School: ಯಡಮೊಗೆ ಶಾಲೆಗೆ ಬೀಗ ಹಾಕದೆ ಹೋದ ಮುಖ್ಯ ಶಿಕ್ಷಕ!
Team Udayavani, Nov 1, 2023, 1:45 AM IST
ಸಿದ್ದಾಪುರ: ಬೈಂದೂರು ವಲಯದ ಯಡಮೊಗೆ ಗ್ರಾಮದ ಅಜ್ಜಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಗಳವಾರ ಸಂಜೆ ಶಾಲೆ ಮುಗಿಸಿ ಸಂಜೆ ಮನೆಗೆ ಹೋಗುವಾಗ ಬೀಗ ಹಾಕದೇ ಬಾಗಿಲು ತೆರೆದಿಟ್ಟು ಮನೆಗೆ ಹೋದ ಘಟನೆ ಮಂಗಳವಾರ ನಡೆದಿದೆ.
ಸ್ಥಳೀಯರು ಕೊಠಡಿಗೆ ಬೀಗ ಹಾಕದಿದ್ದನ್ನು ಗಮನಿಸಿ, ಫೋಟೋ ತೆಗೆದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಿದರು. ಸಾಮಾಜಿಕ ಜಾಲ ತಾಣದಲ್ಲಿಯೂ ಹರಿಯ ಬಿಟ್ಟರು.
ಅಜ್ಜಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲ. ಒಬ್ಬರು ಅತಿಥಿ ಶಿಕ್ಷಕರು ಮತ್ತು ಶಂಕರ ನಾಯ್ಕ ಅವರು ಪ್ರಭಾರ ಮುಖ್ಯ ಶಿಕ್ಷಕರಾಗಿದ್ದಾರೆ. ಪ್ರಭಾರ ಮುಖ್ಯ ಶಿಕ್ಷಕ ಶಂಕರ ನಾಯ್ಕ ಅವರು ಮೊದಲಿನಿಂದಲೂ ಅಜ್ಜಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸರಿಯಾಗಿ ಬರುತ್ತಿಲ್ಲ ಎನ್ನು ಆರೋಪ ಇದೆ. ಇದರ ಬಗ್ಗೆ ಯಡಮೊಗೆ ಗ್ರಾಮ ಸಭೆಯಲ್ಲಿ ಚರ್ಚೆ ಕೂಡ ನಡೆದಿತ್ತು. ಬೇಜವಾಬ್ದಾರಿ ತೋರಿದ ಪ್ರಭಾರ ಮುಖ್ಯ ಶಿಕ್ಷಕ ಶಂಕರ ನಾಯ್ಕ ಅವರನ್ನು ಕೆಲಸದಿಂದ ವಜಾಗೊಳಿಸಬೇಕು. ಇತಂಹವರಿಂದ ಸರಕಾರಿ ಶಾಲೆಯ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಆ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲ. ಒಬ್ಬರು ಅತಿಥಿ ಶಿಕ್ಷಕರು ಇರುವುದು. ಶಂಕರ ನಾಯ್ಕ ಈ ಪ್ರಭಾರ ಮುಖ್ಯ ಶಿಕ್ಷಕರು ಆಗಿದ್ದಾರೆ. ನಿರ್ಲಕ್ಷ್ಯ ತೋರಿದ್ದರಿಂದ ಪ್ರಭಾರ ಮುಖ್ಯ ಶಿಕ್ಷಕ ಶಂಕರ್ ನಾಯ್ಕ ಅವರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಬೈಂದೂರು ಬಿಇಒ ನಾಗೇಶ್ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.