Adam Biddappa: ಬೆದರಿಕೆ; ಆ್ಯಡಂ ಬಿದ್ದಪ್ಪ ವಿರುದ್ಧ ಕೇಸ್
Team Udayavani, Nov 2, 2023, 10:18 AM IST
ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇಲೆ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ಸೋಮನ್ ಬಿದ್ದಪ್ಪ ವಿರುದ್ಧ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅವಹೇಳನಕಾರಿಯಾಗಿ ನಿಂದಿಸಿ, ಧರ್ಮದ ಬಗ್ಗೆ ಕೆಟ್ಟ ಪದಗಳಿಂದ ಅವಮಾನ ಮಾಡಿದ್ದಾರೆ ಎಂದು ಯಲಹಂಕ ನ್ಯೂಟೌನ್ ಠಾಣೆ ಎಎಸ್‌ಐ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಇದೇ ಠಾಣೆಯಲ್ಲಿ ಅ.25ರಂದು ಅತೀ ವೇಗದ ಕಾರು ಚಾಲನೆ ಹಾಗೂ ರಾಹುಲ್ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಅಡಿ ಆ್ಯಡಂ ಸೋಮನ್ ಬಿದ್ದಪ್ಪವಿರುದ್ಧ ಪ್ರಕರಣ ದಾಖಲಾಗಿತ್ತು. ಬಂದಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.ಅ. 25ರಂದು ಆ್ಯಡಂ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಹೋಗಿ ಆ್ಯಡಂ ರಾಹುಲ್‌ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದ. ಈ ಸಂಬಂಧ ಬಂಧಿಸಲಾಗಿತ್ತು. ಇದೇ ವೇಳೆ ಎಎಸ್‌ಐಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.