Hosapete ಬಡವರಿಗೆ 2.42 ಲಕ್ಷ ಉಚಿತ ಮನೆ ನೀಡಲು ಸಿಎಂ ಒಪ್ಪಿಗೆ: ಸಚಿವ ಜಮೀರ್
ಕಳೆದ 10 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಯೋಜನೆ
Team Udayavani, Nov 3, 2023, 6:44 PM IST
ಹೊಸಪೇಟೆ:ಕಳೆದ ಹತ್ತು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ 2.42 ಲಕ್ಷ ಮನೆಗಳನ್ನು ಉಚಿತವಾಗಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಸೂರು ಕಲ್ಪಿಸಲು ರೂಪಿಸಿದ್ದ ಯೋಜನೆ ಫಲಾನುಭವಿಗಳ ವಂತಿಗೆ ಪಾವತಿ ಆಗದೆ ನನೆಗುದಿಗೆ ಬಿದ್ದಿದ್ದು, ಇದೀಗ ಸರ್ಕಾರವೇ ಸಂಪೂರ್ಣ ವೆಚ್ಚ ಭರಿಸಲಿದೆ.
ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಜತೆಗೆ ಆರನೇ ಗ್ಯಾರಂಟಿ ಆಗಿ ಮುಂದಿನ ವರ್ಷದ ಅಂತ್ಯದೊಳಗೆ ಸೂರು ಒದಗಿಸುವ ಗುರಿ ಹಾಕಿಕೊಂಡಿದ್ದಾರೆ. ಅದಕ್ಕೆ ತಗಲುವ 8 ಸಾವಿರ ಕೋಟಿ ರೂ.ಗಳನ್ನು ಹಂತ ಹಂತವಾಗಿ ಒದಗಿಸುವ ಭರವಸೆ ನೀಡಿದ್ದು, ಮುಂದಿನ ವಾರ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ಕರೆದಿದ್ದಾರೆ. ಈ ತೀರ್ಮಾನದಿಂದಾಗಿ 2.42 ಲಕ್ಷ ಕುಟುಂಬಗಳಿಗೆ ನೆಮ್ಮದಿ ದೊರಕಲಿದೆ. ಬ್ಯಾಂಕ್ ಸಾಲ ಸಿಗದೆ ಆತಂಕದಲ್ಲಿದ್ದವರು ನಿರಾಳ ಆಗಲಿದ್ದು, ಫಲಾನುಭವಿಗಳ ವಂತಿಗೆ ಇಲ್ಲದೆ ಮನೆ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.