Tragic: ಪೇಯಿಂಟ್‌ ಮಿಕ್ಸ್‌ ಮಾಡುವ ಯಂತ್ರಕ್ಕೆ ಕೂದಲು ಸಿಲುಕಿ ಮಹಿಳೆ ತಲೆ ತುಂಡು!


Team Udayavani, Nov 9, 2023, 10:32 AM IST

tdy-7

ಸಾಂದರ್ಭಿಕ ಚಿತ್ರ

ಬೆಂಗಳೂರು: ಪೇಯಿಂಟ್‌ ಮಿಕ್ಸ್‌ ಮಾಡುವ ಯಂತ್ರಕ್ಕೆ ಕೂದಲು ಸಿಲುಕಿ ಮಹಿಳೆಯ ತಲೆ ತುಂಡಾಗಿರುವ ದಾರುಣ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಮನಗರ ಮೂಲದ ಶ್ವೇತಾ(34) ಮೃತ ಮಹಿಳೆ. ಈ ಸಂಬಂಧ ಆಕೆ ಕೆಲಸ ಮಾಡುತ್ತಿದ್ದ ಶ್ರೀಪೇಯಿಂಟ್ಸ್‌ ಎಂಬ ಕಾರ್ಖಾನೆ ಮಾಲೀಕನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ಹೇಳಿದರು.

ಶ್ವೇತಾ ರಾಮನಗರ ಮೂಲದ ಸುರೇಶ್‌ ಎಂಬುವರನ್ನು ಮದುವೆಯಾಗಿದ್ದು, ದಂಪತಿಗೆ ಒಂದು ಮಗು ಇದೆ. ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದಾರೆ. ಸುರೇಶ್‌ ಗಾರೆ ಕೆಲಸ ಮಾಡಿಕೊಂಡಿದ್ದು, ಶ್ವೇತಾ ನೆಲಗೆದರನಹಳ್ಳಿಯಲ್ಲಿರುವ ಶ್ರೀ ಪೇಯಿಂಟ್ಸ್‌ ಎಂಬ ಸಣ್ಣ ಪೇಯಿಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಪೇಯಿಂಟ್‌ ತಯಾರಿಸಲು ಬಳಸುವ ಕಚ್ಚಾ ವಸ್ತುಗಳನ್ನು ಮಿಕ್ಸ್‌ ಮಾಡುವ ಯಂತ್ರಕ್ಕೆ ಹಾಕಲಾಗಿತ್ತು. ಯಂತ್ರದ ಸ್ವಿಚ್‌ ಆಫ್ ಮಾಡಿ ಪೇಯಿಂಟ್‌ ತೆಗೆದುಕೊಳ್ಳುವ ಬದಲು ಶ್ವೇತಾ, ಹಾಗೆಯೇ ಪೇಯಿಂಟ್‌ ತೆಗೆಯುತ್ತಿದ್ದರು. ಈ ವೇಳೆ ಕೂದಲು ಗ್ರೈಂಡರ್‌ಗೆ ಸಿಲುಕಿಕೊಂಡಿದೆ. ಆಗ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್‌ನ ಸದ್ದಿಗೆ ಯಾರಿಗೂ ಕೇಳಿಸಿಲ್ಲ. ಪರಿಣಾಮ ಗ್ರೈಂಡರ್‌ ತಿರುಗುವಾಗ ಶ್ವೇತಾರ ತಲೆ ತುಂಡಾಗಿದೆ.  ಕೆಲ ಹೊತ್ತಿನ ಬಳಿಕ ಗ್ರೈಂಡರ್‌ ಬಳಿ ಸಹಕಾರ್ಮಿಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ಪೊಲೀಸರು ಮತ್ತು ಕಾರ್ಖಾನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಗ್ರೈಂಡರ್‌ ನಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಶ್ವೇತಾ ಪತಿ ಸುರೇಶ್‌ ನೀಡಿದ ದೂರಿನ ಮೇರೆಗೆ ಶ್ರೀಪೇಯಿಂಟ್ಸ್‌ ಕಾರ್ಖಾನೆ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.