Sagara: ಪೈಪ್ ಕಳ್ಳತನ ಪ್ರಕರಣ; ಖದೀಮನ ಬಂಧನ

Team Udayavani, Nov 6, 2023, 8:42 PM IST

Sagara: ಪೈಪ್ ಕಳ್ಳತನ ಪ್ರಕರಣ; ಖದೀಮನ ಬಂಧನ

ಸಾಗರ: ತಾಲೂಕಿನ ಹೆಗ್ಗೋಡು ಗ್ರಾಮದ ಕೇಡಲಸರ ಸಂಸ್ಕೃತ ಶಾಲಾ ಆವರಣದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅಳವಡಿಸಲು ಸಂಗ್ರಹಿಸಿಟ್ಟಿದ್ದ ಪೈಪ್‌ಗಳನ್ನು ಅಪಹರಿಸಿದ್ದ ಕಳ್ಳನನ್ನು ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ವೇಗರಾಜ್ ಹೊಸೂರು ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದು, 1.15 ಲಕ್ಷ ರೂ. ಬೆಲೆಯ ಒಂದು ಸಾವಿರ ಮೀಟರ್ ಉದ್ದದ 5 ಪೈಪ್ ಬಂಡಲ್‌ಗಳು ಮತ್ತು ಕೃತ್ಯಕ್ಕೆ ಬಳಸಿದ 1.5೦ ಲಕ್ಷ ರೂ. ಬೆಲೆಯ ಟಾಟಾ ಸುಪರ್ ಎಸ್ ಮಿಂಟ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಅ. 22ರಿಂದ 25ರ ಮಧ್ಯದ ಅವಧಿಯಲ್ಲಿ ನಡೆದ ಕಳ್ಳತನದ ಪ್ರಕರಣ ಸಂಬಂಧ ಸಾಗರದ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯ್ಕ ಟಿ. ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಿದ್ದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ್, ಪಿಎಸ್‌ಐ ನಾರಾಯಣ ಮಧುಗಿರಿ ಹಾಗೂ ಸಿಬ್ಬಂದಿಗಳಾದ ಸನಾವುಲ್ಲಾ, ಷೇಖ್ ಫೈರೋಜ್ ಅಹಮದ್, ರವಿಕುಮಾರ್ ತಂಡದಲ್ಲಿದ್ದರು.

ಚಾಲಕ ವೃತ್ತಿಯಲ್ಲಿದ್ದ ವೇಗರಾಜ್ ಮೂವರು ಇತರ ಆರೋಪಿಗಳು ಸೇರಿ ಸೇರಿ ಕಳ್ಳತನ ಮಾಡಿ, ಮಾಲನ್ನು ತಾಲೂಕಿನ ಆವಿನಹಳ್ಳಿ ಹೋಬಳಿಯ ನಿರ್ಜನ ಪ್ರದೇಶ ಒಂದರಲ್ಲಿ ಬಚ್ಚಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದರು. ಇನ್ನೂ ಮೂವರು ಈ ಕಳ್ಳತನದಲ್ಲಿ ಭಾಗಿಯಾಗಿದ್ದಾರೆನ್ನಲಾಗಿದ್ದು ಅವರ ಬಂಧನ ಇನ್ನಷ್ಟೇ ಆಗಬೇಕಿದೆ.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

16

Sagara: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.