Operation Mumbai 2.0? ಗುಪ್ತಚರ ವರದಿ ಹಿನ್ನೆಲೆಯಲ್ಲಿ ಡಿಸಿಎಂ ಬಾಂಬ್
Team Udayavani, Nov 9, 2023, 6:45 AM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದು ಮಾಡುತ್ತಿದ್ದು, ಈಗಲೂ ಮುಂಬೈ ಕಾರಸ್ಥಾನವಾಗಿದೆ ಎನ್ನಲಾಗಿದೆ.
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಈ ಕುರಿತು ಸಭೆ ನಡೆದಿದೆ ಎಂಬ ಸುದ್ದಿಗಳ ಮಧ್ಯೆಯೇ, ಹೊಸದಿಲ್ಲಿಯಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕಸಭಾ ಚುನಾವಣೆಗೆ ಮೊದಲೇ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆದಿದೆ. ನಾನು ಏನನ್ನೂ ಹೇಳಲಾರೆ. ಅವರ ಪಕ್ಷದ, ನಾಯಕತ್ವದ ಪರಿಸ್ಥಿತಿ ಹದಗೆಟ್ಟಿದೆ. ಅದನ್ನು ಹೊರಗೆ ಹೇಳಿಕೊಳ್ಳಲು ಆಗದೆ, ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
“ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ ನಮ್ಮ ಒಬ್ಬ ಶಾಸಕರನ್ನೂ ಸೆಳೆಯಲು ಸಾಧ್ಯವಿಲ್ಲ’ ಎಂದರು. ಸರಕಾರ ಬೀಳಿಸಲು ನೂರಾರು ಯತ್ನ ನಡೆದಿವೆ. ಈ ಬಗ್ಗೆ ಸಿಎಂಗೂ ಮಾಹಿತಿ ನೀಡಲಾಗಿದೆ ಎಂದರು. ನಮ್ಮಿಂದ ಹೋದವರೇ ಎಂದರು.
ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, “ಬಹುಶಃ ಮುಂಬೈ ಗುಂಗು ಅವರನ್ನು ಕಾಡುತ್ತಿ ರಬೇಕು. ಮೊದಲು ನಿಮ್ಮ ಪಕ್ಷದ ಶಾಸಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ’ ಎಂದಿದ್ದಾರೆ.
ಎಸ್ಟಿಎಸ್ ವರ್ಸಸ್ ಈಶ್ವರಪ್ಪ
ಜಾಮೂನು ಕೊಟ್ಟು ಪಕ್ಷಕ್ಕೆ ಸೇರಿಸಿಕೊಳ್ಳುವ ಬಿಜೆಪಿಯವರು ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದವನನ್ನು ಅವರಾಗಿಯೇ ಸೇರಿಸಿಕೊಂಡರು. ಈಗ ಸೋಮಶೇಖರ್ ಪಕ್ಷ ಬಿಟ್ಟರೆ ಬಿಡಲಿ ಎನ್ನುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಬಿಜೆಪಿ ಮಾಜಿ ಶಾಸಕ
ಎಸ್.ಟಿ. ಸೋಮಶೇಖರ್
ಸೋಮಶೇಖರ್ ಸೇರಿ 17 ಶಾಸಕರು ಬಿಜೆಪಿಗೆ ಬಂದಿದ್ದರು. ಸೋಮಶೇಖರ್ ವಿಷ ಕುಡಿದಿದ್ದಾರಾ? ಅದು ಹೇಗೆ ಸಾಧ್ಯ? ಬೊಮ್ಮಾಯಿ ಸಿಎಂ ಆದಾಗ ವಿಷ ಕೊಟ್ಟಿದ್ದೇವಾ? ಆಗ ಅನೇಕರು ಜಾಮೂನ್ ತಿಂದಿದ್ದಾರೆ ಎಂದಿದ್ದಾರೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ.
ರಿವರ್ಸ್ ಆಪರೇಷನ್
ಈ ತಿಂಗಳ 15ರಂದು ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಬೇರೆ ಪಕ್ಷಗಳ ನಾಯಕರ ಸೇರ್ಪಡೆಯ ಸುಳಿವು ನೀಡಿದ್ದಾರೆ. ನ.14ರ ಸಂಜೆ ಯಾರು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಕೊಡುವುದಾಗಿ ಡಿಸಿಎಂ ಹೇಳಿದ್ದಾರೆ.
ಬಿಜೆಪಿ ಸಂಪರ್ಕದಲ್ಲಿ 45 ಶಾಸಕರು
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸಹ ಬಾಂಬ್ ಸಿಡಿಸಿದ್ದು, ಕಾಂಗ್ರೆಸ್ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಇದನ್ನು ತಡೆಯಲು ಸಿಎಂ, ಡಿಸಿಎಂ ಬ್ರೆಕ್ಫಾಸ್ಟ್ ಮತ್ತು ಡಿನ್ನರ್ ಮೀಟಿಂಗ್ ಮಾಡುತ್ತಿದ್ದಾರೆ ಎಂದಿದ್ದಾರೆ. ಸಿಎಂ ಅವರೇ ಉಪಹಾರ ನೆಪದಲ್ಲಿ ಸಚಿವರ ಸಭೆ ಮಾಡಿ, ವಿಪಕ್ಷಗಳ 40ರಿಂದ 50 ಶಾಸಕರು, ಮುಖಂಡರನ್ನು ಕರೆತರುವ ಟಾಸ್ಕ್ ನೀಡಲಾಗಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.