Udayavani : ಚಿಣ್ಣರ ಬಣ್ಣ – ನಾಳೆ ಅವಿಭಜಿತ ದ.ಕ. ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
Team Udayavani, Nov 10, 2023, 2:03 AM IST
ಉಡುಪಿ: ಉದಯವಾಣಿ ಹಾಗೂ ಆರ್ಟಿಸ್ಟ್ಸ್ ಫೋರಂ ಸಹಯೋಗದಲ್ಲಿ ಅವಿಭಜಿತ ದ.ಕ. ಜಿಲ್ಲಾ ಮಟ್ಟದ ಚಿಣ್ಣರ ಬಣ್ಣ ಚಿತ್ರಕಲಾ ಸ್ಪರ್ಧೆ ನ. 11ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
ಸಬ್‌ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವರು.
ಮೊದಲ ಭಾಗವಾಗಿ ಉಭಯ ಜಿಲ್ಲೆಯ 16 ತಾಲೂಕುಗಳಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ 20 ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳು ಉತ್ಸಾಹದಿಂದ ಪಾಲ್ಗೊಂಡಿದ್ದು ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಗಿಫ್ಟ್ ಹ್ಯಾಂಪರ್‌ಗಳನ್ನು ವಿತರಿಸಲಾಗಿತ್ತು.
ಉಭಯ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ತುಳುಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಂಸ್ಥೆಯ ಎಂಡಿ ಹಾಗೂ ಸಿಇಒ ವಿನೋದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಹುಮಾನ ವಿತರಣೆ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೃಷಿಕ ಅಮೈ ಮಹಾಲಿಂಗ ನಾಯ್ಕ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಹ್ಯಾಂಗ್ಯೋ ಮಾಲಕ ಪ್ರದೀಪ್ ಪೈ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಮಾಡರ್ನ್ ಕಿಚನ್‌ನ ಜನರಲ್ ಮ್ಯಾನೇಜರ್ ಡಾ| ಹರೀಶ ಕಿಣಿಲಕೋಡಿ, ಭಗವತಿ ಕ್ಷೇತ್ರದ ಅಧ್ಯಕ್ಷ ಗಣೇಶ್ ಕುಂಟಲಪಾಡಿ ಅತಿಥಿಗಳಾಗಿ ಭಾಗವಹಿಸುವರು.
ಸ್ಪರ್ಧೆಯ ವಿವರ
ಶನಿವಾರ ಬೆಳಗ್ಗೆ 10ರಿಂದ 12ರ ತನಕ ಮಂಗಳೂರು ಕೊಡಿಯಾಲಬೈಲ್‌ನ ಬೆಸೆಂಟ್ ಸರ್ಕಲ್ ಬಳಿಯ ಭಗವತಿ ಕೂಟಕ್ಕಲ ಆಡಿಟೋರಿಯಂನಲ್ಲಿ ಸ್ಪರ್ಧೆ ನಡೆಯಲಿದೆ. ಎಲ್ಲ ಸ್ಪರ್ಧಾಳುಗಳು 9.30ಕ್ಕೆ ಹಾಜರಿರಬೇಕು.
ಸಬ್ ಜೂನಿಯರ್ ಮತ್ತು ಜೂನಿಯರ್ ವಿಭಾಗದ ಮಕ್ಕಳಿಗೆ ವಿಷಯ ಐಚ್ಛಿಕ. ಆದರೆ ತಾಲೂಕು ಮಟ್ಟದಲ್ಲಿ ಬಿಡಿಸಿದ ಚಿತ್ರವನ್ನು ಮತ್ತೆ ಬಿಡಿಸುವಂತಿಲ್ಲ. ಸೀನಿಯರ್ ವಿಭಾಗದ ಮಕ್ಕಳಿಗೆ ವಿಷಯಗಳನ್ನು ಸ್ಥಳದಲ್ಲಿಯೇ ನೀಡಲಾಗುವುದು. ತರಗತಿಯ ನಿಖರತೆಗಾಗಿ ಬರುವಾಗ ಮಕ್ಕಳ ಶಾಲಾ ಐಡೆಂಟಿಟಿ ಕಾರ್ಡ್ ಅಥವಾ ಶಾಲೆಯ ಮುಖ್ಯಸ್ಥರಿಂದ ಪತ್ರ ತರಬೇಕು.
ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಎಲ್ಲ ವಿಭಾಗಗಳ ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು. ಆಯಾ ತಾಲೂಕು ಮಟ್ಟದಲ್ಲಿ ಸಮಧಾನಕರ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿದ್ಯಾರ್ಥಿಗಳ ಶಾಲೆಗಳಿಗೆ ತಲುಪಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.