Bengaluru ವಿವಿಧ ಕ್ಷೇತ್ರಗಳ 25 ಸಾಧಕರಿಗೆ ರಾಜ್ಯಪಾಲ ಗೆಹ್ಲೋಟ್ ಅವರಿಂದ ಆತ್ಮೀಯ ಗೌರವ

"ಚಾಂಪಿಯನ್ಸ್‌ ಆಫ್ ಚೇಂಜ್‌ ಕರ್ನಾಟಕ' ಪ್ರಶಸ್ತಿ ಪ್ರದಾನ

Team Udayavani, Nov 8, 2023, 8:57 PM IST

Bengaluru ವಿವಿಧ ಕ್ಷೇತ್ರಗಳ 25 ಸಾಧಕರಿಗೆ ರಾಜ್ಯಪಾಲ ಗೆಹ್ಲೋಟ್ ಅವರಿಂದ ಆತ್ಮೀಯ ಗೌರವ

ಬೆಂಗಳೂರು: ರಾಜ್ಯಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಕೊಡುಗೆ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ, ಸಂಸದ ತೇಜಸ್ವಿ ಸೂರ್ಯ, ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್‌ ಸೇರಿದಂತೆ ವಿವಿಧ ಕ್ಷೇತ್ರಗಳ 25 ಸಾಧಕರಿಗೆ ಭಾರತೀಯ ಆರ್ಥಿಕತೆಯ ಸಂವಾದ ವೇದಿಕೆ (ಇಂಟರ್‌ಆ್ಯಕ್ಟಿವ್‌ ಫೋರಂ ಆನ್‌ ಇಂಡಿಯನ್‌ ಎಕಾನಮಿ ಐಎಫ್ಐಇ) ಮಂಗಳವಾರ “ಚಾಂಪಿಯನ್ಸ್‌ ಆಫ್ ಚೇಂಜ್‌ ಕರ್ನಾಟಕ’ ಪ್ರಶಸ್ತಿ ನೀಡಿ ಗೌರವಿಸಿತು.

ನಗರದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಈ ಅಪರೂಪದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಕೊಡುಗೆ ನೀಡಿದ ಮಹನೀಯರ ಸಮ್ಮಿಲನಕ್ಕೆ ವೇದಿಕೆಯಾಗಿತ್ತು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸಾಧಕರನ್ನು ಆತ್ಮೀಯವಾಗಿ ಗೌರವಿಸಿದರು.

ನಂತರ ಮಾತನಾಡಿದ ರಾಜ್ಯಪಾಲರು, “ಸಮಾಜದಲ್ಲಿ ಮಹತ್ವದ ಬದಲಾವಣೆ ತರುವಲ್ಲಿ ಯಶಸ್ವಿಯಾದ ಕರ್ನಾಟಕದ ಮಹಾನ್‌ ವ್ಯಕ್ತಿಗಳನ್ನು ಗೌರವಿಸುವ ಅವಕಾಶ ನನಗೆ ಸಿಕ್ಕಿದೆ. ಇದು ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ. ಈ ಸಾಧಕರ ಸಾಧನೆ ಇಷ್ಟಕ್ಕೇ ನಿಲ್ಲಬಾರದು. ಬದಲಾವಣೆ ಪ್ರಕೃತಿಯ ನಿಯಮ. ತಮ್ಮ ಪ್ರಯತ್ನದ ಮೂಲಕ ಸಮಾಜ, ಸಾರ್ವಜನಿಕ ಹಿತಾಸಕ್ತಿಯಿಂದ ಮಾಡುತ್ತಿರುವ ಕೆಲಸ ಮುಂದುವರಿಯಬೇಕು. ಆ ಮೂಲಕ ಇತರರಿಗೆ ಮಾದರಿಯಾಗಬೇಕು’ ಎಂದು ಸಂತಸ ವ್ಯಕ್ತಪಡಿಸಿದರು.

ದೇಶದಲ್ಲಿ ಅನೇಕ ಮಹಾನ್‌ ವ್ಯಕ್ತಿಗಳು ತಮ್ಮ ಸಂಪತ್ತು ಮತ್ತು ವೈಭವವನ್ನು ತ್ಯಾಗ ಮಾಡಿದ್ದಾರೆ. ದೇಶ, ಸಮಾಜದ ಕಲ್ಯಾಣ, ಧರ್ಮ ಮತ್ತು ಸಂಸ್ಕೃತಿಯನ್ನು ಬಲಪಡಿಸಲು ನಿರಂತರ ಸೇವೆಯಲ್ಲಿ ತೊಡಗಿದ್ದಾರೆ. ಅಂತಹ ಮಹಾನ್‌ ವ್ಯಕ್ತಿಗಳಿಂದ ಪ್ರೇರಣೆ ಪಡೆದು, ಪರೋಪಕಾರ ಮನೋಭಾವದಿಂದ ಮಾನವ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.

