Puttur ಬಾಡಿ ವಾರೆಂಟ್‌ನಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರು
Team Udayavani, Nov 9, 2023, 12:24 AM IST
ಪುತ್ತೂರು: ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಯಾಗಿ ಜೈಲಿನಲ್ಲಿದ್ದ ಅಪರಾಧಿ ರವಿ ಎಂಬಾತನನ್ನು ಬಡಗನ್ನೂರಿನ ಕುದ್ಕಾಡಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ನ್ಯಾಯಾಲಯದಿಂದ ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದುಕೊಂಡ ಗ್ರಾಮಾಂತರ ಪೊಲೀಸರು ನ. 8ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ 2 ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೆರೋಲ್‌ನಲ್ಲಿ ಹೊರಗೆ ಬಂದಿದ್ದ ಅವಧಿಯಲ್ಲಿ ದರೋಡೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯಾಗಿದ್ದ ಕೇರಳದ ಇಚಿಲಂಕೋಡು ಕುಂಪಳ ಪಚ್ಚಂಬಳ ನಿವಾಸಿ ರವಿ ಎಂಬಾತನನ್ನು ಕಸ್ಟಡಿಗೆ ನೀಡಲು ಕಾರಾಗೃಹ ಅಧಿಕಾರಿಗಳಿಗೆ ಆದೇಶಿಸುವಂತೆ ಕೋರಿ ಪೊಲೀಸರು ಪುತ್ತೂರು ನ್ಯಾಯಾಲಯದಲ್ಲಿ ಬಾಡಿ ವಾರಂಟ್ ಅರ್ಜಿ ಸಲ್ಲಿಸಿದ್ದರು.
ದರೋಡೆ ಪ್ರಕರಣಕ್ಕೆ ರವಿ ಸಂಚು ರೂಪಿಸಿದ್ದ ವಿಚಾರವನ್ನು ಬಂಧಿತ ಇತರ ಆರೋಪಿಗಳು ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಡಿ ವಾರಂಟ್ ಅರ್ಜಿ ಸಲ್ಲಿಸಿದ್ದರು. ರವಿ ಈ ಹಿಂದೆ ಕಾಸರಗೋಡು ಜಬ್ಬಾರ್ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಜೀವಾವಧಿ ಶಿಕ್ಷೆಗೊಳಗಾಗಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗ: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Bantwala: ಕಚೇರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಅರಣ್ಯ ಇಲಾಖೆ ಸಿಬ್ಬಂದಿ
Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ
Sri Kukke Subrahmanya Temple: ಇಂದು ಲಕ್ಷದೀಪೋತ್ಸವ, ಬೀದಿ ಉರುಳು ಸೇವೆ ಆರಂಭ
Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.