Politics; ರಾಜ್ಯಪಾಲರು vs ರಾಜ್ಯಗಳು: ಸಂಘರ್ಷ ಇನ್ನಷ್ಟು ತಾರಕಕ್ಕೆ

ಸರಕಾರಗಳು ಸುಪ್ರೀಂನಲ್ಲಿ ಸಮರ ಮುಂದುವರಿಸಿವೆ....ರಾಜ್ಯಪಾಲರ ವಿರುದ್ಧದ ಆರೋಪವೇನು?

Team Udayavani, Nov 9, 2023, 5:20 AM IST

supreem

ರಾಜ್ಯ ಸರಕಾರಗಳು ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಇನ್ನಷ್ಟು ತಾರಕಕ್ಕೇರಿದ್ದು, ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದೆ. ಕೇರಳ ಸರಕಾರ ಬುಧವಾರ ಮತ್ತೂಮ್ಮೆ ರಾಜ್ಯಪಾಲ ಆರೀಫ್ ಖಾನ್‌ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಎರಡೇ ವಾರದಲ್ಲಿ ಎರಡನೇ ಬಾರಿಗೆ ಅರ್ಜಿ ಹಾಕಿದೆ ಕೇರಳ. ಈ ರಾಜ್ಯವಷ್ಟೇ ಅಲ್ಲ, ಪಶ್ಚಿಮ ಬಂಗಾಲ, ತಮಿಳುನಾಡು, ಪಂಜಾಬ್‌ಗಳಲ್ಲೂ ಸರಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಮುಂದುವರಿದಿದೆ. ಸದ್ಯ ತಮಿಳುನಾಡು, ಕೇರಳ ಮತ್ತು ಪಂಜಾಬ್‌ ಸರಕಾರಗಳು ಸುಪ್ರೀಂನಲ್ಲಿ ಸಮರ ಮುಂದುವರಿಸಿವೆ.

ರಾಜ್ಯಪಾಲರ ವಿರುದ್ಧದ ಆರೋಪವೇನು?
ತಮಿಳುನಾಡು: ಈ ರಾಜ್ಯದಲ್ಲಿ ಎನ್‌.ರವಿ ಅವರು ರಾಜ್ಯಪಾಲರಾಗಿದ್ದು, ಚುನಾಯಿತ ಸರಕಾರವೊಂದು ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕದೇ ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ. ಇವರು ಈ ಮಸೂದೆಗಳಿಗೆ ಸಹಿಯನ್ನೂ ಹಾಕುತ್ತಿಲ್ಲ ಅಥವಾ ಸ್ಪಷ್ಟನೆ ಕೋರಿ ವಾಪಸ್‌ ಕಳುಹಿಸುತ್ತಲೂ ಇಲ್ಲ. ಅವರೇ ನಮಗೆ ರಾಜಕೀಯ ವೈರಿಗಳಂತೆ ಆಗಿದ್ದಾರೆ. ಈ ಮೂಲಕ ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದ್ದಾರೆ ಎಂಬುದು ತಮಿಳುನಾಡಿನ ಡಿಎಂಕೆ ಸರಕಾರದ ಆರೋಪ.

ಕೇರಳ: ವಿಧಾನಸಭೆಯಲ್ಲಿ ಎಂಟು ಮಸೂದೆಗಳನ್ನು ಅಂಗೀಕರಿಸಿ ರಾಜ್ಯಪಾಲ ಆರಿಫ್ ಖಾನ್‌ ಅವರ ಸಹಿಗಾಗಿ ಕಳುಹಿಸಲಾಗಿದೆ. ಈ ಮಸೂದೆಗಳು ಕೇವಲ ತಿಂಗಳುಗಳಲ್ಲಿ ಮಾತ್ರ ಬಾಕಿ ಉಳಿದಿಲ್ಲ, ವರ್ಷಗಳ ಲೆಕ್ಕದಲ್ಲಿ ಅಲ್ಲೇ ಇವೆ. ಈ ಎಂಟು ಮಸೂದೆಗಳಲ್ಲಿ ಮೂರು ಮಸೂದೆಗಳಿಗೆ ಎರಡು ವರ್ಷಗಳಿಂದ ಸಹಿ ಹಾಕದೇ ಹಾಗೆಯೇ ಉಳಿಸಿಕೊಂಡಿದ್ದಾರೆ ಎಂದು ಇಲ್ಲಿನ ಎಲ್‌ಡಿಎಫ್ ಸರಕಾರ ಆರೋಪಿಸಿದೆ.

