Kundagol: ಆರೇ ತಿಂಗಳಲ್ಲಿ ಕಿತ್ತುಹೋದ ರಸ್ತೆ
Team Udayavani, Nov 7, 2023, 2:08 PM IST
ಕುಂದಗೋಳ: ಸರಕಾರಿ ಕೆಲಸ ದೇವರ ಕೆಲಸ ಎಂದು ವಿಧಾನಸೌಧ ಮುಂಭಾಗದಲ್ಲಿ ಹಾಕಲಾಗಿದೆ. ಆದರೆ ತಾಲೂಕಿನಲ್ಲಿ ಈ ಮಾತು ಅಕ್ಷರ ಸಹ ವಿರುದ್ಧವಾಗಿದ್ದು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಕಾಮಗಾರಿ ರಸ್ತೆಗೆ 7.6 ಕೋಟಿ ರೂ. ಖರ್ಚು ಮಾಡಿದರೂ ಕೇವಲ 6-7 ತಿಂಗಳಲ್ಲಿಯೇ ರಸ್ತೆ ಹಾಳಾಗಿ ತನ್ನ ಮೊದಲಿನ ಸ್ವರೂಪದಲ್ಲಿ ಕಾಣತೊಡಗಿದೆ.
ತಾಲೂಕು ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಇದ್ದರೂ ಇಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುವುದೇ ಅಪರೂಪ.
ತಾಲೂಕಿನಲ್ಲಿ ರಸ್ತೆ ಮೇಲೆ ಸಂಚರಿಸುವುದೆಂದರೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಸ್ಥಿತಿ ನಿರ್ಮಾಣಗೊಂಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಲಿವಾಳದಿಂದ ಕಮಡೊಳ್ಳಿ/ಹಂಚಿನಾಳ ರಸ್ತೆಗೆ ಕೂಡುವ ಕೂಬಿಹಾಳ ರಸ್ತೆ ನಿರ್ಮಾಣಕ್ಕೆ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ 3ನೇ ಹಂತದ ಕಾಮಗಾರಿಯಲ್ಲಿ 7 ಕಿಮೀ ರಸ್ತೆ ಅಭಿವೃದ್ಧಿಗೆ ಅನುದಾನ
ಬಿಡುಗಡೆಗೊಳಿಸಲಾಗಿತ್ತು. ಗುತ್ತಿಗೆದಾರರು ಸಹ ಕಾಮಗಾರಿ ಪೂರ್ಣಗೊಳಿಸಿ ಕೇವಲ 6 ತಿಂಗಳು ಕಳೆಯುವುದರೊಳಗೆ ರಸ್ತೆಗೆ ಹಾಕಿರುವ ಡಾಂಬರ್ ಕಿತ್ತುಹೋಗಿ ಕಲ್ಲುಗಳು ರಸ್ತೆ ತುಂಬ ಕಾಣತೊಡಗಿವೆ. ಈ ರಸ್ತೆ ನೋಡಿದರೆ ಹಲವು ವರ್ಷಗಳ ಹಿಂದೆಯೇ ರಸ್ತೆ ನಿರ್ಮಿಸಲಾಗಿದೆ ಎಂದು ಭಾಸವಾಗುತ್ತದೆ.
ಇದೀಗ ಈ ರಸ್ತೆಯ ಮೇಲೆ ದ್ವಿಚಕ್ರ ವಾಹನ ಸಹ ಸಂಚರಿಸದಂತಾಗಿದ್ದು ಸ್ವಲ್ಪ ಯಾಮಾರಿದರೂ ಕಲ್ಲುಗಳು ಹಾಗೂ ಗುಂಡಿ ತಪ್ಪಿಸಲು ಹೋಗಿ ಬೀಳುವ ಸ್ಥಿತಿ ನಿರ್ಮಾಣಗೊಂಡಿದೆ. ತಾಲೂಕಿಗೆ ಅಭಿವೃದ್ಧಿ ಯೋಜನೆಗಳು ಬರುವುದೇ ಅಪರೂಪ. ಬಂದ
ಅನುದಾನವಾದರೂ ಸಮರ್ಪಕವಾಗಿ ಅನುಷ್ಠಾನಗೊಂಡು ಉತ್ತಮ ರಸ್ತೆ ನಿರ್ಮಿಸಿ ಸಂಚಾರಕ್ಕೆ ನೀಡಬೇಕಾದ ಇಲಾಖೆ
ಕಣ್ಣುಮುಚ್ಚಿ ಕುಳಿತಿರುವುದರಿಂದ ರಸ್ತೆ ಈಗ ಸಂಪೂರ್ಣ ಹಾಳಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗ್ರಾಮ ಸಡಕ್ ಯೋಜನೆ ಗುತ್ತಿಗೆದಾರರ ಅಸಮರ್ಪಕ ಕಾಮಗಾರಿಯಿಂದ ಹಳ್ಳ ಹಿಡಿಯುತ್ತಿದೆ. ಈಗಲಾದರೂ ಈ ಭಾಗದ ಸಂಸದರು, ಶಾಸಕರು,ಅಧಿ ಕಾರಿಗಳು ಸರ್ಕಾರದ ಹಣ ಪೋಲಾಗದಂತೆ ಕ್ರಮ ಕೈಗೊಳ್ಳಬೇಕಿದೆ.
ಕೆಲವೇ ತಿಂಗಳು ಹಿಂದೆ ನಿರ್ಮಿಸಿದ್ದ ರಸ್ತೆ ಸಂಪೂರ್ಣ ಹಾಳಾಗಿದ್ದು, ಗುತ್ತಿಗೆದಾರರಿಗೆ ರಸ್ತೆ ದುರಸ್ತಿ ಮಾಡಲು ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ.
ಎಂ.ಎಚ್.ದಿವಟರ
ಪಿಎಂಜಿಎಸ್‌ವೈ ಅಧಿಕಾರಿ
*ಶೀತಲ ಎಸ್.ಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.