Bengaluru; ವಿಮಾನ ಪ್ರಯಾಣದ ವೇಳೆ ಮಹಿಳೆಗೆ ಕಿರುಕುಳ: ವ್ಯಕ್ತಿ ಬಂಧನ
ಜರ್ಮನಿ to ಬೆಂಗಳೂರು ; ನಿದ್ದೆ ಮಾಡುತ್ತಿದ್ದ ವೇಳೆ ಖಾಸಗಿ ಅಂಗಕ್ಕೆ ...
Team Udayavani, Nov 8, 2023, 5:54 PM IST
ಬೆಂಗಳೂರು : ಜರ್ಮನಿಯ ಫ್ರಾಂಕ್ಫರ್ಟ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ನವೆಂಬರ್ 6 ರಂದು ಈ ಘಟನೆ ನಡೆದಿದ್ದು, ಆಂಧ್ರಪ್ರದೇಶದ ತಿರುಪತಿ ಮೂಲದ 32 ವರ್ಷದ ಮಹಿಳೆ ಮಲಗಿದ್ದಾಗ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ನಂತರ ಮಹಿಳೆ ಫ್ಲೈಟ್ ಅಟೆಂಡೆಂಟ್ಗೆ ವಿನಂತಿಸಿ ಸೀಟನ್ನು ಬದಲಾಯಿಸಿದ್ದಾರೆ. ಆ ಬಳಿಕವೂ ಆ ವ್ಯಕ್ತಿ ಕಿರುಕುಳ ನೀಡುವುದನ್ನು ಮುಂದುವರೆಸಿದ್ದಾನೆ. ವಿಮಾನ ಬೆಂಗಳೂರಿನಲ್ಲಿ ಇಳಿದ ನಂತರ ಮಹಿಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.