ಪಂಜಾಬ್‌: ಪಂಜಾಬ್‌ ಕೂಡ ತಮ್ಮ ರಾಜ್ಯಪಾಲ ಬನ್ವಾರಿ ಲಾಲ್‌ ಪುರೋಹಿತ್‌ ಅವರು ಮಸೂದೆಗಳಿಗೆ ಸಹಿ ಹಾಕದೇ ಹಾಗೆಯೇ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ. ಪಂಜಾಬ್‌ ವಿಧಾನಸಭೆಯಲ್ಲಿ ಏಳು ಮಸೂದೆಗಳಿಗೆ ಒಪ್ಪಿಗೆ ನೀಡಲಾಗಿದ್ದು, ಇವುಗಳು ರಾಜ್ಯಪಾಲರ ಭವನದಲ್ಲಿ ಹಾಗೆಯೇ ಉಳಿದಿವೆ ಎಂಬುದು ಆಪ್‌ ಸರಕಾರದ ಆರೋಪ.

ತೆಲಂಗಾಣ ವರ್ಸಸ್‌ ರಾಜ್ಯಪಾಲ
ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವುದು ಇದೇ ಮೊದಲೇನಲ್ಲ. ಈ ವರ್ಷದ ಎಪ್ರಿಲ್‌ನಲ್ಲಿ ತೆಲಂಗಾಣ ಸರಕಾರ, ರಾಜ್ಯಪಾಲರ ನಡೆ ವಿರೋಧಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. 2022ರ ಸೆಪ್ಟಂಬರ್‌ನಿಂದಲೂ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್‌ ಮಸೂದೆಗಳಿಗೆ ಸಹಿ ಹಾಕದೇ ಹಾಗೆಯೇ ಉಳಿಸಿಕೊಂಡಿದ್ದಾರೆ ಎಂದು ಬಿಆರ್‌ಎಸ್‌ ಸರಕಾರ ಆರೋಪಿಸಿತ್ತು. ಸುಪ್ರೀಂ ಮಧ್ಯಪ್ರವೇಶದ ಬಳಿಕ ರಾಜ್ಯಪಾಲರು ಸಹಿ ಹಾಕಿದ್ದರು. ಈ ಪ್ರಕರಣದಲ್ಲಿ ವಾದಿಸಿದ್ದ ಹಿರಿಯ ವಕೀಲ ದುಷ್ಯಂತ್‌ ದವೆ ಅವರು, ರಾಜ್ಯ ಸರಕಾರಗಳು ರಾಜ್ಯಪಾಲರ ಅಧೀನದಲ್ಲಿ ಕಾರ್ಯ ನಿರ್ವಹಿಸುವಂತೆ ಆಗಿದೆ ಎಂದು ವಾದಿಸಿದ್ದರು.

