Udupi ಪದ್ಮಪ್ರಿಯಾ ಪ್ರಕರಣ: ಆರೋಪಿಗೆ ಶಿಕ್ಷೆ
Team Udayavani, Nov 10, 2023, 11:43 PM IST
ಉಡುಪಿ: ಸುಮಾರು 15 ವರ್ಷಗಳ ಹಿಂದಿನ ಪದ್ಮಪ್ರಿಯಾ ನಾಪತ್ತೆ, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿ, ಮೋಸ, ವಂಚನೆ ಆರೋಪದಲ್ಲಿ ಆರೋಪಿ ಅತುಲ್ ಭಟ್‌ಗೆ ಉಡುಪಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿದೆ.
ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯಾ ಅವರು 2008ರ ಜೂ. 10ರಂದು ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ಭಟ್ ಮನೆಯಿಂದ ಪದ್ಮಪ್ರಿಯಾ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಕುಂಜಾರುಗಿರಿ ದಾರಿ ಮಧ್ಯೆ ಕಾರು ನಿಲ್ಲಿಸಿ ಮತ್ತು ಅದರ ಒಳಗೆ ಬಳೆ ಚೂರು, ರಕ್ತದ ಕಲೆ ಮಾಡಿ ಅಪಹರಣದ ನಾಟಕ ಮಾಡಲಾಗಿತ್ತು ಎಂದು ದೂರಲಾಗಿದೆ. ಕಾರನ್ನು ಅಲ್ಲೇ ಬಿಟ್ಟ ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯಾ ಅವರನ್ನು ಕುಮಟಾದವರೆಗೆ ಕರೆದೊಯ್ದಿದ್ದ.
ಕುಮಟಾಕ್ಕೆ ಬಾಡಿಗೆ ಚಾಲಕನನ್ನು ಕರೆಯಿಸಿ ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದ. ಇತ್ತ ಪದ್ಮಪ್ರಿಯಾ ಅವರನ್ನು ಅತುಲ್ ಭಟ್ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸನ್ಸ್‌ಗೆ ಪದ್ಮಪ್ರಿಯಾ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯಾ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಕರೆದುಕೊಂಡು ಹೋಗಿದ್ದ. ಈ ಘಟನೆ ನಡೆಯುವ ಮೊದಲು ದಿಲ್ಲಿಗೆ ಹೋಗಿದ್ದ ಅತುಲ್ ಅಲ್ಲೊಂದು ಬಾಡಿಗೆ ಮನೆ ಪಡೆದಿದ್ದ.
ಜೂ. 10ರಂದು ದಿಲ್ಲಿಗೆ ಹೋಗಿದ್ದ ಅತುಲ್, ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್ ನಲ್ಲಿ ತಂಗಿದ್ದು, ಅಲ್ಲಿಂದ ಜೂ. 12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್ ಜತೆ ಪದ್ಮಪ್ರಿಯಾ ಅವರನ್ನು ಹುಡುಕುವ ನಾಟಕ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ರಘುಪತಿ ಭಟ್ ಅವರು 2008ರ ಜೂ. 19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಒಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಒಡಿ ಪೊಲೀಸರು 2008ರ ಆ. 22ರಂದು ಪ್ರಾರಂಭಿಕ ಮತ್ತು 2009ರ ಜು. 29ರಂದು ಅಂತಿಮ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರುಪಡಿಸಿ ದುರುಪಯೋಗಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು. ಇದರಲ್ಲಿ ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಒಡಿ ಅಧಿಕಾರಿಗಳು ಕೈಬಿಟ್ಟಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು ಒಂದು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ, ಐಪಿಸಿ 417, 465, 471 ಕಾಯಿದೆಯಡಿ ತಲಾ ಆರು ತಿಂಗಳು ಜೈಲು ಹಾಗೂ 5000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸಿಒಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.