Sandalwood; ಚಿತ್ರೀಕರಣದಲ್ಲಿ ಬ್ಯುಸಿಯಾದ ‘ಗೌರಿ’
Team Udayavani, Nov 3, 2023, 4:32 PM IST
ಕನ್ನಡದ ಹಿರಿಯ ಸಾಹಿತಿ ಪಿ. ಲಂಕೇಶ್ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ’ ಸಿನಿಮಾದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವುದು ನಿಮಗೆ ಗೊತ್ತಿರಬಹುದು. ಸದ್ಯ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಗೌರಿ’ ಸಿನಿಮಾದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.
ಇದೇ ವೇಳೆ ಇತ್ತೀಚೆಗೆ “ಗೌರಿ’ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ಸಮರ್ಜಿತ್ ತಾಯಿ ಅರ್ಪಿತಾ ಲಂಕೇಶ್, ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯಾ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತಾರ್ ನರೋನ್ಹಾ, ಹಿರಿಯ ಛಾಯಾಗ್ರಾಹಕ ಕೆ. ಕೃಷ್ಣಕುಮಾರ್ (ಕೆ. ಕೆ) ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಇದೇ ವೇಳೆ ಮಾತನಾಡಿದ ನಟ ಸಮರ್ಜಿತ್, “ನಾನು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವುದಿಲ್ಲ. ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಸಾಕಷ್ಟು ತಯಾರಿ ಮಾಡಿಕೊಂಡು “ಗೌರಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿಬರುತ್ತಿದೆ. ಪ್ರೇಕ್ಷಕರಿಗೂ “ಗೌರಿ’ ಸಿನಿಮಾ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ, “ಈಗಾಗಲೇ “ಗೌರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ನಡೆಸಲಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ನಾಯಕ ಸಮರ್ಜಿತ್ ಮತ್ತು ನಾಯಕಿ ಸಾನ್ಯಾ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಶೀಘ್ರದಲ್ಲಿಯೇ “ಗೌರಿ’ ಚಿತ್ರೀಕರಣ ಮುಗಿಸಿ, ಹೊಸ ವರ್ಷದ ಆರಂಭದಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಿದೆ’ ಎಂದರು.
“ಗೌರಿ’ ಸಿನಿಮಾದಲ್ಲಿ ಸಮರ್ಜಿತ್, ಸಾನ್ಯಾ ಅಯ್ಯರ್ ಅವರೊಂದಿಗೆ ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತಾರ್ ನರೋನ್ಹಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.