![City](https://www.udayavani.com/wp-content/uploads/2025/02/City-1-415x249.jpg)
![City](https://www.udayavani.com/wp-content/uploads/2025/02/City-1-415x249.jpg)
Team Udayavani, Nov 7, 2023, 2:49 PM IST
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ 108 ಅಡಿ ಎತ್ತರದ ಪ್ರತಿಮೆ ಬಳಿ ಸಮೀಪ ಮತ್ತೂಮ್ಮೆ ಮಣ್ಣುಕುಸಿತ ಸಂಭವಿಸಿ ಬೃಹತ್ ಕಲ್ಲುಗಳೆಲ್ಲ ಸಮೀಪದ ಜಮೀನುಗಳಿಗೆ ಉರುಳಿ ಬಿದ್ದಿವೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪದಗಿರಿ ಒಡ್ಡು ಪ್ರದೇಶದಲ್ಲಿ 108 ಅಡಿ ಎತ್ತರ ಮಹದೇಶ್ವರನ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಪ್ರತಿಮೆ ನಿರ್ಮಾಣಗೊಂಡ 2 ತಿಂಗಳಿನಲ್ಲೆ ಧಾರಾಕಾರ ಮಳೆಗೆ ಒಂದು ಭಾಗದ ಮಣ್ಣು ಕುಸಿದಿದ್ದ ಪರಿಣಾಮ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದೀಗ ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮತ್ತೂಮ್ಮೆ ಮಣ್ಣುಕುಸಿತ ಸಂಭವಿಸಿದೆ.
ಇದರ ಪರಿಣಾಮ ತಡೆಗೋಡೆಯಾಗಿ ನಿರ್ಮಿಸಿದ್ದ ಬೃಹತ್ ಕಲ್ಲುಗಳೆಲ್ಲ ಕೆಳಭಾಗದ ಜಮೀನು ಗಳಿಗೆ ಉರುಳಿಬಿದ್ದಿವೆ. ಇದರಿಂದಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಲ ಗಿಡ-ಮೆಗಳೆಗೆಲ್ಲಾ ಹಾನಿಯಾಗಿದೆ.
ಒಟ್ಟಾರೆ ದೀಪದಗಿರಿ ಒಡ್ಡುವಿನಲ್ಲಿ ಮಳೆ ಬಂದಾಗಲೆಲ್ಲಾ ಈ ರೀತಿಯ ಮಣ್ಣುಕುಸಿತ ಸಂಭವಿಸಿರುವುದು ಭ ಕ್ತಾದಿಗಳ ಆತಂಕಕ್ಕೆ ಕಾರಣವಾಗಿದ್ದು ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಪ್ರತಿಮೆ ಸುತ್ತಮುತ್ತಲು ಗುಣಮಟ್ಟದ ಕಾಮಗಾರಿ ನಿರ್ವಹಿಸಿ ಭಕ್ತಾದಿಗಳ ದರ್ಶನಕ್ಕೆ ಮುಕ್ತಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
You seem to have an Ad Blocker on.
To continue reading, please turn it off or whitelist Udayavani.