ದೇಶ ನಿರ್ಮಾಣಕ್ಕೆ ಎಲ್ಲ ಕ್ಷೇತ್ರದ ಕೊಡುಗೆ ಮುಖ್ಯ: ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, “ದೇಶವನ್ನು ಸಮೃದ್ಧವಾಗಿ ಕಟ್ಟಲು ಪ್ರತಿ ಕ್ಷೇತ್ರದ ಕೊಡುಗೆ ಕೂಡ ಮಹತ್ವದ್ದಾಗಿದೆ. ಸಿನಿಮಾ ರಂಗವು ಸಂಸ್ಕೃತಿ, ಸಮಾಜ ಮತ್ತು ಆಡಳಿತವನ್ನು ಬೆಳೆಸಿದರೆ, ಉಳಿದ ಕ್ಷೇತ್ರಗಳು ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿವೆ. ಹಳೆಯ ಸಂಪ್ರದಾಯದ ಜತೆಗೆ ವರ್ತಮಾನವನ್ನು ಉಳಿಸಿಕೊಂಡು, ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಯುವಕರಿಗೆ ಮಾರ್ಗದರ್ಶನ ಮಾಡಬೇಕಿದೆ’ ಎಂದು ತಿಳಿಸಿದರು.

ನಟ ಉಪೇಂದ್ರ ಮಾತನಾಡಿ, “ಜೀವನದಲ್ಲಿ ಮತ್ತೊಬ್ಬರನ್ನು ಅನುಸರಿಸದೆ, ಸ್ವಂತಿಕೆ ಉಳಿಸಿಕೊಳ್ಳಬೇಕು. ಆ ಸ್ವಂತಿಕೆಯ ಹೊಸತನಕ್ಕೆ ನಾಂದಿ ಆಗಲಿದೆ. ಮಹಾನ್‌ ಸಾಧಕರೊಂದಿಗೆ ಪ್ರಶಸ್ತಿ ಸ್ವೀಕರಿಸುತ್ತಿರುವುದು ಖುಷಿ ಅನಿಸುತ್ತಿದೆ’ ಎಂದರು.

ಪ್ರಶಸ್ತಿ ತೀರ್ಪುಗಾರ ತಂಡದ ಅಧ್ಯಕ್ಷ ಹಾಗೂ ನಿವೃತ್ತ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ಮಾತನಾಡಿ, ಸಮಾಜಕ್ಕೆ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ಹೀಗೆ ಸನ್ಮಾನಿಸುವುದು ಮಾದರಿ ಮತ್ತು ಪ್ರೋತ್ಸಾಹದಾಯಕವಾಗಿದೆ. ಈ ಗೌರವವು ಸಾಧಕರ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.
ಚಾಂಪಿಯನ್ಸ್‌ ಆಫ್ ಚೇಂಜ್‌ ಪ್ರಶಸ್ತಿಯ ಸಂಸ್ಥಾಪಕ ಹಾಗೂ ವಕೀಲ ನಂದನ್‌ ಝಾ, ಚಾಂಪಿಯನ್ಸ್‌ ಆಫ್ ಚೇಂಜ್‌ ಪ್ರಶಸ್ತಿಗಳ ಪೋಷಕ ಶ್ಯಾಮ್‌ ಜಾಜು ಮತ್ತಿತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರು
ಸಮಾಜಸೇವೆ: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಪರಸರವಾದಿ ತುಳಸಿಗೌಡ, ವಿಆರ್‌ಎಲ್‌ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ, ಸಂಸದ ತೇಜಸ್ವಿ ಸೂರ್ಯ, ನಟಿ ಖುಷ್ಬೂ ಯಾದವ್‌, ಉದ್ಯಮಿಗಳಾದ ಬಿಪಿನ್‌ ದಯಾಳ್‌, ಮಯಾಂಕ್‌ ಗೋಯಲ್‌, ಉಪೇಂದ್ರರಾವ್‌ ಕೊಳ್ಳು, ಬಿಪಿನ್‌ ಚಂದ್ರ, ಡಾ.ಸೋಮದತ್ತಸಿಂಗ್‌, ರಾಜೇಶ್‌ ರೆಡ್ಡಿ ಶಿವಶಂಕರ್‌.

ಸಂಸ್ಕೃತಿ: ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ನಟರಾದ ಡಾ.ವಿಷ್ಣುವರ್ಧನ್‌ (ಮರಣೋತ್ತರ), ಉಪೇಂದ್ರ, ಡಾ.ವಿ. ರವಿಚಂದ್ರನ್‌.

ವಿಜ್ಞಾನ ಮತ್ತು ನಾವೀನ್ಯತೆ: ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌. ರಾವ್‌, ನಿಖೀಲ್‌ ಪಾಲ್‌.

ಆವಿಷ್ಕಾರ ಮತ್ತು ಕೌಶಲ್ಯ ಅಭಿವೃದ್ಧಿ: ಡಾ.ರಾಜಾ ವಿಜಯ್‌ ಕುಮಾರ್‌, ಡಾ.ಡೈಸಿ ಬಾಗಿc.

ಸಾಮಾಜಿಕ ಕಾರ್ಯಕರ್ತ
: ಬಿ. ರಾಮಚಂದ್ರ

ಕ್ರೀಡೆ:
ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌, ರಾಜೇಶ್ವರಿ ಗಾಯಕವಾಡ, ಸೋಮಜೀತ್‌ಸಿಂಗ್‌.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.