ವಿಮಾನ ನಿಲ್ದಾಣಕ್ಕೆ ಅಗತ್ಯ ಜಮೀನು: ನಿತೇಶ್
ವಿಮಾನ ನಿಲ್ದಾಣದ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಜಮೀನು ಒದಗಿಸಲಾಗಿದೆ.
Team Udayavani, Nov 9, 2023, 6:13 PM IST
ಬೆಳಗಾವಿ: ಬೆಳಗಾವಿ ವಿಮಾನನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರನ್ ವೇ ಮತ್ತು ಟರ್ಮಿನಲ್ ಜಮೀನು ಅಗತ್ಯತೆ ಹಾಗೂ ಅದರ ಸಮರ್ಪಕ ಬಳಕೆಯ ಕುರಿತು ನೀಲನಕ್ಷೆಯ ಸಮೇತ ಸಮಗ್ರ ವರದಿಯನ್ನು ಸಲ್ಲಿಸಬೇಕು. ಇದನ್ನು ಆಧರಿಸಿ ಅಗತ್ಯತೆ ಅನುಸಾರ ಜಮೀನು ಒದಗಿಸಲಾಗುವುದು ಎಂದರು.
ಭೂ ಸ್ವಾಧೀನಪಡಿಸಿಕೊಳ್ಳುವ ಸಂಬಂಧ ಸ್ಥಳೀಯ ಜನರಿಗೆ ಪರ್ಯಾಯ ರಸ್ತೆ, ಮತ್ತಿತರ ಸೌಕರ್ಯಗಳನ್ನು ಒದಗಿಸುವ ಬಗ್ಗೆ ವಿಮಾನ ನಿಲ್ದಾಣದ ನಿರ್ದೇಶಕರು ಸ್ಪಷ್ಟ ಹಾಗೂ ಲಿಖೀತ ಮಾಹಿತಿಯನ್ನು ಒದಗಿಸಬೇಕು ಎಂದು ಸೂಚಿಸಿದರು.
ವಿಮಾನ ನಿಲ್ದಾಣದ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಜಮೀನು ಒದಗಿಸಲಾಗಿದೆ. ಅದ್ದರಿಂದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆ, ಸಿಗ್ನಲ್ ದೀಪಗಳ ಅಳವಡಿಕೆಗೆ ಅತ್ಯಗತ್ಯವಾಗಿರುವ ಜಮೀನು ಮಾತ್ರ ಒದಗಿಸಲಾಗುವುದು. ಸಾಧ್ಯವಾದಷ್ಟು ಕಾಮಗಾರಿಗಳನ್ನು ಈಗಾಗಲೇ ಒದಗಿಸಲಾಗಿರುವ ಜಮೀನಿನಲ್ಲಿ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ ಭೂಸ್ವಾದೀನ ಪಡಿಸಿಕೊಂಡಿರುವ ಜಮೀನಿನಲ್ಲಿ 14.05 ಎಕರೆ ಜಮೀನು ಏರ್ ಫೋರ್ಸ್ ಸ್ವಾದೀನದಲ್ಲಿರುವುದರಿಂದ ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕರಾದ ತ್ಯಾಗರಾಜನ್ ಅವರು ಮಾತನಾಡಿ, ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಜಮೀನು ಒದಗಿಸುವುದರ ಜತೆಗೆ ಇನ್ನಿತರ ಸೌಕರ್ಯಗಳನ್ನು ಒದಗಿಸಬೇಕು. ಸ್ಥಳೀಯರಿಗೆ ಪರ್ಯಾಯ ರಸ್ತೆ ನಿರ್ಮಾಣ, ಮತ್ತಿತರ ಕಾಮಗಾರಿಗಳಿಗೆ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ್ ದುಡಗುಂಟಿ, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.