Mysore; ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ: ಕೆ.ಎಸ್ ಈಶ್ವರಪ್ಪ

ಕಾಂಗ್ರೆಸ್ ನಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಿದ್ದಾರೆ‌

Team Udayavani, Nov 4, 2023, 2:25 PM IST

ಕೆ.ಎಸ್ ಈಶ್ವರಪ್ಪ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ ಎಂದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು. ನಾನೆ ಐದು ವರ್ಷ ಸಿಎಂ ಅಂದರು. ವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ. ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ. ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು. ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ ತರುವುದಾಗಿ ಹೇಳಿದ್ದರು. ಈಗ ಅದನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಸಾಧು ಸಂತರ ಶಾಪ ಸಿದ್ದರಾಮಯ್ಯಗೆ ತಟ್ಟುತ್ತದೆ. ದಲಿತರು ಹಿಂದುಳಿದ ವರ್ಗದವರ ಶಾಪವು ತಟ್ಟುತ್ತದೆ. ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ತಿಂಗಳು – ವರ್ಷ ಅಲ್ಲ, ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.

ಯಾವತ್ತು ಸಿದ್ದರಾಮಯ್ಯ ಯಾವ ಪಕ್ಷ ಕಟ್ಟುವುದಿಲ್ಲ. ಯಾರೋ ಕಟ್ಟಿದ ಪಕ್ಷಕ್ಕೆ ಬಂದು ಅಧಿಕಾರ ಮಾಡುವುದು ಸಿದ್ದರಾಮಯ್ಯನವರ ಚಾಳಿ. ಜೆಡಿಎಸ್ ನಿಂದ ಅವತ್ತು ಹೊರಗಡೆ ಬಂದಾಗ ನಾಯಿ ಹಸದಿತ್ತು, ಅನ್ನ ಹಳಸಿತ್ತು ಎಂಬ ರೀತಿ ಕಾಂಗ್ರೆಸ್ ಸೇರಿದರು. ಈಗಲೂ ಸಿಎಂ ಸ್ಥಾನದಿಂದ ಅವರನ್ನು ಇಳಿಸಿದರೆ ಅಪ್ಪಿತಪ್ಪಿಯೂ ಪಕ್ಷ ಕಟ್ಟುತ್ತೇನೆ ಎಂದು ಹೇಳುವುದಿಲ್ಲ. ಅದು ಸಿದ್ದರಾಮಯ್ಯ ಚಾಳಿ ಎಂದು ಟೀಕಿಸಿದರು.

ಸಿದ್ದರಾಮಯ್ಯ ಪೂರ್ವವಾದರೆ, ಡಿಕೆ ಶಿವಕುಮಾರ್ ಪಶ್ಚಿಮ. ಇವರಿಬ್ಬರ ಕಥೆಯೇ ಹೀಗಾದರೆ ಉಳಿದ ಸಚಿವರುಗಳ ಕಥೆ ಏನಾಗಿರಬೇಡ? ಕಾಂತರಾಜ್ ಆಯೋಗದ ವರದಿಯನ್ನ ಒಪ್ಪಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ವರದಿ ಒಪ್ಪಿಕೊಳ್ಳುವುದಿಲ್ಲ ಎಂದು ಡಿ.ಕೆ. ಹೇಳುತ್ತಾರೆ. ಸರ್ಕಾರ ನಂಬರ್ ಒನ್ ನಂಬರ್ ಟು ನಡುವೆಯೇ ಸಮನ್ವಯತೇ ಇಲ್ಲ ಎಂದು ಕಿಡಿಕಾರಿದರು.

