Kannada: ಗಡಿನಾಡ ಕನ್ನಡಿಗರಿಗಾಗಿ ತೋರಬೇಕಿದೆ ಮತ್ತಷ್ಟು ಕಾಳಜಿ
Team Udayavani, Nov 1, 2023, 11:50 PM IST
ಕರ್ನಾಟಕದ 19 ಜಿಲ್ಲೆಗಳು ಹಾಗೂ 3 ತಾಲೂಕುಗಳಿಗೆ ವ್ಯಾಪಿಸಿರುವ ಕರ್ನಾಟಕದ ಗಡಿ ಭಾಗಗಳು ಹಾಗೂ ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿನ ಗಡಿ ಭಾಗಗಳಲ್ಲಿ ತಮ್ಮ ಬದುಕು ರೂಪಿಸಿಕೊಂಡಿರುವ ಕನ್ನಡಿಗರಿಗೆ ಸಂಘ ಸಂಸ್ಥೆಗಳಿಗೆ ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಗತ್ಯವಾದ ಮೂಲಸೌಲಭ್ಯಗಳನ್ನು ಒದಗಿಸು ವುದರ ಜತೆಗೆ ಅಲ್ಲಿನ ಜನರಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ, ಅಭಿಮಾನ ಮತ್ತು ಗೌರವ ಮೂಡುವಂತೆ ಮಾಡುವ ದಿಸೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಅಲ್ಲಿಂದ ಇಲ್ಲಿಯವರೆಗೆ ತನ್ನ ಆರ್ಥಿಕ ಇತಿಮಿತಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಾ ಬಂದಿದೆ.
ಕೇರಳದ ಕಾಸರಗೋಡುವಿನಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಾನ್ಯತೆ ನೀಡಬೇಕು, ಅಲ್ಲಿನ ದೈನಂದಿನ ವ್ಯವಹಾರವೂ ಕನ್ನಡದಲ್ಲೇ ನಡೆಯಬೇಕು ಎಂಬುದು ನನ್ನ ಒತ್ತಾಸೆಯಾಗಿದ್ದು, ಇದಕ್ಕೆ ಅಲ್ಲಿನ ಕೇರಳ ಸರಕಾರವೂ ಸ್ಪಂದಿಸಿತ್ತು. ಆದರೆ ಅನಂತರದಲ್ಲಿ ಸಂಪೂರ್ಣವಾಗಿ ಜಾರಿಗೆ ಬರಲಿಲ್ಲ. ಮಲಯಾಳ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರಕಾರಿ ಉದ್ಯೋಗ ಎಂಬುದೂ ಕನ್ನಡಿಗರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಜತೆಗೆ ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಹೆಸರನ್ನು ಏಕಾಏಕಿ ಬದಲಾವಣೆ ಮಾಡಿದ ವಿಷಯವೂ ತುಂಬಾ ಆತಂಕಕಾರಿಯಾಗಿದೆ.
ಮಹಾರಾಷ್ಟ್ರವು ಪದೇ ಪದೆ ರಾಜ್ಯದಲ್ಲಿನ 865 ಗ್ರಾಮಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹುನ್ನಾರ ಮಾಡುತ್ತಲೇ ಇದೆ. ಮಹಾರಾಷ್ಟ್ರದ ಈ ಪುಂಡಾಟಕ್ಕೆ ತಡೆ ತರಬೇಕಾದ ಅಗತ್ಯತೆ ಇದ್ದು, ಸರಕಾರ ಸದಾ ಎಚ್ಚರದಿಂದ ಇರಬೇಕಾಗಿದೆ.
ಗೋವಾದಲ್ಲಿ ಸಮುದ್ರ ತೀರದಲ್ಲಿದ್ದ ಸಾವಿರಾರು ಕನ್ನಡಿಗರ ವಸತಿ ಪ್ರದೇಶ ನಾಶ ಮಾಡಿ ಗೋವಾ ಸಮಗ್ರ ನಿರ್ಮಾಣದಲ್ಲಿ ತಮ್ಮ ಶ್ರಮವನ್ನು ಧಾರೆ ಎರದಿದ್ದ ಅಲ್ಲಿನ ಕನ್ನಡಿಗರನ್ನು ನಿರ್ವಸಿತರನ್ನಾಗಿ ಮಾಡಿರುವ ಸಮಸ್ಯೆ ಇನ್ನು ಜೀವಂತವಾಗಿದೆ. ಅವರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ಅಲ್ಲಿನ ಸರಕಾರದಿಂದ ಆಗಬೇಕಿದೆ.
ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕನ್ನಡಿಗರಿಗೆ ಅಂಥ ಭಾಷಾ ಅಭದ್ರತೆ ಕಾಣಿಸದಿದ್ದರೂ, ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಈ ಬಗ್ಗೆ ಅಲ್ಲಿನ ಸರಕಾರಗಳು ಗಮನಹರಿಸಬೇಕಾಗಿದೆ.
ಮಹಾರಾಷ್ಟ್ರದ ಮುಂಬಯಿಯಲ್ಲಿ ಹಾಗೂ ಗೋವಾದಲ್ಲಿ ಅನೇಕ ಕನ್ನಡ ಸಂಘಗಳು ಕನ್ನಡ ಪರ ಕಾರ್ಯಕ್ರಮಗಳನ್ನು ಅತ್ಯಂತ ಬೃಹತ್ ಮಟ್ಟದಲ್ಲಿ ಆಯೋಜಿಸುತ್ತಾ ಅಲ್ಲಿನ ಕನ್ನಡಿಗರ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವುದು ತುಂಬಾ ಸ್ವಾಗತಾರ್ಹ ವಿಷಯ ವಾಗಿದೆ.
ಕರ್ನಾಟಕ ಹೆಸರು ನಾಮಕರಣವಾದ ಈ ಸಂತಸದ ಸಂಭ್ರಮದಲ್ಲಿ ಆರು ರಾಜ್ಯಗಳ ಗಡಿ ನಾಡ ಕನ್ನಡಿಗರ ಒಂದು ಬೃಹತ್ ಸಮಾವೇಶ ವನ್ನು ಸರಕಾರ ಆಯೋಜಿಸುವುದು ಸೂಕ್ತ ವಾಗಿದೆ ಹಾಗೂ ಗಡಿನಾಡ ಕನ್ನಡದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರು ತಿಂಗಳುಗಳಿಗೊಮ್ಮೆ ಸಮಾಲೋಚನ ಸಭೆಯನ್ನು ನಡೆಸುವುದು ಸೂಕ್ತವಾಗಿರುತ್ತದೆ.
ಡಾ| ಸಿ. ಸೋಮಶೇಖರ, ಮಾಜಿ ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.