KEA; ವೈದ್ಯಕೀಯ, ದಂತ ವೈದ್ಯಕೀಯ: ಖಾಲಿ ಸೀಟುಗಳ ಹಂಚಿಕೆಗೆ ವಿಶೇಷ ಸುತ್ತು

ಇದುವರೆಗಿನ ಹಂಚಿಕೆಯ ನಂತರವೂ ಉಳಿದಿರುವ ಸೀಟುಗಳು...

Team Udayavani, Nov 3, 2023, 8:17 PM IST

Exam 2

ಬೆಂಗಳೂರು: ಇದುವರೆಗಿನ ಹಂಚಿಕೆಯ ನಂತರವೂ ಉಳಿದಿರುವ 133 ವೈದ್ಯಕೀಯ ಸೀಟುಗಳು ಮತ್ತು ದಂತ ವೈದ್ಯಕೀಯ ಸೀಟುಗಳನ್ನು `ಸ್ಟ್ರೇ ವೇಕೆನ್ಸಿ ರೌಂಡ್’ ಮೂಲಕ ಆನ್ಲೈನ್ ವಿಧಾನದಲ್ಲಿ ಹಂಚಲಾಗುವುದು. ಇದುವರೆಗಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಸೀಟುಗಳನ್ನು ಪಡೆದುಕೊಳ್ಳದೆ ಇರುವ ಆಸಕ್ತರು ಮಾತ್ರ ಇದರಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಈಗಾಗಲೇ ನಡೆದಿರುವ ಸೀಟು ಹಂಚಿಕೆಯಲ್ಲಿ ದಂತ ವೈದ್ಯಕೀಯ, ಆಯುಷ್ ಮತ್ತು ಇಂಜಿನಿಯರಿಂಗ್ ಸೀಟು ಪಡೆದುಕೊಂಡಿರುವವರು ಕೂಡ ಭಾಗವಹಿಸಬಹುದು. ಈ ವಿಶೇಷ ಸುತ್ತಿನಲ್ಲಿ ಒಂದು ವೇಳೆ ಸೀಟು ಲಭ್ಯವಾದರೆ, ಅಂಥವರಿಗೆ ಹಿಂದಿನ ಸುತ್ತುಗಳಲ್ಲಿ ಹಂಚಿಕೆಯಾಗಿರುವ ಸೀಟುಗಳು ರದ್ದಾಗುತ್ತವೆ. ಜತೆಗೆ ಅವುಗಳಿಗೆ ಪಾವತಿಸಿರುವ ಶುಲ್ಕವನ್ನು ಕೂಡ ಹಿಂದಿರುಗಿಸಲಾಗುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನ.7ರ ಬೆಳಿಗ್ಗೆ 10 ಗಂಟೆಯಿಂದ ನ.8ರ ಮಧ್ಯಾಹ್ನ 2 ಗಂಟೆಯ ಒಳಗೆ ನಿಗದಿತ ಮೊತ್ತದ ಡಿ.ಡಿ., ವೆರಿಫಿಕೇಶನ್ ಸ್ಲಿಪ್ ಮತ್ತು ಎಲ್ಲ ಮೂಲ ದಾಖಲಾತಿಗಳೊಂದಿಗೆ ಪರೀಕ್ಷಾ ಪ್ರಾಧಿಕಾರದ ಕೇಂದ್ರ ಕಚೇರಿಗೆ ಹಾಜರಾಗಬೇಕು. ಬಳಿಕ, ಅಭ್ಯರ್ಥಿಗಳಿಗೆ `ಆಪ್ಶನ್ಸ್’ ದಾಖಲಿಸಲು ಪೋರ್ಟಲ್ ತೆರೆದು, ನ.9ರ ಬೆಳಿಗ್ಗೆ 9 ಗಂಟೆಯವರೆಗೂ ಅವಕಾಶ ಕಲ್ಪಿಸಲಾಗುವುದು. ಇದೇ ರೀತಿಯಲ್ಲಿ ದಂತ ವೈದ್ಯಕೀಯ ಸೀಟುಗಳಿಗಾಗಿ ನ.10ರಂದು ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ವೈದ್ಯಕೀಯ/ದಂತ ವೈದ್ಯಕೀಯ ಸೀಟುಗಳು ಖಾಲಿ ಇರುವ ಕಾಲೇಜುಗಳಲ್ಲಿ ನಿಗದಿಪಡಿಸಿರುವ ಶುಲ್ಕ, ಸೀಟು ಹಂಚಿಕೆ ಫಲಿತಾಂಶ, ಪ್ರವೇಶ ಪ್ರಕ್ರಿಯೆ ಮುಗಿಸಲು ಇರುವ ಗಡುವು ಇತ್ಯಾದಿಗಳಿಗಾಗಿ ಪ್ರಾಧಿಕಾರದ ಜಾಲತಾಣ http://kea.kar.nic.in ನೋಡಬಹುದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.