![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 3, 2023, 8:57 AM IST
ಗಾಜಾ ಪಟ್ಟಿ: ಹಮಾಸ್ ಭಯೋತ್ಪಾದಕರನ್ನು ಸೆದೆಬಡಿಯುವ ನಿಟ್ಟಿನಲ್ಲಿ ಇಸ್ರೇಲ್ ಸೇನೆ ತನ್ನ ದಾಳಿಯನ್ನು ಮುಂದುವರೆಸಿದ್ದು ಇದರ ಮುಂದುವರೆದ ಭಾಗವಾಗಿ ಇಸ್ರೇಲ್ ಸೇನೆ ಹಮಾಸ್ ನಿಯಂತ್ರಣದಲ್ಲಿರುವ ಗಾಜಾ ನಗರವನ್ನು ಸಂಪೂರ್ಣವಾಗಿ ಸುತ್ತುವರೆದಿದೆ ಎಂದು ಹೇಳಿಕೊಂಡಿದೆ.
ಹಮಾಸ್ ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಮುಂದುವರೆಸಿದ್ದು ಹಮಾಸ್ ಭಯೋತ್ಪಾದಕರ ಅಡಗು ತಾಣಗಳನ್ನು ಹೊಡೆದುರುಳಿಸುವ ಕಾರ್ಯಕ್ಕೆ ಮುಂದಾಗಿದೆ, ಹಾಗಾಗಿ ದಿನದಿಂದ ದಿನಕ್ಕೆ ಇಸ್ರೇಲ್ ಸೇನೆ ತನ್ನ ಕಾರ್ಯ ಚಟುವಟಿಕೆಯನ್ನು ಮುಂದುವರೆಸುತ್ತಲೇ ಇದೆ. ಗುರುವಾರ ಇಸ್ರೇಲ್ ಸೇನೆ ಹಮಾಸ್ ನಿಯಂತ್ರಣದಲ್ಲಿರುವ ಗಾಜಾ ನಗರವನ್ನು ಸುತ್ತುವರೆದಿದ್ದು ದಾಳಿಯನ್ನು ಮುಂದುವರೆಸುವ ಸೂಚನೆಯನ್ನು ನೀಡಿದೆ. ಇದರಿಂದ ಸದ್ಯಕ್ಕೆ ಇಸ್ರೇಲ್ ಹಮಾಸ್ ಭಯೋತ್ಪಾದಕರನ್ನು ಮಟ್ಟ ಹಾಕುವ ವರೆಗೆ ವಿರಮಿಸುವುದಿಲ್ಲ ಎಂಬ ಸಂದೇಶ ಸಾರಿದಂತಾಗಿದೆ.
ಹಮಾಸ್ ಭಯೋತ್ಪಾದಕ ಸಂಘಟನೆಯ ಕೇಂದ್ರವಾಗಿರುವ ಗಾಜಾ ನಗರವನ್ನು ಇಸ್ರೇಲಿ ಭೂಸೇನೆಯ ಸೈನಿಕರು ಪೂರ್ಣಗೊಳಿಸಿದ್ದಾರೆ ಎಂದು ಇಸ್ರೇಲ್ ಸೇನೆಯ ವಕ್ತಾರ ಡೇನಿಯಲ್ ಹಗಾರಿ ತಿಳಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಟಿವಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ ಹಮಾಸ್ ಗಾಜಾ ಪಟ್ಟಿಯೊಳಗೆ ಪ್ರವೇಶಿಸಿದ ಇಸ್ರೇಲ್ ಪಡೆಗಳನ್ನು ಕಪ್ಪು ಚೀಲದೊಳಗೆ ಹಾಕಿ ಇಸ್ರೇಲ್ ಗೆ ಕಳುಹಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇದರ ನಡುವೆ ಯುಎಸ್ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಮತ್ತೊಮ್ಮೆ ಮಧ್ಯಪೂರ್ವ ರಾಷ್ಟ್ರಗಳಿಗೆ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದು, ಗಾಜಾದಲ್ಲಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಾನಿಯನ್ನು ತಗ್ಗಿಸಲು ತೆಗೆದುಕೊಳ್ಳಬೇಕಾದ ಸಮಗ್ರ ಕ್ರಮಗಳ ಬಗ್ಗೆ ನಾವು ಮಾತನಾಡುತ್ತೇವೆ ಎಂದಿದ್ದಾರೆ.
ಈ ಹಿಂದೆ ಕದನ ವಿರಾಮವನ್ನು ತಳ್ಳಿಹಾಕಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ನಾವು ಮುನ್ನಡೆಯುತ್ತಿದ್ದೇವೆ… ನಮ್ಮನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಗಾಜಾ ಪಟ್ಟಿಯಲ್ಲಿರುವ ಹಮಾಸ್ ಆಡಳಿತವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದರು ಎನ್ನಲಾಗಿದೆ.
ಉತ್ತರ ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಮುಂದುವರಿದಂತೆ, ಗಾಯಗೊಂಡಿದ್ದ ನೂರಾರು ವಿದೇಶಿಯರು ಮತ್ತು ಸ್ಥಳೀಯ ಪ್ರಜೆಗಳು ರಫಾ ಬಾರ್ಡರ್ ಕ್ರಾಸಿಂಗ್ ಮೂಲಕ ಈಜಿಪ್ಟ್ ಪ್ರವೇಶಿಸಿದ್ದಾರೆ. ಅಲ್ಲದೆ ಗಾಯಗೊಂಡ 21 ಪ್ಯಾಲೆಸ್ತೀನಿಯರು ಮತ್ತು 72 ಮಕ್ಕಳು ಸೇರಿದಂತೆ 344 ವಿದೇಶಿ ಪ್ರಜೆಗಳು ಬುಧವಾರವಷ್ಟೇ ರಫಾ ಗಡಿಯನ್ನು ದಾಟಿದ್ದಾರೆ ಎಂದು ಈಜಿಪ್ಟ್‌ನ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.
ಇದನ್ನೂ ಓದಿ: Indian-Origin Israeli Soldier: ಗಾಜಾ ಸಂಘರ್ಷ… ಭಾರತ ಮೂಲದ ಇಸ್ರೇಲ್ ಯೋಧ ಮೃತ್ಯು
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.