Laila: ನಾಗಬನದ ಬಳಿ ದನದ ಕಿವಿ ಸಹಿತ ಚರ್ಮ ಪತ್ತೆ
Team Udayavani, Nov 10, 2023, 1:11 AM IST
ಬೆಳ್ತಂಗಡಿ: ಲಾೖಲ ಗ್ರಾಮದ ಬಜಕ್ರೆಸಾಲು ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದೆ. ಸ್ಥಳೀಯರು ಈ ಜಾಗದಲ್ಲಿ ನಡೆದುಕೊಂಡು ಹೋಗುವಾಗ ಕೆಟ್ಟ ವಾಸನೆ ಬರುತ್ತಿದ್ದು, ಪರಿಶೀಲಿಸಿದಾಗ ಪೊದೆಗಳ ಮಧ್ಯೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿತ್ತು.
ಸಮೀಪದಲ್ಲೇ ನಾಗ ಬನವೊಂದಿದ್ದು ಸ್ಥಳೀಯರು ಪೊಲೀಸ್ ಹಾಗೂ ಗ್ರಾಮ ಪಂಚಾಯತ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.
ಕೆಲವು ದಿನಗಳ ಹಿಂದೆ ಸವಣಾಲು ರಸ್ತೆ ಬದಿ ಚರಂಡಿಯಲ್ಲಿ ಮೂರು ಪ್ಲಾಸ್ಟಿಕ್ ಗೋಣಿಯಲ್ಲಿ ಇದೇ ರೀತಿ ತ್ಯಾಜ್ಯ ಕಂಡುಬಂದಿತ್ತು. ಎಲ್ಲೋ ಗೋ ಮಾಂಸ ಮಾಡಿ ಉಳಿದ ತ್ಯಾಜ್ಯವನ್ನು ಜನ ಸಂಚಾರ ಕಡಿಮೆ ಇರುವ ಸ್ಥಳಗಳಲ್ಲಿ ರಾತ್ರಿ ವೇಳೆ ಬಿಸಾಡುತ್ತಿರುವ ಬಗ್ಗೆ ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.