DCM ದಿಲ್ಲಿಗೆ ದೌಡು; ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಜತೆಗೆ ಬಿರುಸಿನ ಚರ್ಚೆ
Team Udayavani, Nov 8, 2023, 1:26 AM IST
ಬೆಂಗಳೂರು: ಮಹತ್ವದ ಬೆಳವಣಿಗೆ ಯಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಆಮೂಲಾಗ್ರ ಬದಲಾ ವಣೆ ಆಗಬೇಕೆಂದು ಡಿಸಿಎಂ ಪಟ್ಟು ಹಿಡಿದಿರು ವಂತೆಯೇ ಈ ಬೆಳವಣಿಗೆ ನಡೆದಿದೆ. ಈ ಭೇಟಿಯ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸದಿಲ್ಲಿಗೆ ಪ್ರಯಾಣಿಸಿದ್ದಾರೆ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.
ಸರಕಾರ ಹಾಗೂ ಪಕ್ಷದ ವಿಚಾರಗಳಲ್ಲಿ ಯಾವುದೇ ಸಚಿವರು, ಶಾಸಕರು ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ನೀಡಿರುವ ಎಚ್ಚರಿಕೆ, ಅನಂತರ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಚಿವರ ಉಪಾಹಾರ ಕೂಟಕ್ಕೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗೈರುಹಾಜರಾಗಿದ್ದ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಡಿಸಿಎಂ ತೆರಳಿ ಸುದೀರ್ಘ ಮಾತು ಕತೆ ನಡೆಸಿರುವುದು ಮಹತ್ವದ ಬೆಳವಣಿಗೆ ಯಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದುಕೊಂಡು ಸಚಿವರಾದ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ , ಈಶ್ವರ ಖಂಡ್ರೆ, ಮೇಲ್ಮನೆಯಲ್ಲಿ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹಾಗೂ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಸಹಿತ ಕೆಪಿಸಿಸಿ ಪದಾಧಿಕಾರಿಗಳು ಹಾಗೂ 22 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದ ಲಾವಣೆ ಆಗಬೇಕೆಂಬುದು ಡಿಕೆಶಿ ಆಗ್ರಹ ವಾಗಿದೆ. ಲೋಕಸಭಾ ಚುನಾ ವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಚುರುಕುಗೊಳ್ಳಬೇಕೆಂಬ ಉದ್ದೇಶದಿಂದ ಹೊಸ ಮುಖಗಳಿಗೆ ಅವಕಾಶ ಕೊಡಬೇಕೆಂಬ ಪ್ರಯತ್ನವನ್ನು ಅವರು ನಡೆಸಿದ್ದಾರೆ. ಆದರೆ ಸಚಿವರ ಪೈಕಿ ಕೆಲವರು ಕಾರ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡಲು ಮುಂದೆ ಬಂದಿದ್ದರೆ ಸತೀಶ್ ಮಾತ್ರ ಇದಕ್ಕೆ ಸಮ್ಮತಿ ನೀಡುತ್ತಿಲ್ಲ.
ಈ ವಿಷಯ ಕಗ್ಗಂಟಾಗಿರುವುದರಿಂದ ಅವರ ಮನವೊಲಿಸಲು ಡಿಕೆಶಿ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯಿಂದ ಲಿಂಗಾಯತ ಸಮುದಾಯಕ್ಕೆ ಸೇರಿದ ಲಕ್ಷ್ಮಣ ಸವದಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕೆಂಬ ಯೋಜನೆ ಇದೆ.
ಇನ್ನೊಂದು ಮೂಲದ ಪ್ರಕಾರ ಲೋಕಸಭಾ ಚುನಾವಣೆ ತನಕ ಹಾಲಿ ಕಾರ್ಯಾಧ್ಯಕ್ಷರನ್ನೇ ಮುಂದು ವರಿಸಲು ಹೈಕಮಾಂಡ್ ಒಲವು ತೋರಿದೆ ಎಂದು ತಿಳಿದುಬಂದಿದೆ. ಹೀಗಾಗಿ ಕೆಪಿಸಿಸಿ ಯಲ್ಲಿ ಕೆಲವು ಬದಲಾವಣೆ ತರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುಜೇìವಾಲ ಅವರ ಭೇಟಿಗೆ ಡಿಕೆಶಿ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಲ್ಲಿ ನಾನಿಲ್ಲ :
ಸತೀಶ್ ಜಾರಕಿಹೊಳಿ
“ನಾನು ಕೆಪಿಸಿಸಿ ಅಧ್ಯಕ್ಷರ ರೇಸ್‌ನಲ್ಲಿ ಇಲ್ಲ. ಮುಂದೆ ದೊಡ್ಡ ಜವಾಬ್ದಾರಿ ಸಿಕ್ಕಿದರೆ ನೋಡೋಣ. ಹೆಚ್ಚುವರಿ ಜವಾಬ್ದಾರಿ ತೆಗೆದುಕೊಳ್ಳಲು ಸಿದ್ಧನಿಲ್ಲ. ನಮ್ಮ ಗಾಡಿ ಕೆಪಾಸಿಟಿಗೆ ತಕ್ಕಷ್ಟು ಲೋಡ್ ಇದೆ. ಜಾಸ್ತಿ ಲೋಡ್ ಹಾಕಲಾಗುವುದಿಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮದೇ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ಧಾರೆ.
“ಸದ್ಯ ಗಾಡಿ ಆರಾಮವಾಗಿ ಓಡುತ್ತಿದೆ ಸಾಕು. ಓಡಬೇಕು, ಟ್ರ್ಯಾಕ್ ಮೇಲೆ ಬರಬೇಕು. ಈಗ ಗಾಡಿ ಓಡಿಸುತ್ತಿದ್ದೇನೆ. ನಮ್ಮ ಇಲಾಖೆಯೂ ದೊಡ್ಡದಿದೆ. ಅಧ್ಯಕ್ಷರಾಗಲು ಸಾಕಷ್ಟು ಮಂದಿ ಇದ್ದಾರೆ. ಸದ್ಯ ಕಾರ್ಯಾಧ್ಯಕ್ಷ ಸ್ಥಾನವೂ ಮುಂದುವರಿಯಲಿದೆ. ಚುನಾವಣೆ ಬಳಿಕ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ಕಾದು ನೋಡೋಣ. ನಾನು ಅಧ್ಯಕ್ಷನಾಗುವ ಚರ್ಚೆ ಬಂದರೆ ನೋಡೋಣ. ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ, ನಮ್ಮ ಭಾಗದ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.