
Davanagere ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಕೃಷ್ಣ ಭೈರೇಗೌಡ
Team Udayavani, Nov 3, 2023, 6:49 PM IST

ದಾವಣಗೆರೆ: ಕಾಂಗ್ರೆಸ್ ಪಕ್ಷ, ಸರ್ಕಾರದಲ್ಲಾಗಲಿ ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದ್ದು ಯಾವುದೇ ಗೊಂದಲ ಇಲ್ಲ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷದ ನಾಯಕರಿಲ್ಲ. ಈ ವಿಷಯ ಮರೆಮಾಚಲು ಬಿಜೆಪಿಯವರು ದಿನಕ್ಕೊಂದು ಸುದ್ದಿ ಹರಡಿಸುತ್ತಿದ್ದಾರೆ. ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರ ಜೀವನಕ್ಕೆ ಸಹಕಾರಿ ಆಗಿವೆ.
ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಆರು ತಿಂಗಳಾದರೂ ಬಿಜೆಪಿಯ ಅಧ್ಯಕ್ಷರು ಯಾರು, ಪ್ರತಿಪಕ್ಷದ ನಾಯಕ ಯಾರು ಎಂಬುದು ಗೊತ್ತಿಲ್ಲ. ಅಂತಹವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪ್ರತಿಕ್ರಿಯಿಸಲ್ಲ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಬಂದು ಹೋಗಿದೆ. ಒಟ್ಟು 17 ಸಾವಿರ ಕೋಟಿಯಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ.
ನಾವು ನಿರಂತರವಾಗಿ ಕೇಂದ್ರದ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಕೃಷಿ ಮಂತ್ರಿಗಳನ್ನು ಭೇಟಿಯಾಗುತ್ತೇನೆ. ಕೇಂದ್ರಕ್ಕೆ ಈಗಾಗಲೇ ನಾಲ್ಕು ಬಾರಿ ಬರ ಪರಿಹಾರ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. ದೇಶದ ಎರಡನೇ ಅತಿ ದೊಡ್ಡ ತೆರಿಗೆ ಸಂಗ್ರಹಿಸುವ ಕರ್ನಾಟಕದವರು ಕೇಂದ್ರದಿಂದ ಬರ ಪರಿಹಾರದ ಹಣ ಬರುವ ಬಗ್ಗೆ ಆಶಾವಾದಿಗಳಾಗಿದ್ದೇವೆ ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.