃತಿಕ ಕಾರ್ಯಕ್ರಮ


Team Udayavani, Oct 31, 2023, 12:42 PM IST

ಕನ್ನಡ ಸಂಘ ಬಹ್ರೈನ್‌;ನೂತನ ಆಡಳಿತ ಮಂಡಳಿ ಪದಗ್ರಹಣ, ಸಾಂಸ್ಕೃತಿಕ ಕಾರ್ಯಕ್ರಮ

ಬಹ್ರೈನ್‌:ಇಲ್ಲಿನ ಕನ್ನಡ ಸಂಘ ಬಹ್ರೈನ್‌ ವತಿಯಿಂದ ಇತ್ತೀಚೆಗೆ ಎರಡು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂರಾರು ಕನ್ನಡಿಗರು ಭಾಗವಹಿಸಿ ಸಂಭ್ರಮಕ್ಕೆ ಸಾಕ್ಷಿಯಾದರು. ಇಲ್ಲಿನ ಕನ್ನಡ ಭವನದಲ್ಲಿ ನೂತನವಾಗಿ ನಿರ್ಮಿಸಿರುವ ವಿಶ್ರಾಂತಿ ಕೊಠಡಿಯನ್ನು ಕರ್ನಾಟಕದ ಗ್ರಹ ಸಚಿವರಾದ ಡಾ| ಜಿ. ಪರಮೇಶ್ವರ್‌ ಅವರು ಲೋಕಾರ್ಪಣೆ ಗೊಳಿಸಿದರು.

ಕನ್ನಡ ಭವನದ ನಿರ್ಮಾಣಕ್ಕೆ ಧನ ಸಹಾಯವನ್ನು ನೀಡಿರುವ ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕ ರೊನಾಲ್ಡ್‌ ಕೊಲಾಸೋ ಅವರ ಹೆಸರನ್ನು ಈ ವಿಶ್ರಾಂತಿ ಕೊಠಡಿಗೆ ನೀಡಲಾಗಿದ್ದು ಸಮಾರಂಭದಲ್ಲಿ ಡಾ| ರೊನಾಲ್ಡ್‌ ಕೊಲಾಸೋ, ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕದ ಅನಿವಾಸಿ ಕನ್ನಡಿಗರ ಘಟಕದ ಮಾಜಿ ಉಪಾಧ್ಯಕ್ಷರೂ ಆಗಿರುವ ಡಾ| ಆರತಿ ಕೃಷ್ಣ , ಮಂಡ್ಯ ಶಾಸಕ ರವಿಕುಮಾರ್‌ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ ಮುಂತಾದವರು ಉಪಸ್ಥಿತರಿದ್ದರು. ಅದೇ ದಿನ ಸಂಜೆ ಇಲ್ಲಿನ ಪ್ರತಿಷ್ಠಿತ ಮೂವ್‌ ಎಂಡ್‌ ಪಿಕ್‌ ಹೊಟೇಲಿನಲ್ಲಿ ಅಮರನಾಥ್‌ ರೈ ಅವರ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಸಮಾರಂಭವು ವೈವಿಧ್ಯಮ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವರ್ಣರಂಜಿತವಾಗಿ ಜರಗಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಇಲ್ಲಿನ ಭಾರತೀಯ ರಾಯಭಾರಿ ವಿನೋದ್‌ .ಕೆ .ಜಾಕೋಬ್‌ ರವರು ಉಪಸ್ಥಿತರಿದ್ದರು. ಗಣ್ಯರ ಸಮ್ಮುಖದಲ್ಲಿ ಡಾ| ಜಿ. ಪರಮೇಶ್ವರ್‌ ಅವರು ನೂತನ ಆಡಳಿತ ಮಂಡಳಿಯ ಸದಸ್ಯರಿಗೆ ಗುರುತು ಪತ್ರವನ್ನು ನೀಡುವುದರೊಂದಿಗೆ ವಿದ್ಯುಕ್ತ ಪದಗ್ರಹಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಇಲ್ಲಿನ ಭಾರತೀಯ ರಾಯಭಾರಿ ವಿನೋದ್‌ ಕೆ.ಜಾಕೋಬ್‌ ರವರು ಕರ್ನಾಟಕ ರಾಜ್ಯದ ಹಿರಿಮೆ-ಗರಿಮೆಗಳ ಬಗ್ಗೆ ಮಾತನಾಡಿ ಕನ್ನಡ ಸಂಘದ ಕಾರ್ಯ ವೈಖರಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷರಾದ ಅಮರನಾಥ್‌ ರೈಯವರು ಪ್ರಾಸ್ತಾವಿಕ ಭಾಷಣ ಮಾಡಿ ಸಂಘ ಕಳೆದ ನಾಲ್ಕು ದಶಕಗಳಿಂದ ನಡೆದು ಬಂದ ಹಾದಿಯನ್ನು ವಿವರಿಸಿ ಸಂಘದ ಬೆಳವಣಿಗೆಗೆ ದುಡಿದಿರುವ ಎಲ್ಲರನ್ನು ಸ್ಮರಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದರು.

ಅಲ್ಲದೆ ಕನ್ನಡ ಭವನದ ಬಾಕಿ ಉಳಿದಿರುವ ಕಾಮಗಾರಿಯ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಅನುದಾನವನ್ನು ಕೋರಿ ಗ್ರಹಸಚಿವರಿಗೆ ಮನವಿ ಪತ್ರವನ್ನು ನೀಡಿದರು. ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದ ಸಚಿವರು, ಕನ್ನಡ ಸಂಘದ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕನ್ನಡ ಸಂಘದ ಬೆಳವಣಿಗೆಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಡಾ| ರಿಚರ್ಡ್‌ ಕೊಲಾಸೋ ಜೀವನಾಧಾರಿತ ಪುಸ್ತಕವನ್ನು ಅನಾವರಣಗೊಳಿಸಲಾಯಿತು. ಇದೇ ವೇಳೆ ಗಣ್ಯರನ್ನು ಸಮ್ಮಾನಿಸಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷರಾದ ಪ್ರದೀಪ್‌ ಶೆಟ್ಟಿ, ಸದಸ್ಯರಾದ ಹಾಜಿ ಅಬ್ದುಲ್‌ ರಜಾಕ್‌, ಆನಂದ್‌ ಲೋಬೊ ಅವರನ್ನು ಸಂಘಕ್ಕೆ ನೀಡಿರುವ ಕೊಡುಗೆಗಾಗಿ ಗೌರವಿಸಲಾಯಿತ. ಸಂಘದ ಪ್ರತಿಭಾವಂತ ಕಲಾವಿದರಿಂದ ಹಾಗೂ ನಾಡಿನ ಖ್ಯಾತ ಸುಜಯ್‌ ಶಾನಭಾಗ್‌ ತಂಡದಿಂದ ವೈವಿಧ್ಯಮಯವಾದ ನೃತ್ಯ ಪ್ರದರ್ಶನಗಳು ವೇದಿಕೆಯಲ್ಲಿ ಮೂಡಿಬಂದು ನೆರೆದ ಜನಸ್ತೋಮವನ್ನು ರಂಜಿಸಿತು. ಪ್ರಧಾನ ಕಾರ್ಯದರ್ಶಿ ರಾಮ್‌ ಪ್ರಸಾದ್‌ ಅಮ್ಮೆನಡ್ಕ ಸ್ವಾಗತಿಸಿ, ಸಂಧ್ಯಾ ಪೈ ಹಾಗೂ ಶಿವಾನಂದ್‌ ಪಾಟೀಲ್‌ ಸಹಕರಿಸಿದರು.

ವರದಿ: ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.