High Court ವೈದ್ಯರ ಕೊರತೆ: ಪಿಐಎಲ್ ದಾಖಲು
Team Udayavani, Nov 8, 2023, 1:02 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಇತರ ವೈದ್ಯಕೀಯ ಸಿಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಲು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ರಾಜ್ಯದ ಎಲ್ಲ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ವೈದ್ಯರು ಸೇರಿದ 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಡಿ ಗ್ರೂಪ್ ಸಿಬಂದಿಯ ಕೊರತೆ ಬಗ್ಗೆ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಎಫ್ಐಸಿಸಿಐ) ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಇದನ್ನು ಆಧರಿಸಿ ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಯನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಆದ್ದರಿಂದ ಇದೊಂದು ಸಾರ್ವಜನಿಕ ಗಂಭೀರ ಹಾಗೂ ಮಹತ್ವದ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಈ ನಿಟ್ಟಿನಲ್ಲಿ ಸರಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಲು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ನ್ಯಾಯಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿತು. ಅಲ್ಲದೇ ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ವಕೀಲ ಶ್ರೀಧರ ಪ್ರಭು ಅವರನ್ನು “ಅಮೆಕಸ್ ಕ್ಯೂರಿ’ (ಕೋರ್ಟ್ ನೆರವುಗಾರರು) ಆಗಿ ನೇಮಕ ಮಾಡಿತು.
16,500ಕ್ಕೂ ಅಧಿಕ ವೈದ್ಯರ ಹುದ್ದೆ ಖಾಲಿ
ಮಂಗಳವಾರ ಹೈಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರು ಈ ವಿಷಯ ಪ್ರಸ್ತಾವಿಸಿ, ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನೀಷಿಯನ್, 1512 ಫಾರ್ಮಾಸಿಸ್ಟ್, 1752 ಸಹಾಯಕರು 3253 ಗ್ರೂಪ್ ಡಿ ನೌಕರರು ಸೇರಿ 16,500ಕ್ಕೂ ಹೆಚ್ಚು ವೈದ್ಯರು, ಅರೆ ವೈದ್ಯಕೀಯ ಸಿಬಂದಿ, ತಾಂತ್ರಿಕ ಹಾಗೂ ಡಿ. ಗ್ರೂಪ್ ನೌಕರರ ಕೊರತೆ ಇದೆ. ಅಲ್ಲದೆ ರಾಜ್ಯದ ನಗರ ಪ್ರದೇಶಗಳಲ್ಲಿ 245 ಮತ್ತು ಗ್ರಾಮೀಣ ಪ್ರದೇಶದಲ್ಲಿ 209 ಸೇರಿ ಒಟ್ಟು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ವರದಿಯಲ್ಲಿ ಪ್ರಕಟಿಸಲಾಗಿದೆ ಎಂದು ಉಲ್ಲೇಖೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.