China: ಚೀನ ಔಷಧಗಳಲ್ಲಿ ಹುಲಿ, ರೈನೋ ಭಾಗಗಳ ಬಳಕೆ!

ಪರಿಸರಾತ್ಮಕ ತನಿಖಾ ಸಂಸ್ಥೆಯ ವರದಿಯಲ್ಲಿ ಉಲ್ಲೇಖ- ಕಳ್ಳಮಾರ್ಗದಲ್ಲಿ ತರಿಸಿಕೊಂಡ ಪ್ರಾಣಿಗಳ ಹತ್ಯೆ ಮಾಡಿ ಬಳಕೆ

Team Udayavani, Nov 1, 2023, 1:07 AM IST

rhino tiger

ನಾಗಪುರ: ಚೀನದಿಂದ ಬರುವ ವಿವಿಧ ರೀತಿಯ ಔಷಧಗಳಲ್ಲಿ  ಅವಸಾನದ ಅಂಚಿನಲ್ಲಿರುವ ಪ್ರಾಣಿಗಳ ಅಂಗಾಂಗಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಶ ಬಯಲಾಗಿದೆ.

ಲಂಡನ್‌ ಮೂಲದ ಪರಿಸರಾತ್ಮಕ ತನಿಖಾ ಸಂಸ್ಥೆ (ಇಐಎ) ಈ ಬಗ್ಗೆ ತನಿಖೆ ನಡೆಸಿದ್ದು, ವರದಿಯೊಂದನ್ನು ಬಿಡುಗಡೆ ಮಾಡಿದೆ. ಚೀನದ ಒಟ್ಟು 72 ಕಂಪೆನಿಗಳು 88 ವಿವಿಧ ಔಷಧಿಗಳನ್ನು ತಯಾರು ಮಾಡಿವೆ. ಈ ಕಂಪೆನಿಗಳಿಗೆ ಚೀನದ ರಾಷ್ಟ್ರೀಯ ವೈದ್ಯಕೀಯ ವಸ್ತುಗಳ ಸಂಸ್ಥೆ(ಎನ್‌ಎಂಪಿಎ) ಪರವಾನಿಗೆ ನೀಡಿದೆ. ಈ ಔಷಧಗಳಲ್ಲಿ ಹುಲಿ, ಚಿರತೆ ಮತ್ತು ಘೇಂಡಾ ಮೃಗಗಳ   ಅಂಗಾಂಶಗಳನ್ನು ಬಳಕೆ ಮಾಡಲಾಗಿದೆ ಎಂದು ಇಐಎ ತಿಳಿಸಿದೆ.

ವಿಚಿತ್ರವೆಂದರೆ ಈ ಪ್ರಾಣಿಗಳನ್ನು ಕನ್ವೆನ್ಶನ್‌ ಆನ್‌ ಇಂಟರ್‌ನ್ಯಾಶನಲ್‌ ಟ್ರೇಡ್‌ ಇನ್‌    ಎಂಡೇಂಜರ್ಡ್‌   ಸ್ಪೀಸೀಸ್‌ ಆಫ್ ವೈಲ್ಡ್‌ ಫೌನಾ ಆ್ಯಂಡ್‌ ಫೌರಾ (ಸಿಟೀಸ್‌)ದ ಪಟ್ಟಿ 1ರಲ್ಲಿ ಸೇರಿಸಲಾಗಿದೆ. ಅಂದರೆ ಇವುಗಳನ್ನು ಅಂತಾರಾಷ್ಟ್ರೀಯ  ವಾಣಿಜ್ಯ ವ್ಯಾಪಾರಕ್ಕಾಗಿ ನಿರ್ಬಂಧಿಸಲಾಗಿದೆ.

ಚೀನದ ಈ ಫಾರ್ಮಸುಟಿಕಲ್‌ ಕಂಪೆನಿಗಳಲ್ಲಿ 62 ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಹೂಡಿಕೆ ಮಾಡಿವೆ. ಈ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳು ಆಸ್ಟ್ರೇಲಿಯಾ, ಕೆನಡಾ, ಐರೋಪ್ಯ  ಒಕ್ಕೂಟ, ಜಪಾನ್‌, ಸ್ವಿಟ್ಸ್‌ರ್ಲೆಂಡ್‌, ಇಂಗ್ಲೆಂಡ್‌ ಮತ್ತು ಅಮೆರಿಕದಲ್ಲಿ   ಮನೆಮಾತಾಗಿವೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಚೀನದ ಈ ಕಂಪೆನಿಗಳು ಹುಲಿ, ಚಿರತೆ, ಪಾಂಗೋಲಿನ್‌, ಘೇಂಡಾ ಮೃಗಗಳನ್ನು ಅಕ್ರಮವಾಗಿ ತರಿಸಿಕೊಳ್ಳಲಾಗುತ್ತಿದೆ. ಈ  ವಿಷಯದ  ಬಗ್ಗೆ ಚೀನ ಸರಕಾರ ಗಮನಹರಿಸಬೇಕಾಗಿದೆ ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಾಣಿಗಳ ಕಳ್ಳಸಾಗಣೆ

2000ರಿಂದ 2023ರವರೆಗೆ ಜಗತ್ತಿನಾದ್ಯಂತ 6,585 ಚಿರತೆಗಳ  ದೇಹದ  ಅಂಗಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿರತೆಗಳ   ಪೈಕಿ 6,428 ಏಷ್ಯಾದ ಬಿಗ್‌ ಕ್ಯಾಟ್‌ ರೇಂಜ್‌  ದೇಶಗಳಿಗೆ ಸೇರಿದವುಗಳಾಗಿವೆ. ಇದೇ ಅವಧಿಯಲ್ಲಿ 416 ಟನ್‌ ಪಾಂಗೋಲಿನ್‌ನ ಚಿಪ್ಪುಗಳು  ಮತ್ತು 10 ಟನ್‌ ಘೇಂಡಾಮೃಗಗಳ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. 2000ರಿಂದ  2023ರ ವರೆಗೆ 3,377 ಹುಲಿಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗಿದೆ. 2016ರಿಂದ 2019ರ ವರೆಗೆ  6 ಲಕ್ಷ ಪಾಂಗೋಲಿನ್‌ಗಳನ್ನು ಸಾಗಾಟ ಮಾಡಲಾಗಿತ್ತು.

 

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.