Uppinangady: ಲೈಂಗಿಕ ಕಿರುಕುಳ: ಪ್ರಕರಣ ದಾಖಲು
Team Udayavani, Nov 10, 2023, 1:09 AM IST
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದನ್ವಯ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಶಾಲೆಯೊಂದರ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆಯನ್ನು ಆರೋಪಿ ಕುಟ್ಟಿಕಳ ನಿವಾಸಿ ಮುಸ್ತಾಫ ಅವರ ಮಗ ಮುಝಮಿಲ್ (19) ಸಂತ್ರಸ್ತೆಗೆ ಮೊಬೈಲ್ ಫೋನ್ ಸಂದೇಶ ಕಳುಹಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದುದ್ದಲ್ಲದೆ, ಅಕ್ಟೋಬರ್ 10 ರಂದು ನಿನಗೆ ಫ್ಯಾನ್ಸಿ ಐಟಂಗಳನ್ನು ಒದಗಿಸಿಕೊಡುವುದಾಗಿ ತಿಳಿಸಿ ಉಪ್ಪಿನಂಗಡಿಗೆ ಕರೆದುಕೊಂಡು ಹೋಗಿ ಅಲ್ಲಿನ ಕುಮಾರಧಾರಾ ನದಿಯ ಹಳೆ ಸೇತುವೆಯಲ್ಲಿ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಲೈಂಗಿಕ ಹಿಂಸೆ ನೀಡಿರುವುದಾಗಿ ಹಾಗೂ ನ. 6ರಂದು ವಿದ್ಯಾರ್ಥಿನಿಗೆ ಪುನರಪಿ ಮೊಬೈಲ್ ಸಂದೇಶ ಕಳುಹಿಸಿ ಹಿಂಸಿಸುತ್ತಿರುವುದರಿಂದ ವಿದ್ಯಾರ್ಥಿನಿಯು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಆಕೆಯ ತಾಯಿ ಉಪಿನಂಗಡಿಗೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Bantwal: ಕಲ್ಲಡ್ಕ ಫ್ಲೈಓವರ್; ಪೂರ್ಣತೆಯತ್ತ; ಕಾಂಕ್ರೀಟ್ ಕಾಮಗಾರಿ ಪ್ರಗತಿ
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.