ಮಸೂದೆಗಳ ಅಂಗೀಕಾರ ಪ್ರಕ್ರಿಯೆ
ರಾಜ್ಯ ಸರಕಾರಗಳು ಮಸೂದೆಯೊಂದನ್ನು ಮೊದಲಿಗೆ ತಮ್ಮ ರಾಜ್ಯಗಳ ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯುತ್ತವೆ. ಆ ರಾಜ್ಯದಲ್ಲಿ ವಿಧಾನಪರಿಷತ್‌ ಇದ್ದರೆ ಅಲ್ಲಿಗೆ ಕಳುಹಿಸಿ ಅಲ್ಲಿಯೂ ಒಪ್ಪಿಗೆ ಪಡೆದ ಮೇಲೆ, ಅಂತಿಮವಾಗಿ ಸಹಿಗಾಗಿ ರಾಜ್ಯಪಾಲರಲ್ಲಿಗೆ ಕಳುಹಿಸಲಾಗುತ್ತದೆ. ಈ ಬಗ್ಗೆ ಸಂವಿಧಾನದ 200ನೇ ಪರಿಚ್ಛೇದದಲ್ಲಿ ಉಲ್ಲೇಖೀಸಲಾಗಿದೆ. ಇದರಂತೆ, ರಾಜ್ಯಪಾಲರು ಈ ಮಸೂದೆಗೆ ಅಂಕಿತ ಹಾಕಿ ಕಳುಹಿಸಬಹುದು ಅಥವಾ ಸ್ಪಷ್ಟನೆ ಕೋರಿ ಸರಕಾರಕ್ಕೆ ವಾಪಸ್‌ ಕಳುಹಿಸಬಹುದು. ಆದರೆ ಹಣಕಾಸು ಮಸೂದೆಯಾಗಿದ್ದರೆ ಇದಕ್ಕೆ ಅಂಕಿತ ಹಾಕಬೇಕಾಗುತ್ತದೆ. ಇದರ ಜತೆಗೆ ಮಸೂದೆಯೊಂದು ರಾಷ್ಟ್ರಪತಿಗಳ ಮಟ್ಟದಲ್ಲೇ ನಿರ್ಧಾರವಾಗಲಿ ಎಂದು ರಾಜ್ಯಪಾಲರಿಗೆ ಅನ್ನಿಸಿದರೆ, ಹೈಕೋರ್ಟ್‌ನ ವ್ಯಾಪ್ತಿಗೂ ಮೀರಿದಂಥ ವಿಷಯವಿದ್ದರೆ ಅದನ್ನು ಅಲ್ಲಿಗೆ ಕಳುಹಿಸಬಹುದು ಎಂದು ಇರಿಸಿಕೊಳ್ಳಬಹುದು. ಒಂದು ವೇಳೆ ರಾಜ್ಯಪಾಲರು ಸಹಿ ಹಾಕದೇ, ಕೆಲವೊಂದು ತಿದ್ದುಪಡಿ ಅಥವಾ ಈ ಮಸೂದೆ ಅಗತ್ಯವಿದೆಯೇ? ಎಂಬ ಟಿಪ್ಪಣಿ ಹಾಕಿ ತ್ವರಿತವಾಗಿ ಸರಕಾರಕ್ಕೆ ವಾಪಸ್‌ ಕಳುಹಿಸಬೇಕು. ಈ ವೇಳೆ ವಿಧಾನಸಭೆಗಳು ರಾಜ್ಯಪಾಲರ ಸಲಹೆಯನ್ನು ನೋಡಿ, ವಾಪಸ್‌ ವಿಧಾನಸಭೆಯಲ್ಲಿ ಅಂಗೀಕಾರ ಮಾಡಿ ಸಹಿಗಾಗಿ ವಾಪಸ್‌ ಕಳುಹಿಸುತ್ತವೆ. ಆಗ ರಾಜ್ಯಪಾಲರು ಮಸೂದೆಗೆ ಸಹಿ ಹಾಕಲೇಬೇಕು. ಏಕೆಂದರೆ ಸಾಂವಿಧಾನಿಕ ಮುಖ್ಯಸ್ಥರು ಜನರಿಂದ ಆಯ್ಕೆಯಾದ ಚುನಾಯಿತ ಸರಕಾರಗಳ ನಿರ್ಧಾರವನ್ನು ಗೌರವಿಸಲೇಬೇಕಾಗುತ್ತದೆ.

