![kambala2](https://www.udayavani.com/wp-content/uploads/2025/02/kambala2-1-415x249.jpg)
![kambala2](https://www.udayavani.com/wp-content/uploads/2025/02/kambala2-1-415x249.jpg)
Team Udayavani, Nov 9, 2023, 4:31 PM IST
ಶಿವಮೊಗ್ಗ: ಪಕ್ಷ ಕಟ್ಟಿದ ಬಿಎಸ್ ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸಲು ಅವರ ವಯಸ್ಸನ್ನು ಬಳಸಿಕೊಂಡಿದ್ದಾರೆ. ಈಗ ಪಕ್ಷ ಕಟ್ಟಲು ಅವರನ್ನು ಬಳಸಿಕೊಳ್ಳುತ್ತಿದ್ದೀರಿ. ಬಿಎಸ್ ವೈ ಮಕ್ಕಳು ಕೂಡ ವಯಸ್ಸಾಗಿಲ್ವಾ ಎಂದು ಕೇಳಲು ಆಗಲ್ಲವೇ? ಅವರ ಶಿಷ್ಯನಾಗಿ ನಾನು ಕೇಳುತ್ತಿದ್ದೇನೆ. ಬಿಎಸ್ವೈ ಗೆ ಮಾಡಿದ ಅವಮಾನವನ್ನು ಇನ್ಯಾರಿಗೂ ಮಾಡಲು ಸಾಧ್ಯವಿಲ್ಲ. ನಂತರ ಬಂದ ಸಿಎಂ ರಿಂದ ರಾಜ್ಯದ ಆಡಳಿತವೇ ಕುಂಟಿ ಹೋಯಿತು ಎಂದು ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಹಿರಿಯ ಜೀವ. ಹಿರಿಯ ಜೀವವನ್ನು ಓಡಾಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ನಿಭಾಯಿಸಲು ಅವರಿಗೆ ವಯಸ್ಸಾಗಿದೆ ಎಂದು ಅಧಿಕಾರದಿಂದ ಕೆಳಗಿಳಿಸಿದರು. ಬಿಎಸ್ ವೈ ಗೆ ವಿಶ್ರಾಂತಿ ಕೊಡಿ ಅವರ ದೇಹದ ಮೇಲೆ ಒತ್ತಡ ಹಾಕಬೇಡಿ ಎಂದರು.
ಬಿಜೆಪಿ ಪಕ್ಷಕ್ಕೆ ನಾಯಕತ್ವದ ಬರ ಬಂದಿದೆ. ಬಿಜೆಪಿಗೆ ಅವರ ಐಡೆಂಟಿಟಿ ಲಾಸ್ ಆಗಿದೆ. ಕಳೆದ ಬಾರಿ ಸದನದಲ್ಲಿ ಬಿಜೆಪಿ ಬಹಿಷ್ಕಾರ ಹಾಕಿ ಹೊರಗೆ ಹೋಗಿದ್ದರು. ಮೊದಲು ನಿಮ್ಮ ಪಕ್ಷದಲ್ಲಿ ಆಂತರಿಕ ಬರೆದ ಸಮಸ್ಯೆ ಸರಿಪಡಿಸಿಕೊಳ್ಳಿ. ವಿಧಾನ ಪರಿಷತ್ ಮತ್ತು ಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನು ಭರ್ತಿ ಮಾಡಿ ಎಂದರು.
ಅಧ್ಯಯನ ನಾಟಕ ನಿಲ್ಲಿಸಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದೆ. 30700 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಫೆಬ್ರವರಿ ನಂತರ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಕೇಂದ್ರ ಸರ್ಕಾರ ರಾಜ್ಯದ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಯಾವುದೇ ರೀತಿಯ ನೆರವು ನೀಡುತ್ತಿಲ್ಲ. 26 ಬಿಜೆಪಿ ಸಂಸದರು ಇದ್ದರೂ ಯಾವುದೇ ರೀತಿಯ ನೆರವು ನೀಡುತ್ತಿಲ್ಲ. ಕೇಂದ್ರ ಸರ್ಕಾರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ. ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂಬ ಭಾವನೆ ಮೂಡಿದೆ. ಕೇಂದ್ರದ ತಂಡ ಬರದ ಅಧ್ಯಯನ ಮಾಡಿದೆ. ಸಾವಿನಲ್ಲಿ ಸಂತಸ ವ್ಯಕ್ತಪಡಿಸಿದ ರೀತಿಯಲ್ಲಿದೆ ಬಿಜೆಪಿ ಬರದ ಅಧ್ಯಯನ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಸದರ ನೇತೃತ್ವದಲ್ಲಿ ಬರದ ಅಧ್ಯಯನ ನಡೆಯುತ್ತಿದೆ. ಅಂದರೆ ಇದುವರೆಗೂ ಸಂಸದರು ಬರದ ಅಧ್ಯಯನ ಮಾಡಿಲ್ಲ ಎಂದರ್ಥ. ಕಾಟಾಚಾರಕ್ಕೆ ಬರಗಾಲದ ಅಧ್ಯಯನ ನಡೆಸಿದ್ದಾರೆ. ರಾಜ್ಯದ ಸಂಸದರು ಕೇಂದ್ರ ಸರ್ಕಾರದಿಂದ ಅತಿ ಹೆಚ್ಚು ಹಣವನ್ನು ತರುವ ಕೆಲಸ ಮಾಡಬೇಕು ಎಂದರು.
ಫೆಬ್ರವರಿ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೇ ಹಿಂದಿನ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವರು ಕಾರಣ. ಜಲಜೀವನ್ ಮಿಷನ್ ಯೋಜನೆಯಡಿ ಅವ್ಯವಹಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯವರೇ ಆದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಕಾರಣ. ನಾಟಕದ ಬರದ ಅಧ್ಯಯನ ನಿಲ್ಲಿಸಿ. ವಿದ್ಯುತ್ ಉತ್ಪಾದನೆಗೆ ಗ್ರೀಡ್ ಗೆ ಎಷ್ಟು ವಿದ್ಯುತ್ ಸೇರ್ಪಡೆ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ 25% ಜಲಜೀವನ್ ಮಿಷನ್ ಯೋಜನೆಯಡಿ ಕೆಲಸವಾಗಿಲ್ಲ
ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಪಾಲ್ಗೊಳ್ಳಬೇಕಾಗಿದ್ದು ಅವರ ಜವಾಬ್ದಾರಿ ಎಂದ ಅವರು, ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.