Crime: ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಸೆರೆ
Team Udayavani, Nov 3, 2023, 12:51 AM IST
![arrest 3](https://www.udayavani.com/wp-content/uploads/2023/11/arrest-3-620x372.jpg)
![arrest 3](https://www.udayavani.com/wp-content/uploads/2023/11/arrest-3-620x372.jpg)
ಸುಬ್ರಹ್ಮಣ್ಯ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸುಬ್ರಹ್ಮಣ್ಯ ಪೊಲೀಸರು ಬೆಳ್ಳಾರೆಯ ಯುವಕನನ್ನು ಬಂಧಿಸಿದ್ದಾರೆ.
ಬೆಳ್ಳಾರೆಯ ಅಟೋ ಚಾಲಕ ಮಹೇಶ್ ಬಂಧಿತ ಆರೋಪಿ. ಪಂಜದ ಬಾಲಕಿಯನ್ನು ಆಟೋ ಚಾಲಕ ಮಹೇಶ್ ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡ ಬಗ್ಗೆ ಆರೋಪಿಸಲಾಗಿದೆ. ಇದರಿಂದ ಮನನೊಂದ ಆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.