ಅಜಿತ್ ಪವಾರ್ ಹುಟ್ಟುತ್ತಾರೆ: ಕಾಂಗ್ರೆಸ್ ಸರ್ಕಾರ ಬಿದ್ದು ಅಲ್ಲಿನ ಯಾವುದೇ ಅಜಿತ್ ಪವಾರ್ ಬಿಜೆಪಿ ಜೊತೆ ಬಂದರೆ ನಾವು ಸೇರಿಸಿಕೊಳ್ಳುತ್ತೇವೆ. ಆದರೆ ಆಗ ಬಂದ ಅಜಿತ್ ಪವಾರ್ ಗೆ ಸಿಎಂ ಸ್ಥಾನ ಕೊಡುವುದಿಲ್ಲ. ನಾವು ಎಂತಂತವರನ್ನೇ ಜೀರ್ಣಿಸಿಕೊಂಡಿದ್ದೇವೆ. ಜೀರ್ಣವಾದರೆ ಹೊಟ್ಟೆಯಲ್ಲಿ ಇಟ್ಟುಕೊಳ್ಳುತ್ತೇವೆ‌ ಇಲ್ಲವಾದರೆ ವಾಂತಿ ಮಾಡಿ ಹೊರಹಾಕುತ್ತೇವೆ. ಬಂಗರಾಪ್ಪ ಅಂತವರನ್ನೇ ಪಕ್ಷಕ್ಕೆ ಸೇರಿಸಿಕೊಂಡವರು ನಾವು. ಕೆಲವರು ಬಂದರು ಹೋದರು. ಕೆಲವರು ಇಲ್ಲೇ ಈದ್ದು ಒಳ್ಳೆಯವರಾಗಿ ಪಕ್ಷ ಕಟ್ಟುತ್ತಿದ್ದಾರೆ ಎಂದರು.

ಬಿಜೆಪಿ ಅಪರೇಷನ್ ಕಮಲ ಆರೋಪ ವಿಚಾರ‌ಕ್ಕೆ ಮಾತನಾಡಿ, ಒಬ್ಬನೇ ಒಬ್ಬ ಕಾಂಗ್ರೆಸ್ ಶಾಸಕ ನನಗೆ 50 ಕೋಟಿ ಆಫರ್ ಬಿಜೆಪಿಯಿಂದ ಆಫರ್ ಯಾರು ಕೊಟ್ಟರು ಎಂದು ಹೇಳಿ ಬಿಡಲಿ. ಆಗ ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಸುಳ್ಳು ಹೇಳಿ ಇಂತಹ ವಿಚಾರ ಹಬ್ಬಿಸುವುದು ಬೇಡ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿ ಕೊಳ್ಳುತ್ತಿದ್ದಾರೆ‌ ಸರ್ಕಾರ ಬೀಳುವ ದಿನಗಣನೆ ಈಗ ಆರಂಭವಾಗಿದೆ. ನಾನು ತಿಂಗಳು ವರ್ಷದ ಮಾತು ಆಡುತ್ತಿಲ್ಲ. ಕೆಲವೇ ದಿನಗಳಲ್ಲಿ ಸರ್ಕಾರ ಬೀಳಬಹುದು. ಸತೀಶ್ ಜಾರಕಿಹೊಳಿ, ಡಿ.ಕೆ ಶಿವಕುಮಾರ್, ಹರಿಪ್ರಸಾದ್, ಪರಮೇಶ್ವರ, ಪ್ರಿಯಾಂಕ ಖರ್ಗೆ ಎಲ್ಲಾ ಅಜಿತ್ ಪವಾರ್ ಗಳಾಗಿದ್ದಾರೆ. ಹೀಗಾಗಿ ಸರ್ಕಾರ ಬೀಳುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ನಲ್ಲಿ ಈಗ ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ ಸ್ಥಾನ ಕೇಳುತ್ತಿದ್ದಾರೆ‌. ಪ್ರಿಯಾಂಕ ಖರ್ಗೆ ಅವರ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಮೆಚ್ಚಿಕೊಳ್ಳುತ್ತಿದೆ. ಅವರೇ ಕೇಳುತ್ತಿದ್ದಾರೆ, ಇದು ನಗಪಾಟಲಿಗೆ ವಿಚಾರ ಎಂದು ಕೆಎಸ್ ಈಶ್ವರಪ್ಪ ಟೀಕಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.