Moodabidri ಮಿಜಾರುಗುತ್ತು ಆನಂದ ಆಳ್ವರ ಅಂತ್ಯಕ್ರಿಯೆ
Team Udayavani, Nov 1, 2023, 11:41 PM IST
ಮೂಡುಬಿದಿರೆ: ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಅಂತ್ಯಕ್ರಿಯೆಯು ಮಿಜಾರಿನ ಸ್ವಗೃಹದ ವಠಾರದಲ್ಲಿ ಬುಧವಾರ ನಡೆಯಿತು.
ಬೆಳಗ್ಗೆ 9.30ರಿಂದ 11.45ರ ತನಕ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬಂಟ ಸಮುದಾಯದ ಸಕಲ ವಿಧಿವಿಧಾನಗಳನ್ನು ಪೂರೈಸಿದ ಅನಂತರ ಸ್ವಗೃಹದ ಹತ್ತಿರದ ತೋಟದಲ್ಲಿ ಪುತ್ರರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಟಲದಾಸ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದರು. ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಚೌಟರ ಅರಮನೆ ಕುಲದೀಪ, ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ ಕುಮಾರ್, ಧರ್ಮಗುರುಗಳಾದ ರೆ|ಫಾ| ಎಫ್.ಎಕ್ಸ್. ಗೋಮ್ಸ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್, ದ.ಕ. ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮಾಜಿ ಸಚಿವರಾದ ಕೆ. ಅಭಯಚಂದ್ರ, ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಬಿ. ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಐವನ್ ಡಿ’ಸೋಜಾ, ಕಾಂಗ್ರೆಸ್ ಮುಖಂಡರಾದ ರಕ್ಷಿತ್ ಶಿವರಾಮ್, ಜಯಶ್ರೀ ಅಮರನಾಥ ಶೆಟ್ಟಿ, ನಿಟ್ಟೆ ಸಮೂಹ ಸಂಸ್ಥೆಗಳ ಎನ್. ವಿನಯ ಹೆಗ್ಡೆ, ಉದ್ಯಮಿ ಶ್ರೀಪತಿ ಭಟ್, ಶಶಿಧರ್ ಶೆಟ್ಟಿ ಬರೋಡಾ, ಎಂ.ಆರ್. ಅರವಿಂದ ಪೂಂಜಾ, ಶಕ್ತಿ ಕಾಲೇಜಿನ ಕೆಸಿ ನಾೖಕ್, ಜಾಗತಿಕ ಬಂಟ್ಸ್ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ, ಪಳ್ಳಿ ಕಿಶನ್ ಹೆಗ್ಡೆ, ಮಂಗಳೂರು ವಿ.ವಿ.ಯ ಡಾ| ಕಿಶೋರ ಕುಮಾರ್, ಪ್ರಮುಖರಾದ ಬೃಜೇಶ್ ಚೌಟ, ಕೋಟಿಪ್ರಸಾದ್ ಆಳ್ವ, ಆಳ್ವಾಸ್ ಸಂಸ್ಥೆಯ ಉದ್ಯೋಗಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಸಂತಾಪ ಸೂಚಕವಾಗಿ ಮಿಜಾರು ತೋಡಾರಿನ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಅರ್ಧ ದಿನದ ವರೆಗೆ ಮುಚ್ಚಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.