ರಾಜ್ಯಗಳ ವಾದವೇನು?
ಈ ಹಿಂದೆ ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲೇ ಸಮಂಜಸವಾದ ಸಮಯದ ಮಿತಿಯೊಳಗೆ ಮಸೂದೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದ್ದರೂ, ಇಂತಿಷ್ಟೇ ಸಮಯ ಎಂಬುದಾಗಿ ಫಿಕ್ಸ್‌ ಮಾಡಿಲ್ಲ. ಹೀಗಾಗಿ ರಾಜ್ಯಪಾಲರು ನಿಗದಿತ ಸಮಯದಲ್ಲಿ ಮಸೂದೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ. ಕೇರಳ ಸರಕಾರ 1962ರಲ್ಲಿ ಸಲ್ಲಿಕೆ ಮಾಡಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆದು, ತೀರ್ಪು ಬಂದಿದ್ದರೂ, ಈಗಲೂ ಪಾಲನೆಯಾಗುತ್ತಿಲ್ಲ. ಆಗ ಪಂಚ ಸದಸ್ಯರ ಸಾಂವಿಧಾನಿಕ ಪೀಠವೇ ವಿಚಾರಣೆ ನಡೆಸಿತ್ತು. ಈಗ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚನೆ ಮಾಡಿ, ಇದಕ್ಕೊಂದು ತಾರ್ಕಿಕ ಅಂತ್ಯ ಹಾಡಬೇಕು ಎಂದು ಕೇರಳ ಸರಕಾರ ಮನವಿ ಮಾಡಿದೆ.

ರಾಜ್ಯಪಾಲರಿಗೆ ವಿವೇಚನಾಧಿಕಾರ ಇದೆಯೇ?
ಸಂವಿಧಾನದ 200ನೇ ಪರಿಚ್ಛೇದದ ಪ್ರಕಾರ, ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಕೆ ಮಾಡಿ, ವಿಧಾನಸಭೆಗಳಿಗೆ ಮಸೂದೆಗಳನ್ನು ವಾಪಸ್‌ ಕಳುಹಿಸಬಹುದು. ಈ ಸಂದರ್ಭದಲ್ಲಿ ಮೊದಲೇ ಹೇಳಿದ ಹಾಗೆ ಕೆಲವೊಂದು ತಿದ್ದುಪಡಿ ಅಥವಾ ಸಲಹೆ ನೀಡಬಹುದು. ಆದರೆ ಇದೇ ಅಂತ್ಯವಾಗುವುದಿಲ್ಲ. ಸಂವಿಧಾನವೇ ಹೇಳಿದ ಹಾಗೆ, ರಾಜ್ಯಪಾಲರು ರಾಜ್ಯಗಳ ಸಚಿವ ಸಂಪುಟದ ಸಲಹೆ ಮೇರೆಗೆ ಕಾರ್ಯನಿರ್ವಹಿಸಬೇಕು. ಹೀಗಾಗಿ ರಾಜ್ಯಪಾಲರು ಸ್ವತಂತ್ರವಾಗಿ ಕಾರ್ಯನಿರ್ವಹಿಸುವಂತಿಲ್ಲ.

ಮಸೂದೆಗಳನ್ನು ಯಾವಾಗ ವಾಪಸ್‌ ಕಳುಹಿಸಬೇಕು?
ವಿಧಾನಸಭೆಯಲ್ಲಿ ಮಸೂದೆಗೆ ಅಂಗೀಕಾರ ಸಿಕ್ಕ ಬಳಿಕ, ರಾಜ್ಯಪಾಲರಲ್ಲಿಗೆ ಸಹಿಗಾಗಿ ಬರುತ್ತವೆ. ಈ ಮಸೂದೆಗೆ ಅವರು ಆದಷ್ಟು ಬೇಗ ಸಹಿ ಹಾಕಬೇಕು ಅಥವಾ ವಾಪಸ್‌ ಕಳುಹಿಸಬೇಕು. ಯಾವುದೇ ಕಾರಣಕ್ಕೂ ತಮ್ಮಲ್ಲೇ ಇರಿಸಿಕೊಳ್ಳಬಾರದು. ಈ ಹಿಂದಿನ ಸುಪ್ರೀಂ ಕೋರ್ಟ್‌ನ ತೀರ್ಪುಗಳ ಆಧಾರದ ಮೇಲೆ ಹೇಳುವುದಾದರೆ, ಸಮಂಜಸ ಸಮಯ, ಅಂದರೆ 3 ತಿಂಗಳ ಒಳಗೆ ಮಸೂದೆಯನ್ನು ಇತ್ಯರ್ಥ ಮಾಡಬೇಕು.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.