Gangolli 43 ಗಂಟೆ ಸಮುದ್ರದಲ್ಲಿ ಈಜಿ, ಬದುಕಿ ಬಂದ ಮೀನುಗಾರ
Team Udayavani, Nov 11, 2023, 12:25 AM IST
ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಸಮುದ್ರಕ್ಕೆ ಆಕಸ್ಮಿಕವಾಗಿ ಬಿದ್ದು, ಸುಮಾರು 43 ಗಂಟೆಗಳ ಕಾಲ ಈಜುತ್ತ ಜೀವನ್ಮರಣ ಹೋರಾಟ ನಡೆಸಿ ಬದುಕಿ ಬಂದ ಘಟನೆ ಬೆಳಕಿಗೆ ಬಂದಿದೆ.
ರವಿವಾರ ಬೀಸಿದ ಗಾಳಿ – ಮಳೆಯ ಅಬ್ಬರಕ್ಕೆ ಕೇರಳದ ಲಿಫ್ಟನ್ ಮೆರಿನ್ ಬೋಟ್ನಿಂದ 25ರ ಹರೆಯದ ತಮಿಳುನಾಡು ಮೂಲದ ವ್ಯಕ್ತಿಯೋರ್ವ ಆಯತಪ್ಪಿ ನೀರಿಗೆ ಬಿದ್ದಿದ್ದರು. ರಕ್ಷಣೆಗೆ ಯಾರೂ ಬಾರದಿದ್ದರೂ ಧೈರ್ಯ ಕಳೆದುಕೊಳ್ಳದ ಅವರು ಸುಮಾರು 43 ಗಂಟೆಗಳ ಕಾಲ ಈಜಾಡುತ್ತ ಕೈ ಮೇಲೆ ಮಾಡುತ್ತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಕೊನೆಗೂ “ಸೀ ಸಾಗರ್’ ಬೋಟಿನ ಮೀನುಗಾರರ ಕಣ್ಣಿಗೆ ಬಿದ್ದರು.
ಬೋಟ್ನಲ್ಲಿದ್ದ ಶ್ರೀಧರ ಖಾರ್ವಿ ಉಪ್ಪುಂದ ಮತ್ತು ಸಂಜೀವ ಖಾರ್ವಿ ಮರವಂತೆ ಅವರು ತತ್ಕ್ಷಣ ಆತನ ಕೈ ಹಿಡಿದು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ಸುಮಾರು 43 ಗಂಟೆ ಸಮುದ್ರದಲ್ಲಿ ಈಜಿ ಸುಸ್ತಾಗಿದ್ದ ಅವರನ್ನು ಮೀನುಗಾರರು ಉಪಚರಿಸಿ ಸಂಬಂಧಪಟ್ಟ ಬೋಟ್ ಮಾಲಕರಿಗೆ ಅವರನ್ನು ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.