Chikkaballapura; ತಪ್ಪು ಮಾಡಿದ್ದರೆ ಪರಪ್ಪನ ಆಗ್ರಹಾರ ಜೈಲಿಗೆ ಹಾಕಲಿ: ಷಡಕ್ಷರಿ
Team Udayavani, Nov 10, 2023, 2:22 PM IST
ಚಿಕ್ಕಬಳ್ಳಾಪುರ: ನನ್ನ ಮೇಲೆ ಒಂದು ಆರೋಪ ಸಾಬೀತು ಮಾಡಿದರೆ ಸರ್ಕಾರಿ ಸೇವೆಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗುವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಅಧ್ಯಕ್ಷ ಷಡಕ್ಷರಿ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸರ್ಕಾರಿ ನೌಕರ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ಯಾವುದೇ ತಪ್ಪು ಮಾಡಿಲ್ಲ. ಸರ್ಕಾರ ಯಾವುದೇ ತನಿಖೆ ಮಾಡಲಿ. ನಾನು ತಪ್ಪು ಮಾಡಿದ್ದರೆ ಪರಪ್ಪನ ಆಗ್ರಹಾರ ಜೈಲಿಗೆ ಹಾಕಲಿ ಎಂದು ನಾನು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ನಾನು ಯಾವುದಕ್ಕೂ ಹೆದರು ವ್ಯಕ್ತಿ ನಾನಲ್ಲ ಎಂದರು.
ನಾನು ಎಲ್ಲವನ್ನೂ ನೋಡಿ ಬಂದಿದ್ದೇನೆ. ಸರ್ಕಾರ ಕೂಡಲೇ 7ನೇ ವೇತನ ಆಯೋಗದ ವರದಿ ಪಡೆದು ಅನುಷ್ಟಾನಕ್ಕೆ ತರಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು. ಈ ವಿಚಾರದಲ್ಲಿ ಸರ್ಕಾರದ ಮೇಲೆ ಸಂಘ ನಿರಂತರವಾಗಿ ಹೋರಾಟ ಮಾಡಲಿದೆ. ಅನಿವಾರ್ಯ ಆದರೆ ಹೋರಾಟ ಮಾಡುತ್ತೇವೆ. ಈ ವಿಚಾರದಲ್ಲಿ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್, ರಾಜ್ಯ ಪದಾಧಿಕಾರಿಗಳು ಇದ್ದರು. ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.