FDA ಪರೀಕ್ಷಾ ಅಕ್ರಮ ರೂವಾರಿ ಪಾಟೀಲ ಶೀಘ್ರ ಶರಣಾಗತಿ?

Team Udayavani, Nov 8, 2023, 1:30 AM IST

FDA ಪರೀಕ್ಷಾ ಅಕ್ರಮ ರೂವಾರಿ ಪಾಟೀಲ ಶೀಘ್ರ ಶರಣಾಗತಿ?

ಕಲಬುರಗಿ: ಈ ಹಿಂದಿನ ಪಿಎಸ್‌ಐ ಪ್ರಕರಣ, ಈಗಿನ ಎಫ್‌ಡಿಎ ಪರೀಕ್ಷಾ ಅಕ್ರಮದ ರೂವಾರಿ ಆರ್‌.ಡಿ. ಪಾಟೀಲ (ರುದ್ರಗೌಡ ಪಾಟೀಲ) ನ. 8, ನ. 9ರಂದು ಪೊಲೀಸರ ಎದುರು ಶರಣಾಗುವ ಸಾಧ್ಯತೆಗಳಿವೆ.

ಪಾಟೀಲ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಅವುಗಳಿಗೆ ಸಂಬಂಧಿಸಿ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದ್ದರೂ ಅದು ವಜಾಗೊಂಡಿದೆ. ಹೀಗಾಗಿ ಆತ ಪೊಲೀಸರಿಗೆ ಶರಣಾಗದೆ ವಿಧಿ ಇಲ್ಲ ಎನ್ನಲಾಗಿದೆ.
ಆರ್‌.ಡಿ. ಪಾಟೀಲ ಪರವಾಗಿ ಹಿರಿಯ ವಕೀಲ ಶ್ಯಾಮಸುಂದರ್‌, ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕ ಪಿ. ನರಸಿಂಹುಲು ವಾದ ಮಂಡಿಸಿದ್ದರು. ಈ ಮಧ್ಯೆ ಆರ್‌.ಡಿ. ಪಾಟೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಅಫಜಲಪುರ, ಕಲಬುರಗಿ ನಗರದಲ್ಲಿ ಹರಿದಾಡಿದ್ದರೂ ಅದನ್ನು ಪೊಲೀಸರು ನಿರಾಕರಿಸಿದ್ದಾರೆ.

ನಗರದಲ್ಲಿಯೇ ಇದ್ದ
ಕಲಬುರಗಿ ನಗರದಲ್ಲಿಯೇ ಆರ್‌.ಡಿ. ಪಾಟೀಲ ಇದ್ದರೂ ಪೊಲೀಸರಿಗೆ ಹೇಗೆ ಸಿಗಲಿಲ್ಲ ಎನ್ನುವುದು ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಲಯದಲ್ಲಿ ಇದೇ ಕಾರಣಕ್ಕಾಗಿಯೇ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಾಗಿ 11 ದಿನಗಳು ಕಳೆದಿವೆ. ಆತ ನಗರದ ಅಪಾರ್ಟಮೆಂಟ್‌ವೊಂದರಲ್ಲಿ ಮನೆ ಬಾಡಿಗೆಗೆ ಪಡೆದು ಅಲ್ಲಿಯೇ ವಾಸವಾಗಿದ್ದ ಎನ್ನುವ ವಿಷಯ ಮಂಗಳವಾರ ಬಯಲಾಗುತ್ತಿದ್ದಂತೆ ಪೊಲೀಸರು ಇನ್ನಷ್ಟು ಚುರುಕಾಗಿದ್ದಾರೆ.

ಸಿಸಿ ಕೆಮರಾ ದೃಶ್ಯದಿಂದ ಬಯಲು
ಪಾಟೀಲ ಅಪಾರ್ಟಮೆಂಟ್‌ನಲ್ಲಿ ಇರುವ ವಿಚಾರ ಸೋಮವಾರ ಖಾತ್ರಿ ಮಾಡಿಕೊಂಡ ಪೊಲೀಸರು ಅಲ್ಲಿಗೆ ಹೋಗುವುದರೊಳಗೆ ಆತ ತಡೆಗೋಡೆ ಹಾರಿ ಓಡಿರುವ ಚಿತ್ರಗಳು ಪಕ್ಕದಲ್ಲಿಯೇ ಇದ್ದ ಇನ್ನೊಂದು ಮನೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿವೆ. ಇದರಿಂದಾಗಿ ಪೊಲೀಸರು ಅಪಾರ್ಟ್‌ಮೆಂಟ್‌ ಬರುವುದು ಆತನಿಗೆ ಗೊತ್ತಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುವಂತಾಗಿದೆ.

ವಿಜಯೇಂದ್ರ ಆರೋಪ
ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಹೇಳಿಕೆ ನೀಡಿ, ಆರ್‌.ಡಿ. ಪಾಟೀಲನಿಗೂ ರಾಜ್ಯ ಸರಕಾರಕ್ಕೂ ನಂಟಿದೆ. ಇದರಿಂದಾಗಿಯೇ ಬಂಧನ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಸ್‌ಐ ಪರೀಕ್ಷಾ ಅಕ್ರಮದ ವೇಳೆಯಲ್ಲಿ ಭಾರೀ ಆರೋಪಗಳನ್ನು ಮಾಡುತ್ತಿದ್ದ ಅಂದಿನ ಚಿತ್ತಾಪುರ ಶಾಸಕ, ಇಂದಿನ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರಕ್ಕೆ ಪರಾರಿ ಶಂಕೆ: ಗೃಹ ಸಚಿವ
ಆರ್‌.ಡಿ. ಪಾಟೀಲ ಮಹಾರಾಷ್ಟ್ರಕ್ಕೆ ಪರಾರಿಯಾಗಿರುವ ಶಂಕೆಯಿದೆ. ಆತನನ್ನು ಬಂಧಿಸಲು ಪೊಲೀಸರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾಣ ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಿಎಸ್‌ಐ ಅಕ್ರಮದಲ್ಲಿಯೂ ಆತ ಪ್ರಮುಖ ಆರೋಪಿ. ಆತ ಮಹಾರಾಷ್ಟ್ರಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ. ಅದೇನೂ ದೊಡ್ಡ ವಿಷಯವಲ್ಲ. ಆತನನ್ನು ನಿಶ್ಚಿತವಾಗಿಯೂ ಬಂಧಿಸಲಾಗುತ್ತದೆ. ಆತನಿಗೆ ನೆರವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್‌ ಎಚ್ಚರಿಸಿದ್ದಾರೆ.

ಪರೀಕ್ಷಾ ಅಕ್ರಮದ ರೂವಾರಿ ಆರ್‌.ಡಿ. ಪಾಟೀಲ ಬಂಧನಕ್ಕೆ ಈಗಲೂ ಎಲ್ಲಾ ಪ್ರಯತ್ನಗಳು ನಡೆದಿವೆ. ಮಾಹಿತಿ ಸಿಕ್ಕ ಬಳಿಕ ನಾವು ಅಲ್ಲಿಗೆ ಹೋಗುವುದರೊಳಗೆ ಆತ ಗೋಡೆ ಹಾರಿ ತಪ್ಪಿಸಿಕೊಂಡಿರುವ ವಿಚಾರ ಗೊತ್ತಾಯಿತು. ಪೊಲೀಸರು ಅಲ್ಲಿಗೆ ಹೋದಾಗಲೇ ಅಲ್ಲವೇ ಅವನು ತಪ್ಪಿಸಿಕೊಂಡಿದ್ದು. ಇದರಿಂದ ಪೊಲೀಸ್‌ ಮಾಹಿತಿ ಸರಿಯಾಗಿಯೇ ಇದೆ. ಆದರೆ ಕೆಲವು ಬಾರಿ ನಿರೀಕ್ಷಿತ ದಾಳಿ ಫಲ ಕೊಡುವುದಿಲ್ಲ. ಈ ಹಿನ್ನೆಲೆಯಲ್ಲಿ ಹುಡುಕಾಟ ಇನ್ನಷ್ಟು ತೀವ್ರಗೊಳಿಸಲಾಗಿದೆ.
 -ಚೇತನ್‌ ಆರ್‌.,
ಕಲಬುರಗಿ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.