Politics; ಬಿಜೆಪಿ ನಾಯಕರು ಸರ್ಕಾರ ಪತನದ ಕನಸು ಕಾಣುತ್ತಿದ್ದಾರೆ: ರಾಮಲಿಂಗಾರೆಡ್ಡಿ
Team Udayavani, Oct 31, 2023, 4:11 PM IST
ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ವರ್ಸಸ್ ಉಪ ಮುಖ್ಯಮಂತ್ರಿ ಸಂಘರ್ಷವಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಯಾವ ಆಂತರಿಕ ಸಂಘರ್ಷವಿಲ್ಲ. ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರ ಪತನದ ಕನಸು ಕಾಣುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, ಇದೆಲ್ಲ ಮಾಧ್ಯಮ ಸೃಷ್ಟಿ. ಮಾಧ್ಯಮದವರು ಕೇಳುತ್ತಾರೆ ಎಂದು ಕೆಲವರು ಹೇಳುತ್ತಾರೆ.
ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ವಿಚಾರ ಪಾಪ ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಸೋತು ಸುಣ್ಣವಾಗಿರುವ ಬಿಜೆಪಿ ಮೊದಲು ವಿಪಕ್ಷ ನಾಯಕ ಮಾಡಿಕೊಳ್ಳಲು ಮುಂದಾಗಲಿ ಎಂದು ತಿರುಗೇಟು ನೀಡಿದರು.
ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ಸಮಸ್ಯೆಯಲ್ಲ, ಸರ್ಕಾರಕ್ಕೆ ಏನೂ ಆಗುವುದಿಲ್ಲ. ನಮ್ಮ ಸರ್ಕಾರ 10 ವರ್ಷ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆಯ ಉಸ್ತುವಾರಿ ನೀಡಿರುವುದಕ್ಕೆ ಅಸಮಧಾನವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನನಗೆ ಅಲ್ಲಿ ಏನು ತೊಂದರೆ ಇಲ್ಲ, ನನ್ನ ಕೆಲಸಕ್ಕೆ ಯಾರು ಅಡ್ಡಿ ಮಾಡಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ
Mangaluru: ಕಾಂಕ್ರೀಟ್ ರಸ್ತೆಯ ನಡುವೆ ಹಣ್ಣಿನ ಫಸಲು!
Mangaluru: ಕದ್ರಿ ಹಿಲ್ಸ್ ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.