Mangaluru ವಸತಿ ಶಾಲೆಗೆ ಡಿಸಿ ದಿಢೀರ್ ಭೇಟಿ
Team Udayavani, Nov 4, 2023, 11:57 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶುಕ್ರವಾರ ಪುತ್ತೂರು ತಾಲೂಕಿಗೆ ಭೇಟಿ ಸಂದರ್ಭದಲ್ಲಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದರು.
ಬಲ್ನಾಡು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಮೊರಾರ್ಜಿ ದೇಸಾಯಿ ಶಾಲೆಗೆ ಭೇಟಿ ನೀಡಿದ ಅವರು ಹಾಸ್ಟೆಲ್ ಸಮಗ್ರ ಕಟ್ಟಡ ಹಾಗೂ ಅಡುಗೆ ಕೋಣೆಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಭೋಜನದ ಗುಣಮಟ್ಟ ಪರಿಶೀಲಿಸಿ, ಆಹಾರ ಸಾಮಗ್ರಿ ಸಂಗ್ರಹಣೆ ಕೊಠಡಿಯನ್ನು ವೀಕ್ಷಿಸಿದರು. ಬಳಿಕ ವಿದ್ಯಾರ್ಥಿಗಳ ಅಹವಾಲು ಆಲಿಸಿದರು ಹಾಗೂ ವಸತಿ ಶಾಲೆಯ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಆಹಾರ ಮತ್ತು ಸೌಲಭ್ಯಗಳ ಗುಣಮಟ್ಟವನ್ನು ಕಾಪಾಡುವಂತೆ ಸಿಬಂದಿಗೆ ಸೂಚಿಸಿದರು.
ಜಮೀನು ಅಳತೆ ಸ್ಥಳ ಪರಿಶೀಲನೆ
ಜಿಲ್ಲಾಧಿಕಾರಿಯವರು ಪುತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ದರ್ಖಾಸ್ತು ಜಮೀನಿನ ಅಳತೆ ಕೆಲಸದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು.
ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್ ಕುಮಾರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಭೂದಾಖಲೆಗಳ ಉಪನಿರ್ದೇಶಕಿ ಪ್ರಸಾದಿನಿ, ತಹಶೀಲ್ದಾರ್ ಶಿವಶಂಕರ್, ಕಂದಾಯ ಇಲಾಖೆ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.