Thieves: ಮೂವರು ವೃತ್ತಿಪರ ಸರ ಕಳ್ಳರ ಬಂಧನ
Team Udayavani, Nov 1, 2023, 2:29 PM IST
ಬೆಂಗಳೂರು: ಸರ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುಲಕೇಶಿನಗರ ನಿವಾಸಿಗಳಾದ ಜಬಿವುದ್ದೀನ್, ಮೊಹಮ್ಮದ್ ಬಂಧಿತರು.
ಆರೋಪಿಗಳಿಂದ 26.5 ಲಕ್ಷ ರೂ. ಮೌಲ್ಯದ 503 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ಜಬಿವುದ್ದೀನ್ ಮತ್ತು ಮೊಹಮ್ಮದ್ ಸಂಜೆ ವೇಳೆ ವಾಯುವಿಹಾರ ಮಾಡುವ ವೃದ್ಧರನ್ನು ಗುರಿಯಾಗಿಸಿಕೊಂಡು ಸರ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಆರೋಪಿಗಳು 12 ವರ್ಷಗಳಿಂದ ಸರ ಕಳವು ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ಹೇಳಿದರು. ಮತ್ತೂಂದು ಸರ ಕಳವು ಪ್ರಕರಣದಲ್ಲಿ ಜಗದೀಶ್ ಎಂಬಾತನನು ಬಂಧಿಸಲಾಗಿದೆ.
ಜಗದೀಶ್ ಬಂಧಿತ. ಆರೋಪಿ ಒಂಟಿಯಾಗಿ ಓಡಾಡುವ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದ. ಇತ್ತೀಚೆಗೆ ಕದ್ದ ಚಿನ್ನಾಭರಣಗಳನ್ನು ಅಡಮಾನ ಇಡಲು ಚಿನ್ನಾಭರಣ ಮಳಿಗೆಗೆ ಬಂದಿದ್ದಾನೆ. ಆದರೆ, ಅನುಮಾನಗೊಂಡ ಅಂಗಡಿ ಮಾಲಿಕ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶ್‌ನನ್ನು ಬಂಧಿಸಲಾಗಿದೆ. ಆರೋಪಿ 2014ರಿಂದಲೂ ಸರ ಕಳವು ಕೃತ್ಯ ಎಸಗುತ್ತಿದ್ದಾನೆ. ಆತನಿಂದ 6.5 ಲಕ್ಷರೂ. ಮೌಲ್ಯದ 122 ಗ್ರಾಂ ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರಲ್ಲಿ ವಂಚನೆ
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.