Govt “ಗ್ಯಾರಂಟಿ’ಯಿಂದ ಬೊಕ್ಕಸ ಖಾಲಿ: ವಿಶೇಶ್ವರ ಹೆಗಡೆ ಕಾಗೇರಿ
ಸರ್ಕಾರ ವಿಫಲವಾಗಿದ್ದಕ್ಕೆ ಬಿಜೆಪಿ ಬರ ಅಧ್ಯಯನ ಪ್ರವಾಸ
Team Udayavani, Nov 7, 2023, 6:45 PM IST
ನಾಯಕನಹಟ್ಟಿ:ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ. ಹೀಗಾಗಿ ಅಭಿವೃದ್ಧಿ ಕೆಲಸಕ್ಕೆ ಹಣವಿಲ್ಲದೇ ಒದ್ದಾಡುತ್ತಿದೆ ಎಂದು ಮಾಜಿ ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಮಂಗಳವಾರ ಬಿಜೆಪಿ ಬರ ಅಧ್ಯಯನ ತಂಡ ಪಟ್ಟಣದ ಚಿಕ್ಕಕೆರೆ ವೀಕ್ಷಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹಣವೇ ಇಲ್ಲ. ಹೀಗಾಗಿ ಬೆಳೆ ಮತ್ತು ಬರ ಪರಿಹಾರಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಚುನಾವಣೆಯಲ್ಲಿ ಕೊಟ್ಟ ಗ್ಯಾರಂಟಿಗಳನ್ನು ಸಹ ಕಾಂಗ್ರೆಸ್ ಪೂರ್ಣಗೊಳಿಸಿಲ್ಲ. ಅಧಿಕಾರ ಹಂಚಿಕೆಯಲ್ಲಿ ಕಾಲ ಕಳೆಯುತ್ತಿದೆ. ಬರ ನಿರ್ವಹಣೆ ಬಗ್ಗೆ ಸರ್ಕಾರದಲ್ಲಿ ಯಾವುದೇ ಗಂಭೀರ ಪ್ರಯತ್ನಗಳು ನಡೆದಿಲ್ಲ. ಹೀಗಾಗಿ ಬರದ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸುವಂತೆ ಮಾಡಲು ಬಿಜೆಪಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದೆ.
ಪ್ರವಾಸ ಆರಂಭವಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಿಲ್ಲಾ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಚಿವರಿಗೆ ಸೂಚಿಸಿದ್ದಾರೆ. ಸರ್ಕಾರದ ಬಳಿ ಗ್ಯಾರಂಟಿಗಳಿಗೆ ಹಣವಿದ್ದರೆ ಬೆಳೆ ಪರಿಹಾರಕ್ಕೆ ಹಣ ನೀಡಲಿ. ಗ್ಯಾರಂಟಿಗೆ ಕೊಟ್ಟ ಮಹತ್ವವನ್ನು ಬೆಳೆ ಪರಿಹಾರಕ್ಕೂ ನೀಡಬೇಕು. ಕಾಟಾಚಾರಕ್ಕೆ ಡಿಸಿಗಳಿಗೆ ಕೆಲವು ಕೋಟಿಗಳನ್ನು ನೀಡಿ ಕೈ ತೊಳೆದುಕೊಂಡಿದೆ ಎಂದರು.
ರಾಜಕೀಯದಲ್ಲೇ ಮುಳುಗಿರುವ ಸರ್ಕಾರ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರವಾದ ಚಿಂತನೆ ನಡೆಸುತ್ತಿಲ್ಲ. ಕಾವೇರಿ ವಿಷಯ, ವಿದ್ಯುತ್ ಕೊರತೆ, ಬರ ಎದುರಿಸುವ ಪ್ರಯತ್ನ, ಕಾನೂನು ಸುವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆಗಳಿಗೆ ಧನಾತ್ಮಕ ಪರಿಹಾರ ಕಂಡು ಹಿಡಿಯುತ್ತಿಲ್ಲ. ಇದಕ್ಕೆ ಬದಲಾಗಿ ಎಲ್ಲ ಸಮಸ್ಯೆಗಳಿಗೂ ಕೇಂದ್ರದ ಮೇಲೆ ಆರೋಪಗಳನ್ನು ಹೊರಿಸುವ ಕಾರ್ಯದಲ್ಲಿ ತೊಡಗಿದೆ. ಎಲ್ಲ ಸಮಸ್ಯೆಗಳಿಗೆ ಕೇಂದ್ರದ ಅವಲಂಬನೆ ಸರಿಯಲ್ಲ. ರಾಜ್ಯ ಸರ್ಕಾರ ತನ್ನ ಶಕ್ತಿಯ ಆಧಾರದ ಮೇಲೆ ಮುನ್ನಡೆಸುವುದಕ್ಕೆ ಸಾಧ್ಯವಾಗಿಲ್ಲ ಎಂಬುದನ್ನು ಸಮಸ್ಯೆಗಳು ಸೂಚಿಸುತ್ತಿವೆ ಎಂದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಈ. ರಾಮರೆಡ್ಡಿ, ಮುಖಂಡರಾದ ಎಂ.ವೈ.ಟಿ.ಸ್ವಾಮಿ, ಪಿ.ಶಿವಣ್ಣ, ಪಪಂ ಸದಸ್ಯ ಮಹಾಂತಣ್ಣ, ಪರಮೇಶ್ವರಪ್ಪ, ಶಾರದಮ್ಮ ಇದ್ದರು. ಬರ ಅಧ್ಯಯನ ತಂಡ ಸಮೀಪದ ನಲಗೇತನಹಟ್ಟಿ ಗ್ರಾಮದಲ್ಲಿ ಶೇಂಗಾ, ಸೂರ್ಯಕಾಂತಿ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.