Indian Student: ಅಮೆರಿಕದಲ್ಲಿ ಚೂರಿ ಇರಿತಕ್ಕೆ ಒಳಗಾದ ಭಾರತೀಯ ವಿದ್ಯಾರ್ಥಿಯ ಸ್ಥಿತಿ ಗಂಭೀರ
Team Udayavani, Nov 2, 2023, 1:23 PM IST
ವಾಷಿಂಗ್ಟನ್ : ಕಳೆದ ಭಾನುವಾರ ಅಮೆರಿಕದ ಇಂಡಿಯಾನಾ ರಾಜ್ಯದ ಫಿಟ್‌ನೆಸ್ ಸೆಂಟರ್‌ನಲ್ಲಿ ಚೂರಿ ಇರಿತಕ್ಕೆ ಒಳಗಾದ 24 ವರ್ಷದ ಭಾರತೀಯ ವಿದ್ಯಾರ್ಥಿ ಪಿ ವರುಣ್ ರಾಜ್ ಅವರ ಸ್ಥಿತಿ ಗಂಭೀರವಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೆಲಂಗಾಣ ಮೂಲದ ಪಿ. ವರುಣ್ ರಾಜ್ ಎಂಬ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯನ್ನು ಭಾನುವಾರ ಬೆಳಿಗ್ಗೆ ಜಿಮ್ ವೊಂದರಲ್ಲಿ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್ (24) ಎಂಬಾತ ಚಾಕುವಿನಿಂದ ಇರಿದಿದ್ದಾನೆ ಗಂಭೀರ ಗಾಯಗೊಂಡಿದ್ದ ವರುಣ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಮೂರು ದಿನಗಳ ಚಿಕಿತ್ಸೆಯ ನಂತರ, ವರುಣ್ ವೆಂಟಿಲೇಟರ್ ಸಹಾಯದಿಂದ ಉಸಿರಾಡುತಿದ್ದಾನೆ ಎನ್ನಲಾಗಿದೆ. ಚಾಕು ಇರಿತದಿಂದ ನರಕ್ಕೆ ತೀವ್ರ ತರನಾದ ಘಾಸಿಯಾಗಿದ್ದು ಪರಿಣಾಮ ಶಾಶ್ವತ ಅಂಗವೈಕಲ್ಯವನ್ನು ಹೊಂದುವ ಅಥವಾ ದೃಷ್ಟಿ ನಷ್ಟಹೊಂದುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆಯ ನಂತರ ಆರೋಪಿ ಜೋರ್ಡಾನ್ ಆಂಡ್ರೇಡ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯ ವರುಣ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಫೋರ್ಟ್ ವೇನ್‌ನಲ್ಲಿರುವ ಲುಥೆರನ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ: Israel Hamas War; ಇಸ್ರೇಲ್ ಗೆ ಸರಿಯಾದ ಪಾಠ ಕಲಿಸುತ್ತೇವೆ: ಹಮಾಸ್ ಎಚ್ಚರಿಕೆ
We will do our best to support Varun with the help of Indian embassy and also the Telangana NRI friends
Will have my team @KTRoffice get in touch with the family https://t.co/edV1mP5wez
— KTR (@KTRBRS) November 1, 2023
ಇತ್ತ ವರುಣ್ ಕುಟುಂಬಕ್ಕೆ ಯುಎಸ್ಎಗೆ ತೆರಳಲು ತೆಲಂಗಾಣ ಸಚಿವ ಕೆಟಿ ರಾಮರಾವ್ ನೆರವಾಗಿದ್ದಾರೆ ಅಲ್ಲದೆ ವರುಣ್ ಕುಟುಂಬಕ್ಕೆ ಸಂಪೂರ್ಣ ಸಹಾಯ ಮಾಡುವ ಭರವಸೆಯನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.