![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 1, 2023, 2:19 PM IST
ಬೆಂಗಳೂರು: ಮಾನವ ಕಳ್ಳ ಸಾಗಣೆ ಮೂಲಕ ಬಾಂಗ್ಲಾದೇಶ ಹಾಗೂ ನೆರೆ ರಾಜ್ಯಗಳಿಂದ ಮಹಿಳೆಯರಿಗೆ ಉದ್ಯೋಗ ಕೊಡಿಸುವುದಾಗಿ ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 14 ಮಂದಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದು, 20 ಮಹಿಳೆಯರನ್ನು ರಕ್ಷಿಸಿದ್ದಾರೆ.
ಅ.1ರಿಂದ 30ರತನಕ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಬಾಗಲಗುಂಟೆ, ವರ್ತೂರು, ಕೆ.ಆರ್.ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಮಾನವ ಕಳ್ಳ ಸಾಗಣೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳುತ್ತಿದ್ದ ಜಾಲ ಪತ್ತೆಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಬಾಂಗ್ಲಾದೇಶ ಮೂಲದ ನಾಲ್ವರು, ಪಶ್ಚಿಮ ಬಂಗಾಳದ 11, ಕರ್ನಾಟಕದ ಮೂವರು, ತೆಲಂಗಾಣ ಹಾಗೂ ಉತ್ತರಾಖಂಡ್ ಮೂಲದ ತಲಾ ಒಬ್ಬ ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರಿಂದ 4 ದ್ವಿಚಕ್ರ ವಾಹನ, 1 ಕಾರು, 40 ಮೊಬೈಲ್‌ಗಳು, 2 ಲ್ಯಾಪ್‌ಟಾಪ್‌ಗ್ಳು, 3 ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.