Teachers: ಶಿಕ್ಷಕರ 13 ಬೇಡಿಕೆ ಈಡೇರಿಕೆ ಬಗ್ಗೆ ಸಿಎಂ ಜೊತೆಗೆ ಚರ್ಚೆ: ಮಧು
Team Udayavani, Nov 2, 2023, 10:27 PM IST
ಬೆಂಗಳೂರು: ಶಿಕ್ಷಕರ ಸಂಘದ ಹದಿಮೂರು ಬೇಡಿಕೆಗಳ ಈಡೇರಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಶ್ವಾಸನೆ ಕೊಟ್ಟಿದ್ದಾರೆ.
ರಾಜ್ಯ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಶಿಕ್ಷಕರ ಸಂಘದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ 13 ಬೇಡಿಕೆಗಳ ಈಡೇರಿಕೆ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪ್ರಾಥಮಿಕ ಶಾಲೆಗಳಲ್ಲಿ 15 ರಿಂದ 20 ವರ್ಷ ಸೇವೆ ಸಲ್ಲಿಸಿದ ಪದವೀಧರ ಶಿಕ್ಷಕರ ಸೇವಾ ಜೇಷ್ಠತೆ ಸಂರಕ್ಷಿಸಿ, 6 ರಿಂದ 8ಕ್ಕೆ ನಿಯುಕ್ತಿಗೊಳಿಸುವುದು ಜಿಲ್ಲಾ ಮತ್ತು ತರಬೇತಿ ಸಂಸ್ಥೆಗಳಲ್ಲಿರುವ ಹೆಚ್ಚುವರಿ ಹುದ್ದೆ ನಿಯುಕ್ತಿಗೊಳಿಸುವುದು ಸೇರಿದಂತೆ ಸಂಘದ 13 ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕ, ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಹಾಗೂ ಪ್ರೌಢ ಶಾಲೆಗೆ ಬಡ್ತಿ ನೀಡುವ ಕೆಲಸವನ್ನು ನವೆಂಬರ್ ಅಂತ್ಯದಲ್ಲಿ ಪೂರ್ಣಗೊಳಿಸಬೇಕು. ಸಮಸ್ತ ಶಿಕ್ಷಕರಿಗೆ ಬೇಕಾದ ವೈದ್ಯಕೀಯ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸುವುದು, ರಾಜ್ಯಾದ್ಯಂತ ಮಧ್ಯಂತರ ರಜೆ ಹಾಗೂ ಬೇಸಿಗೆ ರಜೆಗಳಲ್ಲಾದ ವ್ಯತ್ಯಾಸವನ್ನು ಸರಿಪಡಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸಂಘದ ಪದಾಧಿಕಾರಿಗಳು ಸಚಿವರಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.