Bengaluru ಅಪಾರ್ಟ್ಮೆಂಟ್ ನಲ್ಲಿ ಗಣಿ ಇಲಾಖೆ ವಿಜ್ಞಾನಿಯ ಕೊಲೆ; ಪೂರ್ವನಿಯೋಜಿತ ಕೃತ್ಯ?
Team Udayavani, Nov 5, 2023, 1:05 PM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ವಿಜ್ಞಾನಿಯೊಬ್ಬರ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ಮಹಿಳೆಯ ಕೊಲೆ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ.
ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪ್ರತಿಮಾ (37) ಕೊಲೆಯಾದವರು.
ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ.
ಪ್ರತಿಮಾ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ಪ್ರತಿಮಾ ಅವರು ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಪ್ರತಿಮಾ ಅವರನ್ನು ಚಾಲಕ ಮನೆಗೆ ಡ್ರಾಪ್ ಮಾಡಿ ಹೊರಟಿದ್ದ. ಪ್ರತಿಮಾ ಅವರಿಗೆ ಅಣ್ಣ ರಾತ್ರಿ ಕರೆ ಮಾಡಿದ್ದರು. ಆದರೆ ಕರೆ ಸ್ವೀಕರಿಸದ ಕಾರಣ ಬೆಳಗ್ಗೆ ಬಂದು ನೋಡಿದ್ದಾರೆ. ಈ ವೇಳೆ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ದುಷ್ಕರ್ಮಿಗಳು ಮನೆಗೆ ಬಂದು ಕೊಲೆ ಮಾಡಿ ಹೋಗಿದ್ದಾರೆ. ಮನೆಯ ಯಾವ ವಸ್ತುಗಳೂ ಕಾಣೆಯಾಗಿಲ್ಲ. ಹೀಗಾಗಿ ಇದು ಒಂದು ಪೂರ್ವನಿಯೋಜಿತ ಕೃತ್ಯದಂತೆ ತೋರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.