Fraud Case ಸ್ಟಾರ್ ರೇಟಿಂಗ್ ಟಾಸ್ಕ್: 21.50 ಲಕ್ಷ ರೂ. ವಂಚನೆ
Team Udayavani, Nov 9, 2023, 12:30 AM IST
ಮಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಿ 21.51 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.
ದೂರುದಾರರ ವಾಟ್ಸ್ಆ್ಯಪ್ ಸಂಖ್ಯೆಗೆ ನ. 4ರಂದು +84334590184 ಸಂಖ್ಯೆಯಿಂದ ಬಂದ ಸಂದೇಶದಲ್ಲಿ ಒಂದು ಲಿಂಕ್ ಇತ್ತು. ಅದನ್ನು ತೆರೆದಾಗ ಅವರ ಸಂಖ್ಯೆ ಟೆಲಿಗ್ರಾಂ ಆ್ಯಪ್ಗೆ ಸೇರ್ಪಡೆಗೊಂಡಿತು.
ಹಣ ಗಳಿಸುವ ಆಮಿಷ
ಅನಂತರ ಅವರಿಗೆ ಸ್ಟಾರ್ ರೇಟಿಂಗ್ ಆ್ಯಪ್ ಮೂಲಕ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಆಮಿಷ ನೀಡಲಾಯಿತು. ಅದನ್ನು ನಂಬಿದ ದೂರುದಾರರು ಮೊದಲು 5,000 ರೂ. ಸಂದಾಯ ಮಾಡಿದರು. ಅದಕ್ಕೆ ಪ್ರತಿಯಾಗಿ ಅವರ ಖಾತೆಗೆ 6,500 ರೂ. ಹಣ ಜಮೆಯಾಗಿತ್ತು. ಅನಂತರ ಅವರಿಗೆ ಗ್ರೂಪ್ ಮರ್ಚೆಂಟ್ ಟಾಸ್ಕ್ ಪೂರ್ಣಗೊಳಿಸಲು ಸೂಚಿಸಲಾಯಿತು. ಅದಕ್ಕೆ ಹಣ ಪಾವತಿಸಿದರೆ ಹೆಚ್ಚು ಹಣ ವಾಪಸ್ ನೀಡುವುದಾಗಿ ತಿಳಿಸಲಾಯಿತು. ಅದನ್ನು ನಂಬಿದ ದೂರುದಾರರು ಮತ್ತಷ್ಟು ಹಣ ಪಾವತಿಸಿದರು.
ಅನಂತರ ಅವರ ಖಾತೆಯಿಂದ ಇದೇ ರೀತಿ ಹಂತ ಹಂತವಾಗಿ ನ. 4ರಿಂದ ನ.7ರ ವರೆಗೆ ಒಟ್ಟು 21.51 ಲ.ರೂ. ಹಣ ವರ್ಗಾಯಿಸಿಕೊಳ್ಳಲಾಯಿತು. ಆದರೆ ಅವರಿಗೆ ಹೂಡಿಕೆ ಮಾಡಿದ ಹಣ ಕೂಡ ವಾಪಸ್ ನೀಡದೆ ವಂಚಿಸಲಾಗಿದೆ. ಈ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.