![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Nov 10, 2023, 9:46 AM IST
ಕಲಬುರಗಿ: ಆರ್ ಡಿ ಪಾಟೀಲ್ ಗೆ ಕಲಬುರಗಿಯಲ್ಲಿ ಬಾಡಿಗೆಗೆ ಫ್ಲ್ಯಾಟ್ ನೀಡಿರುವ ಕಾರಣಕ್ಕೆ ಮಾಲೀಕ ಮತ್ತು ಮ್ಯಾನೇಜರ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್.ಡಿ.ಪಾಟೀಲ್ ಕಲ್ಬುರ್ಗಿಯ ವರದಾ ಲೇಔಟ್ ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್ ನಲ್ಲಿ ಕಳೆದ ನ.6 ರಂದು ಪರಾರಿಯಾಗಿದ್ದ. ಅದಕ್ಕೂ ಮುನ್ನ ಆತ ಅಲ್ಲಿ ಬಂದು ತಂಗಿದ್ದ.
ಆತನಿಗೆ ಫ್ಲ್ಯಾಟ್ ಬಾಡಿಗೆ ನೀಡುವ ಮುನ್ನ ಸರಿಯಾಗಿ ತಿಳಿಯಬೇಕಿತ್ತು. ಆತ ಪೊಲೀಸರಿಗೆ ಬೇಕಾಗಿರುವ ಪ್ರಮುಖ ಆರೋಪಿಯಾಗಿದ್ದಾನೆ. ಅವನಿಗೆ ನೀವು ಆಶ್ರಯ ನೀಡಿದ್ದಿರಿ ಎನ್ನುವ ಕಾರಣದಿಂದಾಗಿ ಶಹಾಪೂರದ ಶಂಕರ್ ಗೌಡ ಯಾಳವಾರ್, ಆರ್ ಡಿ ಪಾಟೀಲ್ ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಬಂಧನಕ್ಕೊಳಗಾಗಿದ್ದಾರೆ.
ಅದೇ ರೀತಿ ಅಪಾರ್ಟ್ ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್ ಸಹ ಅರೆಸ್ಟ್ ಮಾಡಲಾಗಿದೆ.
ಆರ್ ಡಿ ಪಾಟೀಲ್ ನಿಂದ ಹತ್ತು ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದರು ಎಂದು ಗೊತ್ತಾಗಿದೆ.
ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್ ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾಗ ಆತ, ಇದೇ ಅಪಾರ್ಟ್ ಮೆಂಟ್ ನಲ್ಲೆ ಇದ್ದ. ನವೆಂಬರ್ 5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟ್ ಮೆಂಟ್ ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ.
ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದ. ಇದೆಲ್ಲವೂ ಪಕ್ಕದ ಕಟ್ಟಡದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.